ಕ್ವಾರಂಟೈನ್ ಉಲ್ಲಂಘಿಸಿ ಸಾರ್ವಜನಿಕ ಸ್ಥಳಗಳಲ್ಲಿ ಕಂಡುಬಂದರೆ ಎಫ್‍ಐಆರ್: ಮಂಡ್ಯ ಡಿಸಿ ಎಚ್ಚರಿಕೆ

ಮಂಡ್ಯ, ಜೂ.25: ಹೋಂ ಕ್ವಾರಂಟೈನ್‍ನಲ್ಲಿರುವ ವ್ಯಕ್ತಿಗಳು ಬೇಜಬ್ದಾರಿಯಿಂದ ನಿಯಮಗಳನ್ನು ಉಲ್ಲಂಘನೆ ಮಾಡಿ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುತ್ತಿರುವುದು ಕಂಡುಬಂದಲ್ಲಿ ಎಫ್‍ಐಆರ್ ದಾಖಲು ಮಾಡುವುದಾಗಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಎಚ್ಚರಿಸಿದ್ದಾರೆ.
ಜಿಲ್ಲೆಯಲ್ಲಿ ಕೊರೋನಾ ಸೋಂಕು ಹರಡುವಿಕೆಯ ತಡೆಗೆ ಜಿಲ್ಲಾಡಳಿತವು ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು ಇದೀಗ ಹೋಂ ಕ್ವಾರಂಟೈನ್‍ನಲ್ಲಿರುವ ವ್ಯಕ್ತಿಗಳು ಜವಬ್ದಾರಿ ಮರೆತು ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುತ್ತಿರುವುದರಿಂದ ಸೋಂಕು ಹರಡುವಿಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕ್ವಾರಂಟೈನ್ ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿ ಪ್ರಕರಣ ದಾಖಲಿಸಿ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
Next Story





