Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗಿನಲ್ಲಿ ಕೊರೋನ ಸೋಂಕಿತರ ಸಂಖ್ಯೆ...

ಕೊಡಗಿನಲ್ಲಿ ಕೊರೋನ ಸೋಂಕಿತರ ಸಂಖ್ಯೆ 28ಕ್ಕೆ ಏರಿಕೆ: 13 ಕೇಂದ್ರಗಳು ಸೀಲ್ ಡೌನ್

ವಾರ್ತಾಭಾರತಿವಾರ್ತಾಭಾರತಿ25 Jun 2020 11:47 PM IST
share
ಕೊಡಗಿನಲ್ಲಿ ಕೊರೋನ ಸೋಂಕಿತರ ಸಂಖ್ಯೆ 28ಕ್ಕೆ ಏರಿಕೆ: 13 ಕೇಂದ್ರಗಳು ಸೀಲ್ ಡೌನ್

ಮಡಿಕೇರಿ ಜೂ.25: ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಬುಧವಾರ 14 ಮತ್ತು ಗುರುವಾರ 8 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 28ಕ್ಕೆ ಏರಿಕೆಯಾದಂತಾಗಿದ್ದು, ಈ ಪೈಕಿ ಮೂವರು ಗುಣಮುಖರಾಗಿದ್ದಾರೆ. 

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಜಿಲ್ಲೆಯಲ್ಲಿ ಪ್ರಸಕ್ತ 13 ಕೇಂದ್ರಗಳನ್ನು ಸೀಲ್‍ಡೌನ್ ಮಾಡಲಾಗಿದೆ ಎಂದು ತಿಳಿಸಿದರು.

ಕೋವಿಡೇತರ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಿರಿಯ ತಜ್ಞ ವೈದ್ಯರೂ ಸೇರಿದಂತೆ ನಾಲ್ವರು ವೈದ್ಯರು, ಎಲೆಕ್ಟ್ರಿಷಿಯನ್, ಸ್ವಾಗತಕಾರಿಣಿ, ವೈದ್ಯರ ಖಾಸಗಿ ಕ್ಲಿನಿಕ್‍ನ ಸಿಬ್ಬಂದಿ ಸೇರಿದಂತೆ 7 ಮಂದಿಗೆ ಸೋಂಕು ತಗುಲಿರುವುದು ಬುಧವಾರ ಸಂಜೆ ದೃಢಪಟ್ಟಿದೆ. ಇದರೊಂದಿಗೆ ಈಗಾಗಲೇ ಕೋವಿಡ್ ಸಂಬಂಧಿತ ಲಕ್ಷಣಗಳಿಂದ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇಬ್ಬರಲ್ಲಿ ಮತ್ತು ಈ ಹಿಂದೆ ವರದಿಯಾಗಿದ್ದ ರೋಗಿ.9583ರ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ಮೂವರು ಮತ್ತು ರೋಗಿ.9215ರ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ ಇಬ್ಬರಲ್ಲಿ ಸೇರಿದಂತೆ ಒಟ್ಟು 14 ಪ್ರಕರಣಗಳು ವರದಿಯಾಗಿವೆ. ಶಿರಂಗಾಲದ ಹಣ್ಣಿನ ವ್ಯಾಪಾರಿಯ ಸಂಪರ್ಕದಲ್ಲಿದ್ದ ಕಾರ್ ಮೆಕ್ಯಾನಿಕ್ ಸೇರಿದಂತೆ ಇಬ್ಬರಿಗೆ ಸೋಂಕು ಬಂದಿದೆ. ದೊಡ್ಡಳ್ಳಿ ಗ್ರಾಮದ ಮಹಿಳೆಯ ಪತಿ, ಪತಿಯ ಸಹೋದರನಿಗೂ ಸೋಂಕು ತಗುಲಿದೆ ಎಂದು ಮಾಹಿತಿ ನೀಡಿದರು. 

ಗುರುವಾರ ಮತ್ತೆ ಆರು ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 28ಕ್ಕೆ ಏರಿಕೆಯಾದಂತಾಗಿದೆ. ಈ ಪೈಕಿ ಮೂವರು ಗುಣಮುಖರಾಗಿದ್ದು, 23 ಪ್ರಕರಣಗಳು ಸಕ್ರಿಯವಾಗಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಆರು ಪ್ರಕರಣಗಳಲ್ಲಿ ಒಬ್ಬರು ಅಸ್ಸಾಂನಿಂದ ಸೋಮವಾರಪೇಟೆ ತಾಲೂಕಿನ ಮುಳ್ಳೂರು ಗ್ರಾಮಕ್ಕೆ ಬಂದಿರುವ ಸೈನಿಕರಾಗಿದ್ದು, ಉಳಿದ ಇಬ್ಬರು ಸಾಂಸ್ಥಿಕ ಸಂಪರ್ಕ ತಡೆಯಲ್ಲಿದ್ದ ಸೌದಿಯಿಂದ ಬಂದಿರುವ ತಾಯಿ- ಮಗ ಮೂಲತಃ ವೀರಾಜಪೇಟೆಯವರಾಗಿದ್ದರೂ, ಅವರು ಯಾರೊಂದಿಗೂ ಸಂಪರ್ಕ ಹೊಂದಿರಲಿಲ್ಲ.  

ಬಿಟ್ಟಂಗಾಲದಲ್ಲಿ ಹೋಂಸ್ಟೇ ನಡೆಸುತ್ತಿದ್ದ 70 ವರ್ಷದ ಮಹಿಳೆಗೂ ಸೋಂಕು ತಗುಲಿದ್ದು, ಅವರಿಗೆ ಯಾವುದೇ ಪ್ರವಾಸ ಹಿನ್ನೆಲೆಯಿರಲಿಲ್ಲ. ಆದ್ದರಿಂದ ಹೋಂಸ್ಟೇಗೆ ಬಂದಪ ಪ್ರವಾಸಿಗರಿಂದ ಸೋಂಕು ತಗಲಿರುವ ಸಾಧ್ಯತೆಯಿದೆ ಎಂದ ಜಿಲ್ಲಾಧಿಕಾರಿಯವರು, ಕುಶಾಲನಗರದ ಮೆಡಿಕಲ್ ಶಾಪ್ ಮಾಲಕರೊಬ್ಬರ ಮಗನಿಗೂ ಸೋಂಕು ತಗುಲಿದೆ ಎಂದರು.

ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟದ ದಂಪತಿಗೆ ಕೊರೋನ ಸೋಂಕು ದೃಢಪಟ್ಟಿದೆ. 55 ವರ್ಷದ ಪುರುಷ, 48 ವರ್ಷದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದ್ದು, ಈ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ.  

ಸೀಲ್ ಡೌನ್ ಪ್ರದೇಶಗಳು
ಕೋರೋನ ಸೋಂಕು ಪೀಡಿತರು ಇದ್ದ ಮಡಿಕೇರಿಯ ಪುಟಾಣಿ ನಗರ, ಡೈರಿ ಫಾರಂ, ಮಂಗೇರಿರ ಮುತ್ತಣ್ಣ ಸರ್ಕಲ್ ಕೆಳಭಾಗದ ಶ್ರೀ ಓಂಕಾರೇಶ್ವರ  ದೇವಾಲಯ ರಸ್ತೆ, ಕೋಟೆ ಮಾರಿಯಮ್ಮ ದೇವಾಲಯ ರಸ್ತೆ, ಮಡಿಕೇರಿ ತಾಲೂಕಿನ ಕಗ್ಗೋಡ್ಲು, ತಾಳತ್ತಮನೆ, ಕುಶಾಲನಗರದ ರಥಬೀದಿ, ವೀರಾಜಪೇಟೆ ಬಳಿಯ ಬಿಟ್ಟಂಗಾಲ, ಕೊಡ್ಲಿಪೇಟೆ ಬಳಿಯ ಶಿರಂಗಾಲ, ದೊಡ್ಡಳ್ಳಿ, ಮುಳ್ಳೂರು, ಸೋಮವಾರಪೇಟೆಯ ಬಳಗುಂದ ಸೇರಿದಂತೆ 12 ಪ್ರದೇಶಗಳನ್ನು ಸಂಪೂರ್ಣವಾಗಿ 28 ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ಈ ಪ್ರದೇಶಗಳಿಗೆ ತೆರಳುವ ರಸ್ತೆಗಳನ್ನು ಬ್ಯಾರಿಕೇಡ್ ಹಾಕಿ ವಾಹನ, ಜನ ಸಂಚಾರ ನಿಷೇಧಿಸಲಾಗಿದೆ. ಸೀಲ್ ಡೌನ್ ಪ್ರದೇಶಗಳಲ್ಲಿರುವ ಜನ 28 ದಿನಗಳ ಕಾಲ ಹೊರಬರುವಂತಿಲ್ಲ ಮತ್ತು ಅಲ್ಲಿಗೆ ಯಾರೂ ಒಳಹೋಗುವಂತೆಯೂ ಇಲ್ಲ ಎಂದರು. 

ವೈದ್ಯರ ಕೊರತೆಯಿಲ್ಲ 
ಕೋವಿಡ್ ವಾರಿಯರ್ಸ್ ಗಳಾಗಿದ್ದ ವೈದ್ಯರಿಗೇ ಕೊರೋನ ಸೋಂಕು ತಗುಲಿರುವುದರಿಂದ ವೈದ್ಯರ ಕೊರತೆಯಾಗಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅಂತಹ ಪರಿಸ್ಥಿತಿ ಸದ್ಯಕ್ಕೆ ಇಲ್ಲ. ಆದರೂ ಬ್ಯಾಕಪ್ ತಂಡವನ್ನು ಇದೀಗ ಸಿದ್ಧಗೊಳಿಸಲಾಗಿದೆ. ಆಸ್ಪತ್ರೆ, ಹಾಸಿಗೆಯ ಕೊರತೆಯೂ ಇಲ್ಲ. ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಕೊವಿಡ್ ಆಸ್ಪತ್ರೆಯಲ್ಲಿ 250 ಹಾಸಿಗೆಗಳ ವ್ಯವಸ್ಥೆಯಿದೆ. ವೀರಾಜಪೇಟೆ, ಸೋಮವಾರಪೇಟೆ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗುತ್ತದೆ. ಜಿಲ್ಲೆಗೆ ಹೆಚ್ಚುವರಿ ವೈದ್ಯರ ಅಗತ್ಯ ಬಿದ್ದಲ್ಲಿ ಕಳುಹಿಸಿಕೊಡುವಂತೆ ವೈದ್ಯಕೀಯ ಶಿಕ್ಷಣ ಇಲಾಖೆಯನ್ನೂ ಕೋರಲಾಗಿದೆ ಎಂದು ತಿಳಿಸಿದರು. 

24 ಗಂಟೆ ಕಾರ್ಯನಿರ್ವಹಣೆ
ಗಂಟಲ ದ್ರವ ಮಾದರಿ ಪರೀಕ್ಷೆಯ ಪ್ರಯೋಗಾಲಯ ದಿನದ 24 ಗಂಟೆಗಳ ಕಾಲವೂ  ಕಾರ್ಯನಿರ್ವಹಿಸುತ್ತಿದ್ದು, ಅನೇಕರ ವರದಿಗಳು ಬರಲು ಬಾಕಿಯಿದೆ. ಒಂದು ದಿನದಲ್ಲಿ 300-350 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗುತ್ತಿದ್ದು, ಈವರೆಗೂ 6,600 ಗಂಟಲ ದ್ರವ ಮಾದರಿ ಪರೀಕ್ಷೆಗೊಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು. 

ಲಾಕ್‍ಡೌನ್ ಬಗ್ಗೆ ಸರ್ಕಾರ ನಿರ್ಧರಿಸಬೇಕಿದೆ. ಸರಕಾರದ ನಿರ್ದೇಶನದಂತೆ ಜಿಲ್ಲಾಡಳಿತ ಕಾರ್ಯನಿರ್ವಹಿಸುತ್ತಿದೆ. ಕೊಡಗಿನಲ್ಲಿ ರೆಸಾರ್ಟ್, ಹೋಂಸ್ಟೇ, ಲಾಡ್ಜ್‍ಗಳನ್ನು 21 ದಿನ ಮುಚ್ಚಲು ಅಸೋಸಿಯೇಷನ್ ಪ್ರಮುಖರೇ ಸ್ವಯಂಪ್ರೇರಿತರಾಗಿ ನಿರ್ಧರಿಸಿರುವುದು ಸ್ವಾಗತಾರ್ಹವಾಗಿದೆ ಎಂದರು. 

ನಿಯಮ ಉಲ್ಲಂಘಿಸಿದರೆ ಕ್ರಮ
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್ ಮಾತನಾಡಿ, ಸೀಲ್‍ಡೌನ್ ಪ್ರದೇಶಗಳಲ್ಲಿ ಬೆಳಗಿನಿಂದಲೇ ಬ್ಯಾರಿಕೇಡ್ ನಿರ್ಮಿಸಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸಾರ್ವಜನಿಕರು ಸುರಕ್ಷಿತ ಅಂತರ ಕಾಯ್ದುಕೊಳ್ಳುವಂತೆ ಮತ್ತು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಜಾಗೃತಿ ಮೂಡಿಸಲಾಗುತ್ತಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಕ್ಕೂ ಆದೇಶ ನೀಡಲಾಗಿದೆ. ಸೀಲ್‍ಡೌನ್ ಪ್ರದೇಶಗಳು ನಿರ್ಬಂಧಿತ ಪ್ರದೇಶಗಳಾಗಿರುವುದರಿಂದ ಅಲ್ಲಿಂದ ಯಾರೂ ಹೊರ ಬರುವಂತಿಲ್ಲ. ಅಲ್ಲಿಗೆ ಯಾರೂ ಹೋಗುವಂತೆಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್ ಹಾಗೂ ಡಾ.ಮಹೇಶ್ ಗೋಷ್ಠಿಯಲ್ಲಿ ಉಪಸ್ಥಿತರಿದ್ದರು. 

ಸೋಮವಾರಪೇಟೆ ಸಂತೆಗಳು ರದ್ದು
ಸೋಮವಾರಪೇಟೆ ತಾಲೂಕಿನಲ್ಲಿ ಕೊರೋನ ಸೋಂಕಿತರ ಪ್ರಮಾಣ ದಿನೇದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ನಾಲ್ಕು ಸಂತೆಗಳನ್ನು ರದ್ದುಗೊಳಿಸಿ ತಾಲೂಕು ಆಡಳಿತ ಆದೇಶಿಸಿದೆ.

ಕೊರೋನ ಸೋಂಕು ಕಾಣಿಸಿಕೊಂಡಿರುವ ಪ್ರದೇಶಗಳ ಸಮೀಪದ ಸೋಮವಾರಪೇಟೆ, ಕುಶಾಲನಗರ, ಶನಿವಾರಸಂತೆ ಹಾಗೂ ಕೊಡ್ಲಿಪೇಟೆಗಳಲ್ಲಿ ನಡೆಯಬೇಕಾಗಿರುವ ಸಂತೆಗಳನ್ನು ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ಜಿಲ್ಲಾಧಿಕಾರಿಗಳ ಅನುಮತಿ ಪಡೆದು ಮುಂದಿನ ಆದೇಶದವರೆಗೆ ರದ್ದುಪಡಿಸಿರುವುದಾಗಿ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಗೋವಿಂದರಾಜು ತಿಳಿಸಿದ್ದಾರೆ. 

ಮಡಿಕೇರಿ ಸಂತೆ ರದ್ದು
ಪ್ರತಿ ಶುಕ್ರವಾರ ನಡೆಯುವ ಮಡಿಕೇರಿಯ ಸಂತೆಯನ್ನು ಎರಡು ವಾರ ರದ್ದು ಪಡಿಸಲಾಗಿದೆ ಎಂದು ನಗರಸಭೆಯ ಪೌರಾಯುಕ್ತ ಶ್ರೀನಿವಾಸ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X