Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗು: 21 ದಿನ ಪ್ರವಾಸೋದ್ಯಮ ಬಂದ್;...

ಕೊಡಗು: 21 ದಿನ ಪ್ರವಾಸೋದ್ಯಮ ಬಂದ್; ಪ್ರವಾಸಿಗರಿಗೆ ವಾಸ್ತವ್ಯ ಕಲ್ಪಿಸದಿರಲು ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ25 Jun 2020 11:55 PM IST
share

ಮಡಿಕೇರಿ ಜೂ.25: ಕೊಡಗು ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ವಾಸ್ತವ್ಯ ಕಲ್ಪಿಸದಿರಲು ಜಿಲ್ಲಾ ಹೊಟೇಲ್, ರೆಸಾರ್ಟ್ ಹಾಗೂ ಹೋಂಸ್ಟೇ ಮಾಲಕರು ತೀರ್ಮಾನ ಕೈಗೊಂಡಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಜಿಲ್ಲಾ ಹೊಟೇಲ್, ರೆಸಾರ್ಟ್ ಮತ್ತು ರೆಸ್ಟೋರೆಂಟ್ ಎಸೋಸಿಯೇಷನ್ ಅಧ್ಯಕ್ಷ ಬಿ. ಆರ್. ನಾಗೇಂದ್ರ  ಪ್ರಸಾದ್ ಹಾಗೂ ಹೋಂಸ್ಟೇ ಅಸೋಸಿಯೇಷನ್ ಅಧ್ಯಕ್ಷ ಬಿ.ಜಿ.ಅನಂತಶಯನ ಅವರು, ಸರಕಾರ ಪ್ರವಾಸೋದ್ಯಮಕ್ಕೆ ಅವಕಾಶ ಕಲ್ಪಿಸಿದ್ದರೂ, ಜಿಲ್ಲೆಯ ಹಿತದೃಷ್ಟಿಯಿಂದ ಮುಂದಿನ 21 ದಿನಗಳ ಕಾಲ ಪ್ರವಾಸಿಗರಿಗೆ ವಾಸ್ತವ್ಯ ಒದಗಿಸದೇ ಇರಲು ತೀರ್ಮಾನಿಸಿದ್ದು, ಸಂಸ್ಥೆಗಳ ಸದಸ್ಯರು ತೀರ್ಮಾನಕ್ಕೆ ಕೈಜೋಡಿಸುವಂತೆ ಮನವಿ ಮಾಡಿದ್ದಾರೆ.

ಜೂನ್ 8ರಿಂದ ಪ್ರವಾಸೋದ್ಯಮ ಕ್ಷೇತ್ರವನ್ನು ತೆರೆಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಅನುಮತಿ ನೀಡಿದ್ದರೂ, ಜಿಲ್ಲೆಯಲ್ಲಿ ಶೇಕಡಾ 98ರಷ್ಟು ರೆಸಾರ್ಟ್, ವಸತಿ ಗೃಹಗಳು ಹಾಗೂ ಹೋಂಸ್ಟೇಗಳು ಕಾರ್ಯನಿರ್ವಹಿಸದೆ ಜನತೆಯ ಭಾವನೆಗಳಿಗೆ ಬೆಲೆ ಕೊಟ್ಟಿದೆ.  ಕಾನೂನಾತ್ಮಕವಾಗಿ ತಮ್ಮ ವೃತ್ತಿಯನ್ನು ಮುಂದುವರಿಸಬಹುದಾದರೂ ಜಿಲ್ಲೆಯ ಜನತೆಯ ಆರೋಗ್ಯ ಹಾಗೂ ಭಾವನೆಗಳಿಗೆ ಸಂಸ್ಥೆಯ ಪದಾಧಿಕಾರಿಗಳು ಗೌರವ ನೀಡಿ ಮೇಲಿನ ತೀರ್ಮಾನ ಕೈಗೊಂಡಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ನೋಂದಾಯಿತ ಸಂಸ್ಥೆಗಳು ಮುಚ್ಚಲ್ಪಟ್ಟರೂ, ಅನಧಿಕೃತ ಹೋಂಸ್ಟೇ ಹಾಗೂ ವಸತಿಗೃಹಗಳು ಅತಿಥಿಗಳಿಗೆ ವಾಸ್ತವ್ಯ ನೀಡಿದರೆ ಆಯಾ ಊರಿನ ನಾಗರಿಕರು ಜಿಲ್ಲಾಡಳಿತದ ಗಮನ ಸೆಳೆಯುವಂತೆಯೂ ಮನವಿ ಮಾಡಿರುವ ಅವರು, ಪ್ರವಾಸೋದ್ಯಮ ಇಲಾಖೆ ಕೂಡಾ ಈ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಒತ್ತಾಯಿಸಿದ್ದಾರೆ.

ಕೆಲ ದಿನಗಳ ಕಾಲ ಪ್ರವಾಸೋದ್ಯಮ ಕ್ಷೇತ್ರವನ್ನು ಮುಚ್ಚಲು ಶಾಸಕ ಅಪ್ಪಚ್ಚು ರಂಜನ್ ಅವರು ಕೂಡ ದೂರವಾಣಿ ಮೂಲಕ ಮನವಿ ಮಾಡಿದ್ದನ್ನು ಪ್ರಸ್ತಾಪಿಸಿರುವ ಅಸೋಸಿಯೇಷನ್ ಅಧ್ಯಕ್ಷರು, ವಾಸ್ತವ್ಯ ಕೇಂದ್ರಗಳು ಮುಂದಿನ 21 ದಿನಗಳವರೆಗೆ ಮುಚ್ಚಲ್ಪಟ್ಟರೂ ಕೂಡಾ ಸರಕಾರ ಅನುಮತಿ ನೀಡಿರುವ ರೆಸ್ಟೋರೆಂಟ್‍ಗಳು ಸರಕಾರದ ನಿಯಮಗಳನ್ನು ಪಾಲಿಸಿ ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ.

ಸೆಲೂನ್‍ಗಳೂ ಬಂದ್: ಕೊರೋನ ಸೋಂಕು ಹೆಚ್ಚುತ್ತಿರುವುದರ ಹಿನ್ನೆಲೆಯಲ್ಲಿ ಬುಧವಾರದಿಂದ ತಮ್ಮ ಸೆಲೂನ್‍ಗಳನ್ನು ಮುಚ್ಚಲು ಸೋಮವಾರಪೇಟೆ ವ್ಯಾಪ್ತಿಯ ಸವಿತಾ ಸಮಾಜದ ಬಂಧುಗಳು ನಿರ್ಧರಿಸಿದ ಬೆನ್ನಲ್ಲೇ ಇದೀಗ ಮಡಿಕೇರಿ ತಾಲೂಕಿನಾದ್ಯಂತ ಜೂ..30ರವರೆಗೆ ಸೆಲೂನ್‍ಗಳನ್ನು ಬಂದ್ ಮಾಡಲು ಮಡಿಕೇರಿ ತಾಲೂಕು ಸವಿತಾ ಸಮಾಜ ನಿರ್ಧರಿಸಿದೆ.

ಗುರುವಾರ ಈ ತೀರ್ಮಾನ ಕೈಗೊಂಡಿರುವ ತಾಲೂಕು ಸವಿತಾ ಸಮಾಜದ ಪದಾಧಿಕಾರಿಗಳು, ಈ ಅವಧಿಯಲ್ಲಿ ಹೋಂ ಸರ್ವಿಸ್ ಕೂಡಾ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಚೇಂಬರ್ ಮನವಿ: ಈ ನಡುವೆ ನಗರದ ವರ್ತಕರಲ್ಲಿ ಮನವಿ ಮಾಡಿರುವ ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್, ಅಂಗಡಿಗಳಲ್ಲಿ ವಯಸ್ಸಾದವರು ಕೆಲಸಕ್ಕಿದ್ದರೆ ಅವರಿಗೆ ರಜೆ ನೀಡುವಂತೆ ಮನವಿ ಮಾಡಿದೆ. ಅಲ್ಲದೆ ಅಂಗಡಿಗೆ ಹಿರಿಯ ನಾಗರಿಕರು ಬರದಂತೆ ಎಚ್ಚರ ವಹಿಸುವಂತೆಯೂ ಕೋರಿದೆ.
ಅಂಗಡಿಗಳನ್ನು ಸ್ಯಾನಿಟೈಸ್ ಮಾಡಿ ಸ್ವಚ್ಛತೆ ಕಾಪಾಡುವಂತೆ ಹಾಗೂ ಮಾಸ್ಕ್ ಹಾಕದೆ ಅಂಗಡಿಗೆ ಬರುವವರೊಂದಿಗೆ ವ್ಯವಹಾರ ನಡೆಸದಂತೆ ಮತ್ತು ಸುರಕ್ಷಿತ ಅಂತರ ಪಾಲಿಸುವಂತೆಯೂ ಮನವಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X