Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆರೆಸೆಸ್ಸ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ...

ಆರೆಸೆಸ್ಸ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಗೆ ಆರೆಸೆಸ್ಸ್ ಮಾಜಿ ಪ್ರಚಾರಕ ದೂರು

'ಗುರುದಕ್ಷಿಣೆ ಸಮರ್ಪಣೆ' ನೆಪದಲ್ಲಿ ಅಕ್ರಮ ಹಣ ಸಂಗ್ರಹಣೆ ಆರೋಪ

ವಾರ್ತಾಭಾರತಿವಾರ್ತಾಭಾರತಿ26 Jun 2020 6:18 PM IST
share
ಆರೆಸೆಸ್ಸ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಗೆ ಆರೆಸೆಸ್ಸ್ ಮಾಜಿ ಪ್ರಚಾರಕ ದೂರು

ಬೆಂಗಳೂರು, ಜೂ. 26: 'ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸೆಸ್ಸ್) ದೇಶಭಕ್ತಿ, ಧರ್ಮ, ಸಂಸ್ಕೃತಿ, ತ್ಯಾಗ, ಶಿಸ್ತು, ಸೇವೆ, ಸಾಂಸ್ಕೃತಿಕ ಚಟುವಟಿಕೆಗಳ ಹೆಸರಿನಲ್ಲಿ ಸಂಘಟನೆಯಲ್ಲಿ ತೊಡಗಿದ್ದು, ಗುರುಪೂಜೆ, ಗುರುದಕ್ಷಿಣೆಯ ಸಮರ್ಪಣೆ ನೆಪದಲ್ಲಿ ಅಕ್ರಮವಾಗಿ ಹಣ ಸಂಗ್ರಹಣೆ ಮಾಡುತ್ತಿದೆ. ನೋಂದಣಿ ಮಾಡಿಸದೆ, ಖರ್ಚು, ವೆಚ್ಚಗಳ ಲೆಕ್ಕವನ್ನು ಸರಕಾರಕ್ಕೆ ನೀಡದೆ ವಂಚಿಸುತ್ತಿರುವ ಈ ಸಂಘಟನೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು' ಎಂದು ಕೋರಿ ಸರಕಾರದ ಮುಖ್ಯ ಕಾರ್ಯದರ್ಶಿ, ಹೈಕೋರ್ಟಿನ ರಿಜಿಸ್ಟ್ರಾರ್ ಜನರಲ್‍ಗೆ, ಸಾಮಾಜಿಕ ಕಾರ್ಯಕರ್ತ ಹಾಗೂ ಆರೆಸ್ಸೆಸ್ ನ ಮಾಜಿ ಪ್ರಚಾಕರ ಎನ್.ಹನುಮೇಗೌಡ ದೂರು ನೀಡಿದ್ದಾರೆ.

ಎನ್.ಹನುಮೇಗೌಡ

ದೇಶದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನ ಒಪ್ಪಿದರೆ ಮಾತ್ರ ಇಲ್ಲಿ ಹಣ, ಆಸ್ತಿ ಮಾಡುವ ಹಕ್ಕಿದೆ. ಸಂವಿಧಾನ ಒಪ್ಪದ ವ್ಯಕ್ತಿಗೆ ಹಕ್ಕು-ಕರ್ತವ್ಯಗಳನ್ನು, ರಾಷ್ಟ್ರೀಯತೆಯ ಪ್ರಶ್ನೆಯನ್ನು ಎತ್ತುವ ಹಕ್ಕಿಲ್ಲ. ವ್ಯಕಿಯೊಬ್ಬನಿಗೆ ಇಷ್ಟೆಲ್ಲ ಕಾನೂನು ಅನ್ವಯ ಆಗುವ ವೇಳೆ ಲಕ್ಷಾಂತರ ಜನರು ಭಾಗವಹಿಸುವ ಒಂದು ಸಂಘಟನೆಗೆ ಕಾನೂನು ಚೌಕಟ್ಟು ಏಕೆ ಅನ್ವಯ ಆಗುವುದಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

ಆರೆಸ್ಸೆಸ್ ಜುಲೈ ತಿಂಗಳಲ್ಲಿ ಬರುವ ಗುರುಪೂರ್ಣಿಮೆಯ ಹದಿನೈದು ಇಪ್ಪತ್ತು ದಿನ ಮೊದಲೇ ಒಳಾಂಗಣದಲ್ಲಿ ಗುರುಪೂಜೆ ಏರ್ಪಡಿಸಿ ಬಹುತೇಕರಿಂದ ಬೇನಾಮಿ ಹಣವನ್ನು ಗುರುದಕ್ಷಿಣೆ ಸಮರ್ಪಣೆ ಹೆಸರಿನಲ್ಲಿ ಸಂಗ್ರಹಿಸಲಾಗುತ್ತದೆ. ಒಂದು ಅಂದಾಜಿನ ಪ್ರಕಾರ ಬೆಂಗಳೂರು ಒಂದರಲ್ಲೆ ಕನಿಷ್ಟ ವಾರ್ಷಿಕ 2 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಹಣ ಸಂಗ್ರವಾಗುತ್ತದೆ. ಇದರಲ್ಲಿ ಅಧಿಕಾರಿಗಳು ಮತ್ತು ರಾಜಕಾರಣಿಗಳ ಅಕ್ರಮ ಹಣದ ಪಾಲು ಹೆಚ್ಚಿದೆ ಎಂದು ಅವರು ಆರೋಪಿಸಿದ್ದಾರೆ.

ಆರೆಸ್ಸೆಸ್ ಶಾಖೆಗಳಲ್ಲಿ ನಿತ್ಯವೂ ಕಾನೂನಿಗೆ ವಿರುದ್ಧವಾಗಿ ದಂಡ, ಕತ್ತಿ, ಖಡ್ಗಗಳ ಸಹಿತ ಮೆರೆವಣಿಗೆ ನಡೆಸುವುದು, ನಿಷೇಧಿತ ಶಸ್ತ್ರಾಸ್ತ್ರಗಳ ಬಳಕೆ ಮಾಡುವುದು ಏಕೆ ಕಾನೂನಿನ ಅಡಿಯಲ್ಲಿ ಬರುವುದಿಲ್ಲ. ಕೊರೋನ ಸೋಂಕಿನಂತಹ ವಿಪತ್ತಿನ ಸಂದರ್ಭದಲ್ಲಿಯೂ ಏಕೆ ಇವರ ಚಟುವಟಿಕೆಗಳಿಗೆ ನಿರ್ಬಂಧವಿಲ್ಲ. ಆರೆಸ್ಸೆಸ್ ರಾಜ್ಯದಲ್ಲಿ ಎಲ್ಲಿಯೂ ಸ್ವಂತ ಕಚೇರಿಯನ್ನು ಹೊಂದಿಲ್ಲ. ಸದಸ್ಯತ್ವದ ರಿಜಿಸ್ಟಾರ್ ಕೂಡ ಇಲ್ಲ. ಹೀಗಾಗಿ ಹಲ್ಲೆ, ಗಲಭೆಗಳ ಸಂದರ್ಭದಲ್ಲಿ ಯಾರೂ ಸಿಕ್ಕಿಹಾಕಿಕೊಳ್ಳುವುದಿಲ್ಲ. ಇಲ್ಲಿನ ಕಾನೂನು ಗೌರವಿಸದವರನ್ನು ದೇಶಭಕ್ತ ಸಂಘಟಕರು ಅಥವಾ ದೇಶಭಕ್ತರ ಸಂಘಟನೆ ಎಂದು ಏಕೆ ಕರೆಯಬೇಕು ಎಂದು ಹನುಮೇಗೌಡ ದೂರಿನಲ್ಲಿ ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X