ಖಾಸಗಿ ಆಸ್ಪತ್ರೆಗಳಲ್ಲಿನ ಒಂದು ಶಾಖೆ ಕೋವಿಡ್ ಚಿಕಿತ್ಸೆಗೆ ಮೀಸಲು: ಸಚಿವ ಡಾ.ಕೆ.ಸುಧಾಕರ್

Photo: Twitter
ಬೆಂಗಳೂರು, ಜೂ.26: ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಸಂಭವನೀಯ ಕೋವಿಡ್ ಪ್ರಕರಣಗಳ ಹೆಚ್ಚಳವನ್ನು ನಿರ್ವಹಿಸುವ ನಿಟ್ಟಿನಲ್ಲಿ ಸನ್ನದ್ಧವಾಗಿರಲು, ಹೆಚ್ಚಿನ ಶಾಖೆಗಳಿರುವ ಕಾರ್ಪೋರೇಟ್, ಚಾರಿಟೇಬಲ್ ಆಸ್ಪತ್ರೆಗಳಲ್ಲಿ, ನಿಗದಿತ ಹಾಸಿಗೆಗಳು, ಐಸಿಯು, ವೆಂಟಿಲೇಟರ್ ಸೌಲಭ್ಯವಿರುವ ಒಂದು ಶಾಖೆಯನ್ನು ಕೋವಿಡ್ ಚಿಕಿತ್ಸೆಗೆ ಮೀಸಲಿಡಲು ರಾಜ್ಯ ಸರಕಾರ ನಿರ್ದೇಶನ ನೀಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.
Next Story





