Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 1,365 ಕೋಟಿ ರೂ. ವೆಚ್ಚದ ಕ್ರಿಯಾಯೋಜನೆಗೆ...

1,365 ಕೋಟಿ ರೂ. ವೆಚ್ಚದ ಕ್ರಿಯಾಯೋಜನೆಗೆ ಅನುಮೋದನೆ: ಗೋವಿಂದ ಕಾರಜೋಳ

ವಸತಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ

ವಾರ್ತಾಭಾರತಿವಾರ್ತಾಭಾರತಿ26 Jun 2020 6:51 PM IST
share
1,365 ಕೋಟಿ ರೂ. ವೆಚ್ಚದ ಕ್ರಿಯಾಯೋಜನೆಗೆ ಅನುಮೋದನೆ: ಗೋವಿಂದ ಕಾರಜೋಳ

ಬೆಂಗಳೂರು, ಜೂ.26: ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ಶಾಲೆಗಳ ಗುಣಾತ್ಮಕ ಶಿಕ್ಷಣ, ಉತ್ತಮ ನಿರ್ವಹಣೆ, ಕಟ್ಟಡಗಳ ನಿರ್ಮಾಣ ಸೇರಿದಂತೆ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಪೂರಕ ಇತರ ಕಾರ್ಯಚಟುವಟಿಕೆಗಳಿಗೆ ಪ್ರಸಕ್ತ ಸಾಲಿನಲ್ಲಿ 1,365 ಕೋಟಿ ರೂ. ವೆಚ್ಚದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.

ಶುಕ್ರವಾರ ವಿಕಾಸಸೌಧದಲ್ಲಿ ನಡೆದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ 74 ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪ್ರತಿಭಾವಂತ ಸಾಧಕ ವಿದ್ಯಾರ್ಥಿಗಳ ಅನುಭವ ಸಾರವನ್ನು ಒಳಗೊಂಡ 'ಸಮರ್ಥರ ಸಾಧನೆ’, ಭೋದನಾ ಸಾಮಗ್ರಿ, ನೈಜ ಫಲಿತಾಂಶಗಳನ್ನು ಒಳಗೊಂಡ 'ಸಾಧನ ದರ್ಪಣ’ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ ಕಥನ 'ನಮ್ಮ ಪ್ರಯಾಣದ ಹೆಜ್ಜೆಗಳು’ ಪುಸ್ತಕಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ, ಶೈಕ್ಷಣಿಕ ಅಭಿವೃದ್ಧಿಗಾಗಿ ಶಿಕ್ಷಣ ತಜ್ಞ ಡಾ.ಗುರುರಾಜ ಕರಜಗಿ ಇವರನ್ನು ಶೈಕ್ಷಣಿಕ ಸಲಹೆಗಾರರನ್ನಾಗಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಬೆಳ್ಳಿಶೆಟ್ಟಿ ಅವರನ್ನು ಸಮಾಲೋಚಕರನ್ನಾಗಿ ನೇಮಿಸಲಾಗುವುದು ಎಂದು ಅವರು ಹೇಳಿದರು.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಮಳೂರು, ಬಾಗಲಕೋಟೆ ಜಿಲ್ಲೆಯ ಮುಧೋಳ್ ತಾಲೂಕಿನ ಬೆಳಗಲಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕುಂದಾಣದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಬಳ್ಳಾರಿ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಮಾಚಿಹಳ್ಳಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯನ್ನು ಕ್ರೀಡಾ ವಸತಿ ಶಾಲೆಯನ್ನಾಗಿ ಪರಿವರ್ತಿಸಲಾಗುವುದು ಎಂದು ಗೋವಿಂದ ಕಾರಜೋಳ ಪ್ರಕಟಿಸಿದರು.

ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಪಠ್ಯಪುಸ್ತಕಗಳನ್ನು ಒದಗಿಸಲು ಅನುದಾನ ಬಿಡುಗಡೆಗೆ ಅನುಮೋದನೆ ನೀಡಲಾಯಿತು. 12 ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ 6 ರಿಂದ 12 ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ಬೋಧಿಸಲಾಗುತ್ತಿದ್ದು, ಸಿಬಿಎಸ್ ಪಠ್ಯಕ್ರಮವನ್ನು ಅಳವಡಿಸಿಕೊಳ್ಳಲು ಯೋಜಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್,  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗಂಗಾರಾಂ ಬಡೇರಿಯಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ  ಉಮಾಶಂಕರ್, ಎಸ್ಪಿ ಮತ್ತು ಟಿಎಸ್ಪಿ ಯೋಜನೆಯ ಸಲಹೆಗಾರ ಇ.ವೆಂಕಟಯ್ಯ, ವಸತಿ ಸಂಘಗಳ ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ, ಡಿಸಿಎಂ ಅವರ ಆಪ್ತಕಾರ್ಯದರ್ಶಿ ವಿ.ಶ್ರೀನಿವಾಸ, ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮುಖ್ಯಸ್ಥ ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X