ಬೆಂಗಳೂರು: ಮತ್ತೆ ಐವರು ಪೊಲೀಸರಿಗೆ ಕೊರೋನ ಪಾಸಿಟಿವ್

ಸಾಂದರ್ಭಿಕ ಚಿತ್ರ
ಬೆಂಗಳೂರು, ಜೂ.26: ದಿನೇ ದಿನೇ ಪೊಲೀಸರಿಗೆ ಕೊರೋನ ಸೋಂಕು ತಗಲುತ್ತಿರುವ ಪ್ರಕರಣಗಳು ಏರಿಕೆ ಆಗುತ್ತಿದ್ದು, ಶುಕ್ರವಾರವೂ ಐವರು ಪೊಲೀಸರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ವರದಿಯಾಗಿದೆ.
ಇಲ್ಲಿನ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯ ಮಹಿಳಾ ಪಿಎಸ್ಸೈ ಹಾಗೂ ಒಬ್ಬ ಕಾನ್ಸ್ಟೇಬಲ್ಗೆ ಸೋಂಕು ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಒಂದೇ ಠಾಣೆಯಲ್ಲಿ ಇದುವರೆಗೂ ಒಟ್ಟು 8 ಕೊರೋನ ಪ್ರಕರಣಗಳು ದಾಖಲಾಗಿವೆ.
ಅದೇ ರೀತಿ, ಕಲಾಸಿಪಾಳ್ಯ ಠಾಣೆ ಓರ್ವ ಪೊಲೀಸ್ ಸಿಬ್ಬಂದಿಗೆ, ಸಿಸಿಬಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಭದ್ರತಾ ಸಿಬ್ಬಂದಿ ಹಾಗೂ ಚಾಮರಾಜ ಪೇಟೆ ಠಾಣೆಯ ಕಾನ್ಸ್ಟೇಬಲ್ ಓರ್ವರಿಗೆ ಕೊರೋನ ಸೋಂಕು ದೃಢವಾಗಿದ್ದು, ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಠಾಣೆಯಲ್ಲಿ ಕಾನ್ಸ್ಟೇಬಲ್ ಜೊತೆ ಸಂಪರ್ಕದಲ್ಲಿದ್ದ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಿ ಠಾಣೆಯನ್ನು ಸ್ಯಾನಿಟೈಸ್ ಮಾಡಲಾಗಿದೆ.
ನಗರದಲ್ಲಿ ಈವರೆಗೆ ಒಟ್ಟು 121 ಪೊಲೀಸರಿಗೆ ಸೋಂಕು ತಗುಲಿದ್ದು, ಇವರ ಪೈಕಿ 11 ಮಂದಿ ಗುಣಮುಖರಾಗಿದ್ದಾರೆ.
Next Story





