ಜೂ.30: ಕರಾವಳಿ ಮೀನುಗಾರಿಕೆಯ ಸಭೆ
ಮಂಗಳೂರು, ಜೂ.26: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಜೂ.30ರಂದು ಬೆಳಗ್ಗೆ 10:30ಕ್ಕೆ ಮಂಗಳೂರು ಮಹಾನಗರ ಪಾಲಿಕೆ ಮಂಗಳಾ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಸಭೆಯಲ್ಲಿ ಕರಾವಳಿ ಮೀನುಗಾರಿಕೆ ಬಗ್ಗೆ ಹಾಗೂ ಭವಿಷ್ಯದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಕರಾವಳಿ ಭಾಗದ ಶಾಸಕರು, ವಿಷಯ ತಜ್ಞರು, ಮೀನುಗಾರ ಮುಖಂಡರು, ಇಲಾಖೆಯ ನಿವೃತ್ತ ಅಧಿಕಾರಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಲು ನಡೆಯಲಿದೆ ಎಂದು ಮೀನುಗಾರಿಕೆ ಇಲಾಖೆಯ ಪ್ರಕಟನೆ ತಿಳಿಸಿದೆ.
Next Story





