ಗಾಂಜಾ ಸೇವನೆ ಆರೋಪ: ಯುವಕ ಸೆರೆ
ಮಂಗಳೂರು, ಜೂ.26: ಗಾಂಜಾ ಸೇವನೆ ಆರೋಪದಲ್ಲಿ ಯುವಕನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.
ಜಪ್ಪು ಮಹಾಕಾಳಿ ಪಡ್ಪು ನಿವಾಸಿ ಕೌಶಿಕ್ (21) ಬಂಧಿತ ಆರೋಪಿ.
ಈತ ಶುಕ್ರವಾರ ಬೆಳಗ್ಗೆ ಮಹಾಕಾಳಿ ಪಡ್ಪು ಮೈದಾನದಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿದ್ದ. ಯುವಕನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢ ಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮಂಗಳೂರು ದಕ್ಷಿಣ (ಪಾಂಡೇಶ್ವರ) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





