ಕೋಲಾರ ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಮೊದಲ ಬಲಿ
ಸಾಂದರ್ಭಿಕ ಚಿತ್ರ
ಕೋಲಾರ, ಜೂ.26: ಕೋಲಾರ ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಮೊದಲ ಬಲಿಯಾಗಿದ್ದು, ಜಿಲ್ಲೆಯ ಕೆಜಿಎಫ್ ತಾಲೂಕಿನ ತೂಕಲ್ಲು ಗ್ರಾಮದ ರೋಗಿ.8495, 43 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ.
ಕೆಮ್ಮು, ಜ್ವರ ಕಾಣಿಸಿಕೊಂಡ ಹಿನ್ನಲೆ ಕಳೆದ ಒಂದು ವಾರದಿಂದ ಮಹಿಳೆಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಕಳೆದ 10 ದಿನಗಳ ಹಿಂದೆ ದಿಲ್ಲಿಯಿಂದ ತೂಕಲ್ಲು ಗ್ರಾಮಕ್ಕೆ ಮದುವೆಗೆಂದು ಆಗಮಿಸಿದ್ದ ಮಹಿಳೆ ಅನಾರೋಗ್ಯದ ಹಿನ್ನಲೆಯಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.
ನಿನ್ನೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವನ್ನಪ್ಪಿದ್ದಾರೆ ಎಂಬುದನ್ನು ಆರೋಗ್ಯ ಇಲಾಖೆ ಹಾಗೂ ಕೆಜಿಎಫ್ ತಹಶೀಲ್ದಾರ್ ರಮೇಶ್ ಖಚಿತಪಡಿಸಿದ್ದಾರೆ.
Next Story