Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಹ್ಯಾದ್ರಿ ಪ್ರಾಧಿಕಾರ ಕ್ರಿಯಾಯೋಜನೆಗೆ...

ಸಹ್ಯಾದ್ರಿ ಪ್ರಾಧಿಕಾರ ಕ್ರಿಯಾಯೋಜನೆಗೆ 10 ಕೋಟಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ26 Jun 2020 11:38 PM IST
share

ಬೆಂಗಳೂರು, ಜೂ.26: ಪರಿಸರ, ಜಲಾಶಯಗಳು ದೇವಾಲಯ, ಪ್ರವಾಸಿ ತಾಣಗಳು ಸೇರಿದಂತೆ ಪಾರಂಪರಿಕ ಸ್ಥಳಗಳ ಸಂರಕ್ಷಿಸಿ ಪೋಷಿಸಲು ಸ್ಥಾಪನೆಯಾಗಿರುವ ಸಹ್ಯಾದ್ರಿ ಪಾರಂಪರಿಕ ಅಭಿವೃದ್ದಿ ಪ್ರಾಧಿಕಾರದ ಕ್ರಿಯಾಯೋಜನೆಗೆ ರೂ. 10 ಕೋಟಿ ಹಣವನ್ನು ಸರಕಾರ ಬಿಡುಗಡೆ ಮಾಡಿದೆ.

ಸುಮಾರು 10 ವರ್ಷಗಳ ನಂತರಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಗೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಶಾಸಕ ಅರಗ ಜ್ಞಾನೇಂದ್ರ ಹಾಗೂ ಸಹ್ಯಾದ್ರಿ ಪಾರಂಪರಿಕ ಅಭಿವೃದ್ದಿ ಪ್ರಾಧಿಕಾರದ ಸದಸ್ಯರು ಹಾಗೂ ಅಧಿಕಾರಿಗಳು ಹಾಜರಿದ್ದರು.

ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉತ್ತರಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳು, ಉದ್ಯಾನವನ, ಪ್ರವಾಸಿ ತಾಣ, ಜಲಾಶಯಗಳು, ಮ್ಯೂಸಿಯಂ, ವಿವಿಗಳು, ಸ್ಮಾರಕಗಳು ಸೇರಿದಂತೆ ಇತಿಹಾಸ ಪ್ರಸಿದ್ದ ಪಾರಂಪರಿಕ ಸ್ಥಳಗಳನ್ನು ಅಭಿವೃದ್ದಿಪಡಿಸಲು ಕ್ರಿಯಾಯೋಜನೆ ರೂಪಿಸಲಾಯಿತು.

ಪ್ರಾರಂಭಿಕ ಹಂತವಾಗಿ ಈ ಕ್ರಿಯಾಯೋಜನೆಗೆ ರೂ. 10 ಕೋಟಿ ಅನುದಾನವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಸಮ್ಮತಿ ಸೂಚಿಸಿದರು. ಕಳೆದ ಎರಡು ದಶಕಗಳಿಂದ ಪ್ರಾಧಿಕಾರಕ್ಕೆ ಸೂಕ್ತ ಆರ್ಥಿಕ ಸಹಾಯವಿಲ್ಲದೇ ಈ ವ್ಯಾಪ್ತಿಯ ಮೂರು ಜಿಲ್ಲೆಗಳಲ್ಲಿನ ಅನೇಕ ಕಾಮಗಾರಿಗಳು ನನೆಗುದಿಗೆ ಬಿದ್ದಿದ್ದವು ಇದೀಗ ಪ್ರಾಧಿಕಾರ ಆರ್ಥಿಕ ಇತಿಮಿತಿಯೊಳಗೆ ಹಂತಹಂತವಾಗಿ ಕೆಲವು ಸ್ಥಳಗಳನ್ನು ಅಭಿವೃದ್ದಿಪಡಿಸಲು ಯೋಜನೆ ರೂಪಿಸಲಾಗಿದೆ.

ಶಿವಮೊಗ್ಗ ತಾಲೂಕಿನ ಹೊಸಹಳ್ಳಿಯಲ್ಲಿ ಅಧ್ಯಯನ ಕೇಂದ್ರ ಸ್ಥಾಪನೆ 25 ಲಕ್ಷ, ತೀರ್ಥಹಳ್ಳಿ ತಾಲ್ಲೂಕಿನ ನೊಣಬೂರುಗ್ರಾಮ ಪಂಚಾಯತ್ ವ್ಯಾಪ್ತಿಯ ಶರವತಿ ನದಿ ಉಗಮಸ್ಥಾನ ಅಂಬುತೀರ್ಥದ ರಾಮೇಶ್ವರ ದೇವಾಲಯ ಸಮೀಪದಲ್ಲಿ ಸಭಾಭವನ ನಿರ್ಮಾಣ 181 ಲಕ್ಷ, ಅಕ್ಕಮಹಾದೇವಿಯ ಜನ್ಮಸ್ಥಳ ಉಡುತಡಿಯನ್ನು ದೆಹಲಿಯ ಅಕ್ಷರಧಾಮ ಮಾದರಿಯಂತೆ ಆಂಪಿಥೇಟರ್, ಬೆಳಕು ಮತ್ತು ಶಬ್ದ ಮಾದ್ಯಮ ಇತರೆ ಸೌಲಭ್ಯ 300 ಲಕ್ಷ, ಬೇಗೂರಿನಲ್ಲಿ ಬನ್ನಿಮಂಟಪ ನಿರ್ಮಾಣ 50 ಲಕ್ಷ, ಗಂಗಾ ಮೂಲದಲ್ಲಿ ಹುಟ್ಟುವ ತುಂಗಭದ್ರ ಮತ್ತು ನೇತ್ರಾವತಿ ನದಿ ಮೂಲಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ 25 ಲಕ್ಷ, ಮೂಡಗೆರೆ ತಾಲೂಕಿನ ದೇವರ ಮನೆ ಕಾಲಭೈರವೇಶ್ವರ ದೇವಸ್ಥಾನ ಹಾಗೂ ಪುಷ್ಕರಣಿಯ ಜೀವನೋದ್ದಾರಕ್ಕೆ ಲಕ್ಷ ನೀಡಲಾಗಿದೆ.

ಬಲ್ಲಾಳ ರಾಯನದುರ್ಗಕೋಟೆ ಸಂರಕ್ಷಣೆಗೆ 100 ಲಕ್ಷ, ಹಿರೇಮಗಳೂರು ಐತಿಹಾಸಿಕ ಕೋದಂಡರಾಮಸ್ವಾಮಿ ದೇವಸ್ಥಾನ ಮತ್ತು ಪುಷ್ಕರಣಿಯ ಸಮಗ್ರ ಅಭಿವೃದ್ದಿಗೆ 100 ಲಕ್ಷ, ಚಿಕ್ಕಮಗಳೂರು ತಾಲೂಕಿನ ಹೊಯ್ಸಳರ ಉಗಮ ಸ್ಥಾನ ಅಂಗಡಿಯಲ್ಲಿನ ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಅಭಿವೃದ್ದಿಗೆ 50 ಲಕ್ಷ, ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಮಲವಳ್ಳಿಯಲ್ಲಿರುವ ನೈಸರ್ಗಿಕ ಕಲ್ಲುಸಂಕವನ್ನು ಭೂ ವೈಜ್ಞಾನಿಕ ಸ್ಮಾರಕವಾಗಿ ಸಂರಕ್ಷಿಸಲು 25 ಲಕ್ಷ, ಹೈಗುಂದದ ಯಕ್ಷಮೂರ್ತಿಗೆ 25 ಲಕ್ಷ, ಅಂಕೋಲ ತಾಲೂಕಿನ ಬಬ್ರುವಾಡ ಹತ್ತಿರದ ಬುದ್ದನ ಮೂರ್ತಿ ಸಂರಕ್ಷಣೆ 25 ಲಕ್ಷ, ಶಿರಸಿ ತಾಲೂಕಿನ ಗುದ್ದಾಪುರ ಗ್ರಾಮದ ಬಂಗಾರೇಶ್ವರ ದೇವಸ್ಥಾನ ಅಭಿವೃದ್ದಿಗೆ 25 ಲಕ್ಷ, ಯಲ್ಲಾಪುರ ತಾಲೂಕು ವಜ್ರಹಳ್ಳಿ ಗ್ರಾಮದ ಹೊನ್ನಗದ್ದೆಯ ವೀರಭದ್ರೇಶ್ವರ ದೇವಸ್ಥಾನ ಅಭಿವೃದ್ದಿಗೆ 25 ಲಕ್ಷ, ಮುಂಡಗೋಡಿನ ರಾಮಲಿಂಗೇಶ್ವರ ದೇವಸ್ಥಾನಕ್ಕೆ 25 ಲಕ್ಷ ಹಾಗೂ ಹಳಿಯಾಳ ತಾಲೂಕಿನ ಅರ್ಲವಾಡಿ ಗ್ರಾ.ಪಂ.ನ ಸೂರ್ಯನಾರಾಯಣ ದೇವಸ್ಥಾನದ ಅಭಿವೃದ್ದಿಗೆ 25 ಲಕ್ಷ ನಿಗದಿಪಡಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X