ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ಪದಗ್ರಹಣ ಕಾರ್ಯಕ್ರಮ: ಬಂಟ್ವಾಳದಲ್ಲಿ ಪೂರ್ವಭಾವಿ ಸಭೆ
ಬಂಟ್ವಾಳ : ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ 'ಪ್ರತಿಜ್ಞೆ' ಕಾರ್ಯಕ್ರಮದ ಪೂರ್ವಭಾವಿ ಸಭೆಯು ಯುವ ಕಾಂಗ್ರೆಸ್ ಬಂಟ್ವಾಳ ವಿಧಾನಸಭಾ ಸಮಿತಿಯ ವತಿಯಿಂದ ಬಂಟ್ವಾಳ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಮಾಜಿ ಸಚಿವರಾದ ರಮನಾಥ ರೈ ಮತ್ತು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ ಅವರು ಮಾತನಾಡಿ, ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಹೈಲ್ ಕಂದಕ್, ವಿಧಾನಸಭಾ ಸಮಿತಿಯ ಅಧ್ಯಕ್ಷ ಪ್ರಶಾಂತ್ ಕುಲಾಲ್ ಮತ್ತು ವಿಧಾನಸಭಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
Next Story