ಅಗ್ನಿಶಾಮಕ ದಳದ ಹುದ್ದೆಗೆ ಅರ್ಜಿ ಆಹ್ವಾನ
ಮಂಗಳೂರು, ಜೂ.27: ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ 1567 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಗ್ನಿಶಾಮಕ ಠಾಣಾಧಿಕಾರಿಗಳು 36, ಚಾಲಕರು 227, ಚಾಲಕ ತಂತ್ರಜ್ಞರು 82, ಅಗ್ನಿಶಾಮಕರು 1222 ಹುದ್ದೆಗೆ ಜುಲೈ 20ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಇನ್ನಿತರ ಮಾಹಿತಿಯನ್ನು www.ksp.gov.inನಲ್ಲಿ ನೀಡಲಾಗಿದೆ. ಆಸಕ್ತರು ಈ ವೆಬ್ಸೈಟ್ಗೆ ಲಾಗಿನ್ ಆಗಿ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story