Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಭೆಗೆ...

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಭೆಗೆ ಗೈರು: ತುಷಾರ್ ಗಿರಿನಾಥ್‍ಗೆ ಸ್ಪಷ್ಟನೆ ನೀಡಲು ನೋಟಿಸ್

ವಾರ್ತಾಭಾರತಿವಾರ್ತಾಭಾರತಿ28 Jun 2020 12:04 AM IST
share

ಬೆಂಗಳೂರು, ಜೂ.27: ಆಡಳಿತದಲ್ಲಿ ಕನ್ನಡ ಅನುಷ್ಠಾನ ಕುರಿತಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಡೆಸಿದ ಸಭೆಗೆ ಯಾವುದೇ ಮುನ್ಸೂಚನೆ ನೀಡದೆ ಗೈರು ಹಾಜರಾದ ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ ಈ ಕುರಿತಂತೆ ಸ್ಪಷ್ಟೀಕರಣ ನೀಡುವಂತೆ ಸೂಚಿಸಿ ನೋಟಿಸ್ ಜಾರಿ ಮಾಡಿದ್ದಾರೆ.

ಈ ಕುರಿತು ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್‍ಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಕನ್ನಡ ಭಾಷೆಯನ್ನು ಆಡಳಿತದಲ್ಲಿ ಸಮರ್ಥವಾಗಿ ಅನುಷ್ಠಾನಗೊಳಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವನ್ನು ಶಾಸನಾತ್ಮಕವಾಗಿ ರಚಿಸಲಾಗಿದೆ. ಹಾಗೆಯೇ ಕನ್ನಡ ಭಾಷೆ ಅನುಷ್ಠಾನಗೊಳಿಸುವಲ್ಲಿ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಕರ್ನಾಟಕ ಅಭಿವೃದ್ಧಿ ಪ್ರಾಧಿಕಾರ ಕಾಯ್ದೆಯ ಸೆಕ್ಷನ್ 19ರ ಅಡಿ ಅಧಿಕಾರವನ್ನೂ ಕೊಡಲಾಗಿದೆ.

ಪ್ರಾಧಿಕಾರವು ಆಡಳಿತದಲ್ಲಿ ಕನ್ನಡ ಅನುಷ್ಠಾನಗೊಳಿಸುತ್ತಿರುವ ಕುರಿತು ಪರಿಶೀಲಿಸಿಲು ಮತ್ತು ಚರ್ಚಿಸಲು ಇಲಾಖಾವಾರು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತಿದೆ. ತಮಗೂ ಜೂನ್ 20 ರಂದು ಆನ್ಲೈನ್ ಸಭೆಗೆ ಹಾಜರಾಗುವಂತೆ ಕೋರಲಾಗಿತ್ತು. ಪರಿಶೀಲನಾ ಸಭೆಗೆ ಇಲಾಖೆಯ ಎಲ್ಲ ಜವಾಬ್ದಾರಿಯುತ ಅಧಿಕಾರಿಗಳೂ ಹಾಜರಾಗಬೇಕಿತ್ತು. ಆದರೆ ಸಭೆಗೆ ನೋಡಲ್ ಅಧಿಕಾರಿ ಹೊರತುಪಡಿಸಿ ಯಾರೊಬ್ಬರೂ ಹಾಜರಿರಲಿಲ್ಲ. ಯಾವುದೇ ಮುನ್ಸೂಚನೆ ನೀಡದೆ ತಾವು ಸಭೆಗೆ ಗೈರು ಹಾಜರಾಗಿದ್ದೀರಿ. ಪ್ರಾಧಿಕಾರ ನಡೆಸಿದ ಯಾವುದೇ ಇಲಾಖೆಯ ಪರಿಶೀಲನೆ ಸಂದರ್ಭದಲ್ಲಿಯೂ ಇಂತಹ ಬೇಜವಾಬ್ದಾರಿ ಪ್ರದರ್ಶಿಸಿರಲಿಲ್ಲ. ರಾಜ್ಯದ ಋಣದಲ್ಲಿದ್ದೂ ರಾಜ್ಯ ಭಾಷೆಯ ಕುರಿತು ನೀವು ಹೊಂದಿರುವ ದಾಷ್ಟ್ರ್ಯವನ್ನು ಪ್ರಾಧಿಕಾರ ತೀವ್ರವಾಗಿ ಖಂಡಿಸುತ್ತದೆ.

ಸೌಜನ್ಯಕ್ಕೂ ಸಭೆಗೆ ಹಾಜರಾಗದಿರುವುದರ ಬಗ್ಗೆ ಮಾಹಿತಿ ನೀಡದ ನಿಮ್ಮ ನಡವಳಿಕೆಯನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ. ಇಂತಹುದೇ ನಡವಳಿಕೆ ಪುನರಾವರ್ತಿಸಿದರೆ ನಿಮ್ಮ ವಿರುದ್ಧ ಅಗತ್ಯ ಕ್ರಮ ಜರುಗಿಸಲು ಮುಖ್ಯಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗೆ ಕೋರುವುದು ಅನಿವಾರ್ಯವಾಗುತ್ತದೆ. ಹೀಗಾಗಿ ತಾವು ಸ್ಪಷ್ಟೀಕರಣ ನೀಡಬೇಕು ಎಂದು ನಾಗಾಭರಣ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X