ಬೆಂಗಳೂರು: 52 ವರ್ಷ ಮೇಲ್ಪಟ್ಟ ಪೊಲೀಸರಿಗೆ ಮನೆಯಿಂದಲೇ ಕೆಲಸ ನಿರ್ವಹಿಸಲು ಆದೇಶ

ಫೈಲ್ ಫೋಟೋ
ಬೆಂಗಳೂರು, ಜೂ.28: ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಪೊಲೀಸರಿಗೆ ಕೋವಿಡ್-19 ಸೋಂಕು ತಗಲುತ್ತಿರುವ ಪ್ರಕರಣಗಳು ಅಧಿಕಗೊಳ್ಳುತ್ತಿರುವ ಕಾರಣದಿಂದಾಗಿ 50 ವರ್ಷ ಮೇಲ್ಪಟ್ಟ ಪೊಲೀಸರು ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆದೇಶ ಹೊರಡಿಸಿದ್ದಾರೆ.
ಇತ್ತೀಚೆಗೆ 55 ವರ್ಷ ಮೇಲ್ಪಟ್ಟವರು ರಜೆ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿತ್ತು. ಆದರೆ, ಪುನಃ ಆದೇಶವನ್ನು ಬದಲಾಯಿಸಿ 50 ವರ್ಷಕ್ಕಿಂತ ಮೇಲ್ಪಟ್ಟ ಪೊಲೀಸ್ ಸಿಬ್ಬಂದಿ ಮನೆಯಲ್ಲೆ ಕೆಲಸ ಮಾಡುವಂತೆ ಆದೇಶಿಸಲಾಗಿದೆ.
Next Story





