ಬೆಂಗಳೂರು: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ವ್ಯಕ್ತಿಯ ಹತ್ಯೆ

ಬೆಂಗಳೂರು, ಜೂ.28: ವ್ಯಕ್ತಿಯೋರ್ವನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ಇಲ್ಲಿನ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಉತ್ತರ ಪ್ರದೇಶ ಮೂಲದ ರಮೇಶ್ ಕುಮಾರ್ ಖಾತ್ರಿ(45) ಎಂಬಾತ ಕೊಲೆಯಾದ ವ್ಯಕ್ತಿ ಎಂದು ಪೊಲೀಸರು ಗುರುತಿಸಿದ್ದಾರೆ.
ರಮೇಶ್, ನಗರದ ಶ್ರೀರಾಂಪುರದಲ್ಲಿ ಪತ್ನಿ ಜೊತೆ ವಾಸವಾಗಿದ್ದರು. ಬ್ಯಾಟರಾಯನಪುರ ಪೊಲೀಸ್ ಠಾಣೆಯ ಮೈಸೂರು ರಸ್ತೆಯ ಬಳಿ ಶನಿವಾರ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಕೊಲೆಗೈದು ಪರಾರಿಯಾಗಿದ್ದಾರೆ.
ಯಾವ ಉದ್ದೇಶದ ಹಿನ್ನೆಲೆಯಲ್ಲಿ ಕೃತ್ಯ ಎಸಗಿದ್ದಾರೆಂಬ ಬಗ್ಗೆ ತಿಳಿದುಬಂದಿಲ್ಲ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
Next Story





