Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿಲ್ಲೆಯ 23 ಮಂದಿ ಸೇರಿ 40...

ಉಡುಪಿ ಜಿಲ್ಲೆಯ 23 ಮಂದಿ ಸೇರಿ 40 ಮಂದಿಗೆ ಕೊರೋನ ಸೋಂಕು

ವಾರ್ತಾಭಾರತಿವಾರ್ತಾಭಾರತಿ28 Jun 2020 8:20 PM IST
share
ಉಡುಪಿ ಜಿಲ್ಲೆಯ 23 ಮಂದಿ ಸೇರಿ 40 ಮಂದಿಗೆ ಕೊರೋನ ಸೋಂಕು

ಉಡುಪಿ, ಜೂ. 28: ಜಿಲ್ಲೆಯಲ್ಲಿ ರವಿವಾರ ಒಟ್ಟು 40 ಮಂದಿಯಲ್ಲಿ ಕೋವಿಡ್- 19 ಸೋಂಕು ದೃಢಪಟ್ಟಿದೆ. ಇವರೆಲ್ಲರ ಸ್ಯಾಂಪಲ್ ಪರೀಕ್ಷೆ ಪಾಸಿಟಿವ್ ಫಲಿತಾಂಶ ನೀಡಿದ್ದು, ಈ ಮೂಲಕ ಜಿಲ್ಲೆಯಲ್ಲಿ ಇದುವರೆಗೆ ಸೋಂಕು ಪತ್ತೆಯಾದವರ ಒಟ್ಟು ಸಂಖ್ಯೆ 1179ಕ್ಕೇರಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ.

ನೋವೆಲ್ ಕೊರೋನ ವೈರಸ್‌ನ ಇಂದಿನ ವಿಶೇಷವೆಂದರೆ ಉಡುಪಿ ಜಿಲ್ಲೆಯ ಒಟ್ಟು 22 ಮಂದಿ, ಈಗಾಗಲೇ ಸೋಂಕಿತರಾಗಿರುವವರ ಪ್ರಾಥಮಿಕ ಸಂಪರ್ಕಕ್ಕೆ ಸಿಲುಕಿ ಪಾಸಿಟಿವ್ ಬಂದಿರುವುದು. ಇವರಲ್ಲಿ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರೊಬ್ಬರು ಸೇರಿದಂತೆ ಅಲ್ಲಿನ ಒಟ್ಟು ಆರು ಮಂದಿ ಸಿಬ್ಬಂದಿಗಳು ಸೇರಿದ್ದಾರೆ. ಅಲ್ಲದೇ 16 ಮಂದಿ ಕಾಪು ತಾಲೂಕಿನ ಪಡುಬಿದ್ರಿ ಪರಿಸರದವರಾಗಿದ್ದು, ಇವರೆಲ್ಲ ಕೆಲದಿನಗಳ ಹಿಂದೆ ಸೋಂಕಿಗೆ ಪಾಸಿಟಿವ್ ಬಂದ ಮೂವರು ಯುವಕರ ಕುಟುಂಬಿಕರು ಹಾಗೂ ನಿಕಟವರ್ತಿಗಳು.

ಉಳಿದಂತೆ ಇಂದು ಮಹಾರಾಷ್ಟ್ರ- ಮುಂಬೈಗಳಿಂದ ಆಗಮಿಸಿದ 15 ಮಂದಿ, ಬೆಂಗಳೂರಿನಿಂದ ಬಂದ ಇಬ್ಬರು ಪಾಸಿಟಿವ್ ಬಂದವರಲ್ಲಿ ಸೇರಿದ್ದಾರೆ. ಒಬ್ಬರು ಬಾಗಲಕೋಟೆಯಿಂದ ವಾಪಾಸು ಬಂದವರಿಗೂ ಸೋಂಕು ತಗಲಿದೆ. ಒಟ್ಟಾರೆಯಾಗಿ ಇಂದು 18 ಮಂದಿ ಪುರುಷರು, 15 ಮಂದಿ ಮಹಿಳೆಯರು ಹಾಗೂ ಹತ್ತು ವರ್ಷದೊಳಗಿನ ಪ್ರಾಯದ ಆರು ಬಾಲಕಿಯರು ಮತ್ತು ಒಬ್ಬ ಬಾಲಕರಿದ್ದಾರೆ ಎಂದು ಜಿಲ್ಲೆಯ ಇಂದಿನ ಕೊರೋನ ಸ್ಥಿತಿ-ಗತಿಯ ಬಗ್ಗೆ ವೀಡಿಯೋ ಸಂದೇಶದಲ್ಲಿ ವಿವರಿಸಿದ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ.

ಇಂದು ಸ್ಯಾಂಪಲ್ ಪಾಸಿಟಿವ್ ಬಂದವರಲ್ಲಿ ಉಡುಪಿ ತಾಲೂಕಿನ 30 ಮಂದಿ, ಕುಂದಾಪುರ ತಾಲೂಕಿನ ಮೂವರು ಹಾಗೂ ಕಾರ್ಕಳ ತಾಲೂಕಿನ ಏಳು ಮಂದಿ ಸೇರಿದ್ದಾರೆ. ಇವರಲ್ಲಿ ಇಬ್ಬರು ಹಿರಿಯ ನಾಗರಿಕರೂ ಸೇರಿದ್ದಾರೆ.

ಹೆಬ್ರಿಯ ಆರು ಮಂದಿ: ರಾಜ್ಯ ಆರೋಗ್ಯ ಇಲಾಖೆಯ ಕೊರೋನ ಸೋಂಕಿತರ ಪಟ್ಟಿಯಲ್ಲಿ ಇಂದು ಸ್ಥಾನ ಪಡೆದವರಲ್ಲಿ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ಆಯುಷ್ ವೈದ್ಯರು ಸೇರಿದಂತೆ ಒಟ್ಟು ಆರು ಮಂದಿ ಕೊರೋನ ವಾರಿಯರ್ಸ್‌ ಸೇರಿದ್ದಾರೆ. ಇವರಲ್ಲಿ ನರ್ಸ್‌ಗಳು, ಡಿಗ್ರೂಪ್ ಸಿಬ್ಬಂದಿಗಳು ಹಾಗೂ ವಾಹನ ಚಾಲಕರು ಸೇರಿದ್ದಾರೆ.

ಎರಡು ದಿನಗಳ ಮಟ್ಟಿಗೆ ಹೆಬ್ರಿ ಸಿಎಚ್‌ಸಿಯನ್ನು ಸೀಲ್‌ಡೌನ್ ಮಾಡಲಾಗಿದೆ. ಕೇಂದ್ರವನ್ನು 48 ಗಂಟೆಗಳ ಕಾಲ ಬಂದ್ ಮಾಡಿ ಎರಡೆರಡು ಬಾರಿ ಸ್ಯಾನಟೈಸ್ ಮಾಡಿದ ಬಳಿಕ ಪುನಹ ತೆರೆಯಲಾಗುತ್ತದೆ. ಸಾಲಿಗ್ರಾಮ ಸಮೀಪದ ಕಾರ್ಕಡದಲ್ಲಿರುವ ವೈದ್ಯೆಯ ಮನೆಯನ್ನು ಸಹ ಸೀಲ್‌ಡೌನ್ ಮಾಡಲಾಗಿದೆ. ಎಲ್ಲರನ್ನೂ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಡಿಎಚ್‌ಓ ಡಾ.ಸೂಡ ತಿಳಿಸಿದರು.

ಪ್ರಾಥಮಿಕ ಸಂಪರ್ಕಿತರು 16 ಮಂದಿ : ಇಂದು ಪಾಸಿಟಿವ್ ಬಂದವರಲ್ಲಿ ಪಡುಬಿದ್ರಿ ನಡ್ಸಾಲು ಗ್ರಾಮದ ಕನ್ನಂಗಾರಿನ ಐವರು ಹಾಗೂ ಹೆಜಮಾಡಿ ಕೋಡಿಯ 11 ಮಂದಿಗೆ ಈಗಾಗಲೇ ಪಾಸಿಟಿವ್ ಬಂದಿರುವ ಕನ್ನಂಗಾರಿನ 42 ಮತ್ತು 37ರ ಹರೆಯದ ಸಹೋದರರು ಹಾಗೂ ಕೇರಳದ ಕೊಚ್ಚಿನ್‌ನಿಂದ ಬಂದ ಹೆಜಮಾಡಿ ಕೋಡಿಯ ಯುವಕನ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗಲಿದೆ ಎಂದು ಡಾ.ಸೂಡ ಹೇಳಿದರು.

ಈ ಸೋಂಕಿತರಲ್ಲಿ ಹಿರಿಯ ನಾಗರಿಕರು, ಮಹಿಳೆಯರು ಹಾಗೂ ಪುಟ್ಟ ಮಕ್ಕಳು ಸಹ ಸೇರಿದ್ದಾರೆ. ಇವರಲ್ಲಿ ಹೆಚ್ಚಿನವರು ಅವರವರ ಕುಟುಂಬದ ಸದಸ್ಯರು ಮತ್ತು ಸಂಬಂಧಿಕರಾಗಿದ್ದಾರೆ ಎಂದು ಅವರು ತಿಳಿಸಿದರು.

ಆರು ಮಂದಿ ಬಿಡುಗಡೆ: ಜಿಲ್ಲೆಯಲ್ಲಿ ಚಿಕಿತ್ಸೆಯ ಬಳಿಕ ಗುಣಮುಖರಾದ ಆರು ಮಂದಿ ಇಂದು ಉಡುಪಿ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಗೊಂಡಿದ್ದಾರೆ. ಇದರಿಂದ ಬಿಡುಗಡೆಗೊಂಡವರ ಒಟ್ಟು ಸಂಖ್ಯೆ 1053ಕ್ಕೇರಿದೆ. ಇನ್ನು ಕೇವಲ 124 ಮಂದಿ ಮಾತ್ರ ಜಿಲ್ಲೆಯಲ್ಲಿ ಕೋವಿಡ್-19ಕ್ಕಾಗಿ ಚಿಕಿತ್ಸೆಯಲ್ಲಿದ್ದಾರೆ ಎಂದವರು ಹೇಳಿದರು.

ಈ ಮಧ್ಯೆ ಕಳೆದ ಎರಡು ದಿನಗಳಿಂದ ನಗರದ ಡಾ.ಟಿಎಂಎ ಪೈ ಕೋವಿಡ್ ಆಸ್ಪತ್ರೆಯ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇಬ್ಬರು ಹಿರಿಯ ನಾಗರಿಕರ ಸ್ಥಿತಿ ಇನ್ನೂ ಗಂಭೀರವಿದ್ದು, ಇಬ್ಬರು ಈಗಲೂ ವೆಂಟಿಲೇಟರ್‌ನಲ್ಲೇ ಚಿಕಿತ್ಸೆ ಪಡೆಯುತಿದ್ದಾರೆ ಎಂದು ಡಿಎಚ್‌ಓ ವಿವರಿಸಿದರು.

ಇಂದು ಬಂದ 40 ಪಾಸಿಟಿವ್‌ಗಳೊಂದಿಗೆ ಉಡುಪಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಈಗ 1179ಕ್ಕೇರಿದೆ. ಉಡುಪಿ ಜಿಲ್ಲೆ ಈಗಲೂ ಬೆಂಗಳೂರು ನಗರ (3314) ಹಾಗೂ ಕಲಬುರಗಿ (1398) ಬಳಿಕ ಮೂರನೇ ಸ್ಥಾನದಲ್ಲಿ ಮುಂದುವರಿದಿದೆ. ಯಾದಗಿರಿ 930 ಮತ್ತು ಬಳ್ಳಾರಿ 697 ಕೇಸುಗಳೊಂದಿಗೆ ನಾಲ್ಕು ಮತ್ತು ಐದನೇ ಸ್ಥಾನದಲ್ಲಿವೆ. ಪಕ್ಕದ ದಕ್ಷಿಣ ಕನ್ನಡ 665 ಪ್ರಕರಣಗ ಳೊಂದಿಗೆ ಆರನೇ ಸ್ಥಾನಕ್ಕೇರಿದೆ.

132 ನೆಗೆಟಿವ್: ರವಿವಾರ 132 ಮಂದಿಯ ಗಂಟಲುದ್ರವದ ಮಾದರಿ ನೆಗೆಟಿವ್ ಆಗಿ ಬಂದಿವೆ. ಅಲ್ಲದೇ ಇಂದು ಇನ್ನೂ ಒಟ್ಟು 106 ಮಂದಿಯ ಗಂಟಲು ದ್ರವದ ಸ್ಯಾಂಪಲ್‌ಗಳನ್ನು ಸೋಂಕಿನ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಇದರಲ್ಲಿ ಕೋವಿಡ್ ಶಂಕಿತರು 26 ಮಂದಿ, ಕೋವಿಡ್ ಸಂಪರ್ಕಿತರು 30, ಉಸಿರಾಟ ತೊಂದರೆಯ ನಾಲ್ವರು, ಶೀತಜ್ವರದಿಂದ ಬಳಲುವ 21 ಹಾಗೂ ಕೋವಿಡ್ ಹಾಟ್‌ಸ್ಪಾಟ್‌ಗಳಿಂದ ಬಂದ 25 ಮಂದಿಯ ಸ್ಯಾಂಪಲ್‌ಗಳು ಸೇರಿವೆ.

ಇದರಿಂದ ಜಿಲ್ಲೆಯಲ್ಲಿ ಈವರೆಗೆ ಸಂಗ್ರಹಿಸಿದ ಮಾದರಿಗಳ ಒಟ್ಟು ಸಂಖ್ಯೆ 14,233ಕ್ಕೇರಿದೆ. ಇವುಗಳಲ್ಲಿ ಈವರೆಗೆ 12,788 ನೆಗೆಟಿವ್, 1179 ಪಾಸಿಟಿವ್ ಆಗಿವೆ. ಇನ್ನು ಒಟ್ಟು 266 ಸ್ಯಾಂಪಲ್‌ಗಳ ಪರೀಕ್ಷಾ ವರದಿ ಬರಬೇಕಿದೆ. ರವಿವಾರ 8 ಮಂದಿಯನ್ನು ಐಸೋಲೇಷನ್ ವಾರ್ಡ್‌ಗೆ ದಾಖಲಿಸಲಾಗಿದೆ. ಇವರಲ್ಲಿ ಉಸಿರಾಟ ತೊಂದರೆಯವರು ಮೂವರು ಹಾಗೂ ಶೀತಜ್ವರದಿಂ ಬಳಲುವ ಐದು ಮಂದಿ ಸೇರಿದ್ದಾರೆ.

ಜಿಲ್ಲೆಯ ಆಸ್ಪತ್ರೆಗಳ ಐಸೋಲೇಶನ್ ವಾರ್ಡ್‌ಗಳಿಂದ ಇಂದು 10 ಮಂದಿ ಬಿಡುಗಡೆಗೊಂಡಿದ್ದು, 73 ಮಂದಿ ಇನ್ನೂ ವೈದ್ಯರ ನಿಗಾದಲ್ಲಿ ಚಿಕಿತ್ಸೆ ಪಡೆಯು ತಿದ್ದಾರೆ. ಇಂದು ಕೊರೋನ ಸೋಂಕಿನ ಗುಣಲಕ್ಷಣದ 41 ಮಂದಿ ಸೇರಿದಂತೆ ಒಟ್ಟು 5827 ಮಂದಿಯನ್ನು ಕೊರೋನ ತಪಾಸಣೆ ಗಾಗಿ ನೊಂದಾಯಿಸಿ ಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಈಗ 722 ಮಂದಿ ಹೋಮ್ ಕ್ವಾರಂಟೈನ್ ನಲ್ಲಿದ್ದಾರೆ ಎಂದು ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದರು.

ಎಸೆಸೆಲ್ಸಿ ವಿದ್ಯಾರ್ಥಿನಿ ಪಾಸಿಟಿವ್: ಡಿಸಿ

ಇಂದು ಜಿಲ್ಲೆಯಲ್ಲಿ ಪಾಸಿಟಿವ್ ಬಂದ 40 ಮಂದಿಯಲ್ಲಿ ಈ ಬಾರಿ ಎಸೆಸೆಲ್ಸಿ ಪರೀಕ್ಷೆ ಬರೆಯುತ್ತಿರುವ ಒಬ್ಬ ವಿದ್ಯಾರ್ಥಿನಿಯೂ ಸೇರಿದ್ದಾರೆ. ಕಾಪು ತಾಲೂಕಿನ ಈ ವಿದ್ಯಾರ್ಥಿನಿ ಈಗಾಗಲೇ ದ್ವಿತೀಯ ಭಾಷೆ ಹಾಗೂ ಗಣಿತ ಪರೀಕ್ಷೆ ಬರೆದಿದ್ದು, ನಾಳೆ ವಿಜ್ಞಾನ ಪರೀಕ್ಷೆ ಬರೆಯಬೇಕಿತ್ತು. ಆದರೆ ಇಂದು ಆಕೆಯ ಮಾದರಿ ಪರೀಕ್ಷೆ ಪಾಸಿಟಿವ್ ಬಂದಿರುವುದರಿಂದ ಅವರು ಇನ್ನು ಈ ಬಾರಿ ಪರೀಕ್ಷೆ ಬರೆಯುವಂತಿಲ್ಲ. ಮುಂದಿನ ಸಪ್ಲಿಮೆಂಟರಿ ಪರೀಕ್ಷೆಯಲ್ಲಿ ಅವರು ಉಳಿದ ನಾಲ್ಕು ವಿಷಯವನ್ನು ಬರೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದರು.

ಶನಿವಾರ ಗಣಿತ ಪರೀಕ್ಷೆಯನ್ನು ಬರೆದ ಬಳಿಕ ಆಕೆಯ ಗಂಟಲುದ್ರವದ ಮಾದರಿಯನ್ನು ಪರೀಕ್ಷೆಗಾಗಿ ಪಡೆಯಲಾಗಿತ್ತು. ಇಂದು ಅದು ಪಾಸಿಟಿವ್ ಫಲಿತಾಂಶವನ್ನು ನೀಡಿದೆ. ನಿನ್ನೆ ಅವರ ಮನೆಯ ಇಬ್ಬರು ಸದಸ್ಯರಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯ ಮಾದರಿಯನ್ನು ಸಹ ಪರೀಕ್ಷೆಗಾಗಿ ಪಡೆಯಲಾಗಿತ್ತು ಎಂದವರು ನುಡಿದರು.

ಬಹಳ ಮುಖ್ಯವಾಗಿ ನಿನ್ನೆಯೇ ಆ ಪರೀಕ್ಷಾ ಕೇಂದ್ರವನ್ನು ಸ್ಯಾನಿಟೈಸ್ ಮಾಡಿದ್ದೇವೆ. ಆಕೆ ಪರೀಕ್ಷೆ ಬರೆದ ರೂಮನ್ನು ಇನ್ನು ಮುಂದೆ ಬಳಸಿಕೊಳ್ಳದಂತೆ ಸೂಚನೆ ನೀಡಿದ್ದೇವೆ. ಹಾಗೂ ಉಳಿದ ಪರೀಕ್ಷೆಗಳಿಗೆ ಬದಲಿ ರೂಮನ್ನು ಬಳಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದೂ ಜಿ.ಜಗದೀಶ್ ತಿಳಿಸಿದರು.

ಪರೀಕ್ಷಾ ಕೇಂದ್ರದಲ್ಲಿ ಸುರಕ್ಷಿತ ಅಂತರ, ಸ್ಯಾನಟೈಸರ್‌ನ ಬಳಕೆ ಸೇರಿದಂತೆ ಎಲ್ಲಾ ಕೊರೋನ ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಿ ಕೊಂಡಿರುವುದರಿಂದ ಆಕೆಯೊಂದಿಗೆ ಪರೀಕ್ಷೆ ಬರೆದ ಉಳಿದ ವಿದ್ಯಾರ್ಥಿಗಳನ್ನು ಪರೀಕ್ಷೆಗೊಳಪಡಿಸುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X