ಮೌಲ್ಯಮಾಪನಕ್ಕೆ ಗೈರಾಗುವ ಉಪನ್ಯಾಸಕರ ವೇತನಕ್ಕೆ ತಡೆ: ಪದವಿ ಪೂರ್ವ ಶಿಕ್ಷಣ ಇಲಾಖೆ ಎಚ್ಚರಿಕೆ
ಬೆಂಗಳೂರು, ಜೂ.28: ಪದವಿಪೂರ್ವ ಕಾಲೇಜು ಉಪನ್ಯಾಸಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಮೌಲ್ಯಮಾಪನಕ್ಕೆ ಹಾಜರಾಗದ ಉಪನ್ಯಾಸಕರ ಜೂನ್ ತಿಂಗಳ ವೇತನವನ್ನು ತಡೆಹಿಡಿಯಲಾಗುವುದು ಎಂದು ಎಚ್ಚರಿಕೆ ನೀಡಿದೆ.
ಕೊರೋನ ಲಾಕ್‍ಡೌನ್ ನಿಂದಾಗಿ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆಯನ್ನು ಜೂನ್ 18ರಂದು ನಡೆಸಲಾಗಿದೆ. ಈಗಾಗಲೇ ದ್ವಿತೀಯ ಪಿಯುಸಿಯ ಎಲ್ಲ ವಿಷಯಗಳ ಪರೀಕ್ಷೆ ಪೂರ್ಣಗೊಂಡಿದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭವಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ ಹಾಜರಾಗದಿದ್ದರೆ ಅಂತಹ ಉಪನ್ಯಾಸಕರ ಒಂದು ವರ್ಷದ ವಾರ್ಷಿಕ ವೇತನದ ಜೊತೆಗೆ ಬಡ್ಡಿಯನ್ನು ಕಡಿತಗೊಳಿಸುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.
Next Story





