Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಇಂಧನ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್...

ಇಂಧನ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಪ್ರಧಾನಿ-ಕೇಂದ್ರ ಸರಕಾರದ ವಿರುದ್ಧ ಕೈ ನಾಯಕರ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ29 Jun 2020 6:38 PM IST
share
ಇಂಧನ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಪ್ರಧಾನಿ-ಕೇಂದ್ರ ಸರಕಾರದ ವಿರುದ್ಧ ಕೈ ನಾಯಕರ ವಾಗ್ದಾಳಿ

ಬೆಂಗಳೂರು, ಜೂ.29: ಅಂತರ್ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿದ್ದರೂ ದೇಶದಲ್ಲಿ ಪೆಟ್ರೋಲ್-ಡಿಸೇಲ್ ಬೆಲೆಯನ್ನು ಪ್ರತಿದಿನ ಏರಿಕೆ ಮಾಡುತ್ತಿರುವ ಕೇಂದ್ರ ಸರಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಪ್ರತಿಭಟನೆ ನಡೆಸಿತು.

ನಗರದ ಇನ್‍ಫೆಂಟ್ರಿ ರಸ್ತೆಯಲ್ಲಿರುವ ಆದಾಯ ತೆರಿಗೆ ಇಲಾಖೆ ಕಚೇರಿ ಎದುರು ನಡೆಸಿದ ಪ್ರತಿಭಟನೆ ಹಾಗೂ ಸೈಕಲ್ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪೆಟ್ರೋಲ್, ಡೀಸೆಲ್ ದರವನ್ನು ನಿರಂತರವಾಗಿ ಏರಿಕೆ ಮಾಡುತ್ತಿರುವ ಕೇಂದ್ರ ಸರಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಮನುಷ್ಯತ್ವವೆ ಇಲ್ಲ. ಅವರದ್ದು ರಾಕ್ಷಸಿ ಪ್ರವೃತ್ತಿ ಎಂದು ಕಿಡಿಗಾರಿದರು.

ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ತೈಲ ದರವನ್ನು ಕೊಂಚ ಏರಿಸಿದ್ದರೂ ಬಿಜೆಪಿಯವರು ತಲೆಯ ಮೇಲೆ ಗ್ಯಾಸ್ ಸಿಲಿಂಡರ್ ಗಳನ್ನು ಹೊತ್ತು ಬೀದಿಗೆ ಇಳಿಯುತ್ತಿದ್ದರು. ಇದೀಗ ಪೆಟ್ರೋಲ್, ಡೀಸೆಲ್ ದರ ಗಗನ ಮುಟ್ಟಿದೆ ಆದರೂ ಬಿಜೆಪಿಯವರೇಕೆ ಮಾತನಾಡುತ್ತಿಲ್ಲ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ್ ದರವನ್ನು ಏರಿಸಿ ಜನ ಸಾಮಾನ್ಯರಿಗೆ ತೊಂದರೆ ಕೊಡಬಾರದು ಎಂದು ಮನಮೋಹನ್ ಸಿಂಗ್ ಸಬ್ಸಿಡಿ ನೀಡುತ್ತಿದ್ದರು. ಆದರೆ, ನರೇಂದ್ರ ಮೋದಿಗೆ ಜನತೆಯ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಜನರನ್ನು ಸುಲಿಗೆ ಮಾಡುವ ಜನ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.

ಕಳೆದ 22 ದಿನಗಳಿಂದ ಪೆಟ್ರೋಲ್, ಡೀಸೆಲ್ ದರ ನಿರಂತರವಾಗಿ ಏರಿಕೆಯಾಗುತ್ತಿದೆ. ಕೊರೋನ ಪರಿಣಾಮ ಉದ್ಯೋಗ ಇಲ್ಲದೆ ಪರದಾಡುತ್ತಿರುವ ಮಧ್ಯಮ ವರ್ಗದ ಜನತೆ ಹಾಗೂ ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ಕಂಗಾಲಾಗಿರುವ ರೈತರು ಇದರಿಂದ ಭಾರಿ ಹೊಡೆತ ಅನುಭವಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಅಂತರ್ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಬ್ಯಾರಲ್‍ಗೆ 130 ಡಾಲರ್ ನಂತೆ ಮಾರಾಟವಾಗುತ್ತಿದ್ದಾಗಲೇ ಅಂದಿನ ಯುಪಿಎ ಸರಕಾರ ದರ ಏರಿಕೆಯನ್ನು ಈ ಪ್ರಮಾಣದಲ್ಲಿ ಮಾಡಿರಲಿಲ್ಲ. ಹೀಗಾಗಿ ಮೋದಿ ತಮ್ಮ ಬೆನ್ನು ತಾವೇ ನೋಡಿಕೊಳ್ಳಬೇಕು. ಕಚ್ಛಾ ತೈಲ ದರ ಇದೀಗ ಬ್ಯಾರಲ್‍ಗೆ 20-30 ಡಾಲರ್ ನಂತೆ ಮಾರಾಟವಾಗುತ್ತಿದೆ. ಹೀಗಿರುವಾಗ ಪೆಟ್ರೋಲ್, ಡೀಸೆಲ್ ಲೀಟರ್ ಗೆ 25-30 ರೂ. ಪ್ರಕಾರ ಮಾರಾಟವಾಗಬೇಕಿತ್ತು. ಅಬಕಾರಿ ಸುಂಕವನ್ನು ಕೇಂದ್ರ ಸರಕಾರ ಯದ್ವಾತದ್ವ ಏರಿಕೆ ಮಾಡುವ ಮೂಲಕ 18 ಲಕ್ಷ ಕೋಟಿ ರೂ.ಗಳನ್ನು ಸಂಗ್ರಹ ಮಾಡಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವವವರು ಮಾನವೀಯತೆಯನ್ನೇ ಮರೆತು ಹೋಗಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿ ಕಾರಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ದೇಶದ ಸಾಮಾನ್ಯ ಜನರು, ರೈತರನ್ನು ರಕ್ಷಿಸಲು ನಡೆಸುತ್ತಿರುವ ಹೋರಾಟ ಇದು. ಅಧಿಕಾರ ಬರುತ್ತದೆ ಹೋಗುತ್ತದೆ. ಕಾಂಗ್ರೆಸ್‍ಗೆ ಅಧಿಕಾರಕ್ಕಿಂತ ಜನರ ಹಿತ ಮುಖ್ಯ. ಸ್ವಾತಂತ್ರ್ಯ ಬಂದ ನಂತರ ಡೀಸೆಲ್ ಬೆಲೆಗಿಂತ ಪೆಟ್ರೋಲ್ ಬೆಲೆ ಸುಮಾರು ಶೇ.30 ರಷ್ಟು ಹೆಚ್ಚಿನ ಅಂತರ ಇರುತ್ತಿತ್ತು. ಆದರೆ ಈಗ ಪೆಟ್ರೋಲ್ ಬೆಲೆಗಿಂತ ಡೀಸೆಲ್ ಬೆಲೆ ಏರಿಕೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಇತಿಹಾಸ ಬರೆದಿದ್ದಾರೆ ಎಂದು ಹೇಳಿದರು.

ಕಳೆದ 6 ವರ್ಷಗಳಲ್ಲಿ ಇಂಧನ ಮೇಲಿನ ತೆರಿಗೆ ಹೆಚ್ಚಳದಿಂದ 18 ಲಕ್ಷ ಕೋಟಿ ರೂಪಾಯಿ ಆದಾಯ ಸಂಗ್ರಹಿಸಿದೆ. ಸದ್ಯ ದೇಶದಲ್ಲಿ ಕೋವಿಡ್ ಪಿಡುಗಿನಿಂದ ಜನರು ನರಳುತ್ತಿದ್ದು, ಈ ಸಂದರ್ಭದಲ್ಲಿ ಸರಕಾರ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಬೇಕು ಎಂದು ಅವರು ಆಗ್ರಹಿಸಿದರು.

ಈ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಯಲ್ಲಿ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ. ಹಣ ನೀಡಿಲ್ಲ ಅಂತಾ ಹೆಣವನ್ನೇ ನೀಡುತ್ತಿಲ್ಲ. ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪಗೆ ಕಣ್ಣು, ಕಿವಿ ಹಾಗೂ ಹೃದಯವೇ ಇಲ್ಲವಲ್ಲ. ನಮ್ಮ ಈ ಕೂಗೂ ದಿಲ್ಲಿ ತಲುಪಬೇಕೆಂದು ಆದಾಯ ತೆರಿಗೆ ಕಚೇರಿ ಎದುರು ಪ್ರತಿಭಟನೆ ಮಾಡುತ್ತಿದ್ದೇವೆ. ಈ ಪ್ರತಿಭಟನೆಗೆ ಸರಕಾರ ಅನುಮತಿ ನೀಡಲಿಲ್ಲ. ಜನರ ಪರ ಧ್ವನಿ ಎತ್ತಲು ನಿಮ್ಮ ಅನುಮತಿ ಬೇಡ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಪಕ್ಷದ ಇತಿಹಾಸ ಹಾಗೂ ಜನರು ಕೊಟ್ಟಿರುವ ಶಕ್ತಿ ಸಾಕು. ನಾವು ಹೋರಾಟ ಮಾಡುತ್ತೇವೆ. ಈ ಹೋರಾಟ ಹಳ್ಳಿ ಹಳ್ಳಿಗಳಲ್ಲಿ ನಡೆಯುತ್ತದೆ. ಮುಂದಿನ ತಿಂಗಳು 4 ರಿಂದ 7ರವರೆಗೆ ಪ್ರತಿ ತಾಲೂಕು ಹಾಗೂ ಬ್ಲಾಕ್ ಮಟ್ಟದಲ್ಲಿ ಈ ಹೋರಾಟ ನಡೆಸಲಾಗುವುದು. ಜನ ಸಾಮಾನ್ಯರ ಸಮಸ್ಯೆಗಳನ್ನು ರಾಷ್ಟ್ರಪತಿಗಳಿಗೆ ತಲುಪಿಸಲು ಇಂದು ಸಂಜೆ 4 ಗಂಟೆಗೆ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ಜನರ ಧ್ವನಿಯಾಗುವುದು ನಮ್ಮ ಕರ್ತವ್ಯ. ನಾವು ಅದನ್ನು ಮಾಡಿದ್ದೇವೆ. ಯುಪಿಎ ಸರಕಾರ ಸ್ವಲ್ಪ ಬೆಲೆ ಹೆಚ್ಚಿಸಿದಾಗ ಯಾರು ಏನು ಹೇಳಿದ್ದರು ಎಂಬುದನ್ನು ತಿರುಗಿ ನೋಡಲಿ. ಮೋದಿ ಗುಜರಾತಿನ ಸಿಎಂ ಆಗಿದ್ದಾಗ ಏನೆಲ್ಲಾ ಹೇಳಿದ್ದರು ನೋಡಿ ಎಂದು ಅವರು ತಿರುಗೇಟು ನೀಡಿದರು.

ಪೊಲೀಸ್ ಅಧಿಕಾರಿಗಳು ನಮ್ಮ ವಿರುದ್ಧ ಯಾವ ಕೇಸ್ ಬೇಕಾದರೂ ಹಾಕಿಕೊಳ್ಳಲಿ. ಯಾವ ಕಚೇರಿಯಲ್ಲಿ ಏನು ನಡೆಯುತ್ತಿದೆ ಅಂತಾ ನಮಗೆ ಗೊತ್ತಿದೆ. ಸಮಯ ಬಂದಾಗ ಹೇಳುತ್ತೇನೆ. ಸರಕಾರ ಸಾಮಾನ್ಯ ಜನರ ಬದುಕಿನಲ್ಲೂ ಚೆಲ್ಲಾಟವಾಡುತ್ತಿದೆ. ಇದರ ವಿರುದ್ಧ ಹೋರಾಟ ಮಾಡುತ್ತಿದ್ದು, ಎಲ್ಲರ ಸಹಕಾರ ಮುಖ್ಯ ಎಂದು ಅವರು ಕರೆ ನೀಡಿದರು.

ಪ್ರತಿಭಟನೆಯಲ್ಲಿ ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ಬಿ.ಪುಷ್ಪಾ ಅಮರನಾಥ್ ಸೇರಿದಂತೆ ಇನ್ನಿತರ ಮುಖಂಡರು ಪಾಲ್ಗೊಂಡಿದ್ದರು.

ಸೈಕಲ್ ಚಳವಳಿಯ ಅಂಗವಾಗಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ತಮ್ಮ ನಿವಾಸಗಳಿಂದ ಸೈಕಲ್ ಮೂಲಕ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಗೆ ಆಗಮಿಸಿದರು. ನಂತರ ಕೆಪಿಸಿಸಿ ಕಚೇರಿಯಿಂದ ಜಿಪಿಓ ಮಾರ್ಗವಾಗಿ ಮೀನ್ಸ್ ಸ್ಕ್ವೇರ್ ವೃತ್ತದ ಆದಾಯ ತೆರಿಗೆ ಕಚೇರಿಯವರೆಗೂ ತೆರಳಿ ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿ ವಿರುದ್ಧ ಪ್ರತಿಭಟನೆ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X