Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್: ಖಾಸಗಿ ಆಸ್ಪತ್ರೆಯಲ್ಲಿ ಬೆಡ್...

ಕೋವಿಡ್: ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಕಾದಿರಿಸಿ ಆರೋಗ್ಯ ಇಲಾಖೆಗೆ ಸಂಸದ ನಳಿನ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ29 Jun 2020 10:35 PM IST
share

ಮಂಗಳೂರು, ಜೂ.29: ದ.ಕ. ಜಿಲ್ಲೆಯಲ್ಲಿ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ವೆನ್ಲಾಕ್ ಸಾಮರ್ಥ್ಯ ಮೀರುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಗಳಲ್ಲೂ ಹೆಚ್ಚುವರಿ ಬೆಡ್‌ಗಳನ್ನು ಕಾದಿರಿಸುವಂತೆ ಸಂಸದ ನಳಿನ್ ಕುಮಾರ್ ಕಟೀಲ್ ಆರೋಗ್ಯ ಇಲಾಖೆಗೆ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕೋವಿಡ್-19 ಪ್ರಗತಿ ಪರಿಶೀಲನೆ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕೊರೋನ ಸೋಂಕು ವ್ಯಾಪಕವಾಗಿದ್ದು, ಈ ಸಂದರ್ಭ ಸರಕಾರದ ಮಾರ್ಗಸೂಚಿಯ ಅನುಸಾರ ನಿವೃತ್ತಿ ಹೊಂದಿದ ಎಂಬಿಬಿಎಸ್ ಅಥವಾ ಆಯುಷ್ ವೈದ್ಯಾಧಿಕಾರಿಗಳು ಕೊರೋನ ರೋಗಿಗಳಿಗೆ ಚಿಕಿತ್ಸೆ ನೀಡಲು ಬಳಸಬಹುದು. ನರ್ಸಿಂಗ್ ಸಿಬ್ಬಂದಿ ಕೊರತೆಯಾದರೆ ಖಾಸಗಿ ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳ ಸೇವೆಯನ್ನು ಪಡೆಯಲು ಕ್ರಮ ಕೈಗೊಳ್ಳುವಂತೆ ಅವರು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು.

ಖಾಸಗಿ ಆಸ್ಪತ್ರೆಗಳು ಜಿಲ್ಲಾಡಳಿತದ ಜೊತೆ ನೇರ ಸಂಪರ್ಕದಲ್ಲಿದ್ದು, ಕೊರೋನ ಸೋಂಕಿತನ ಸ್ಥಿತಿಗತಿಯ ಬಗ್ಗೆ ಪ್ರತೀ ರೋಗಿಯ ಮಾಹಿತಿ ನೀಡಬೇಕು. ಆಸ್ಪತ್ರೆಗಳಲ್ಲಿ ಆ್ಯಂಬುಲೆನ್ಸ್ ಅಭಾವ ಉಂಟಾಗದಂತೆ ನೋಡಿಕೊಳ್ಳಬೇಕು. ಅಗತ್ಯ ಇದ್ದಲ್ಲಿ ಮೆಡಿಕಲ್ ಕಾಲೇಜುಗಳಿಂದ ಬಾಡಿಗೆಗೆ ಹೆಚ್ಚುವರಿ ಆ್ಯಂಬುಲೆನ್ಸ್ ಪಡೆದುಕೊಳ್ಳಬೇಕು ಎಂದರು.

ಮನೆಯಲ್ಲಿರುವ ವ್ಯಕ್ತಿಗಳಿಗೆ ಜ್ವರದ ಲಕ್ಷಣ ಕಾಣಿಸಿಕೊಂಡರೆ ಆ ರೋಗಿಯನ್ನು ತಕ್ಷಣ ಆಶಾಕಾರ್ಯಕರ್ತೆಯರು ಗುರುತಿಸಿ ಆಸ್ಪತ್ರೆಗೆ ದಾಖಲಿಸಬೇಕು ಎಂದು ಹೇಳಿದರು. ತುರ್ತು ಸಂದರ್ಭದಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ ಉಂಟಾಗಬಾರದು ಎನ್ನುವ ಉದ್ದೇಶದಿಂದ ವೈದ್ಯಕೀಯ ವಿದ್ಯಾರ್ಥಿಗಳು ಹಾಗೂ ಇನ್ನಿತರ ಸಿಬ್ಬಂದಿಗೆ ತರಬೇತಿ ನೀಡಿದರೆ ಉತ್ತಮ ಎಂದು ಅವರು ಹೇಳಿದರು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್, ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಮತ್ತಿತರರು ಉಪಸ್ಥಿತರಿದ್ದರು.

‘ಕೊವೀಡ್ ಮೃತರ ಅಂತ್ಯಸಂಸ್ಕಾರದಲ್ಲಿ ಅನ್ಯವ್ಯಕ್ತಿ ಪಾಲ್ಗೊಳ್ಳುವಂತಿಲ್ಲ’

ಕೊರೋನದಿಂದ ಮೃತಪಟ್ಟವರ ಶವಸಂಸ್ಕಾರ ಮಾಡುವಾಗ ಸರಕಾರದ ಮಾರ್ಗಸೂಚಿಯಂತೆ ಪಿಪಿಟಿ ಕಿಟ್ ಧರಿಸಿರುವ, ಸಂಬಂಧಪಟ್ಟ ಸಿಬ್ಬಂದಿ ಮಾತ್ರ ಪಾಲ್ಗೊಳ್ಳಬೇಕು. ಅನ್ಯ ವ್ಯಕ್ತಿಗಳಿಗೆ ಅಲ್ಲಿ ಹಾಜರಿರಲು ಅವಕಾಶ ನೀಡಬಾರದು. ಅಂಥವರ ವಿರುದ್ಧ ಕೇಸು ದಾಖಲಿಸಲು ನಳಿನ್ ಕುಮಾರ್ ಕಟೀಲು ಸೂಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X