Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ...

ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಸಿಎಂ ಯಡಿಯೂರಪ್ಪ ಸಭೆ

ಕೊರೋನ ವೈರಸ್

ವಾರ್ತಾಭಾರತಿವಾರ್ತಾಭಾರತಿ30 Jun 2020 12:58 PM IST
share
ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಸಿಎಂ ಯಡಿಯೂರಪ್ಪ ಸಭೆ

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೊರೋನ ಸೋಂಕಿನ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ಇಂದು ಸಭೆ ನಡೆಸಿದರು.

ಬೆಂಗಳೂರಿನಲ್ಲಿ ಎರಡು ಸರ್ಕಾರಿ ಸಂಸ್ಥೆಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಪ್ರಸ್ತುತ ನಗರದ 11 ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ 2,200 ಹಾಸಿಗೆಗಳನ್ನು ಅಧಿಸೂಚಿಸಲಾಗಿದೆ. ಆದರೆ ಪ್ರಸ್ತುತ ವರದಿಯಾಗುತ್ತಿರುವ ಪ್ರಕರಣಗಳನ್ನು ಗಮನಿಸಿದರೆ, 4500 ಹಾಸಿಗೆಗಳನ್ನು ಖಾಸಗಿ ಕಾಲೇಜುಗಳಿಂದ ಸರ್ಕಾರ ನಿರೀಕ್ಷಿಸುತ್ತಿದೆ. ಕಳೆದ ನಾಲ್ಕು ತಿಂಗಳಿಂದ ಹತ್ತು ವೈದ್ಯಕೀಯ ಕಾಲೇಜುಗಳು ಹೊರತು ಪಡಿಸಿ, ಇತರ ಎಲ್ಲ ಕಾಲೇಜುಗಳು ಪ್ರಯೋಗಾಲಯ ವ್ಯವಸ್ಥೆ ಮಾಡಿವೆ. ಸರ್ಕಾರಿ ಕಾಲೇಜುಗಳಲ್ಲಿ 2000 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 4500 ಸೇರಿದಂತೆ ಸುಮಾರು 6500 ಹಾಸಿಗೆಗಳು ಬೆಂಗಳೂರಿನ ವೈದ್ಯಕೀಯ ಕಾಲೇಜುಗಳಲ್ಲಿಯೇ ಲಭ್ಯವಾಗುತ್ತಿವೆ. ಇದಕ್ಕೆ ಖಾಸಗಿ ವೈದ್ಯಕೀಯ ಕಾಲೇಜು ಗಳು ಸಹಕರಿಸುವಂತೆ ಮುಖ್ಯಮಂತ್ರಿ ಮನವಿ ಮಾಡಿದರು.

ವೈದ್ಯಕೀಯ ಕಾಲೇಜುಗಳು ಸರ್ಕಾರದೊಂದಿಗೆ ಕೈಜೋಡಿಸಿ, ಕೋವಿಡ್ ಚಿಕಿತ್ಸೆಗೆ ಸಹಕರಿಸುವ ಭರವಸೆಯನ್ನು ನೀಡಿದರು. ಇದಕ್ಕೆ ಸಿದ್ಧತೆಗಳು ಮಾಡಿಕೊಳ್ಳಬೇಕಾಗಿರುವುದರಿಂದ ಹಂತ ಹಂತವಾಗಿ ವ್ಯವಸ್ಥೆ ಮಾಡಲಾಗುವುದು. ಕೋವಿಡ್ ಚಿಕಿತ್ಸೆ ನೀಡುವ ಖಾಸಗಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಕೂಡ ವಿಮಾ ಸೌಲಭ್ಯ ಒದಗಿಸಲಾಗುವುದು ಎಂದು ಸಿಎಂ ತಿಳಿಸಿದರು.

ಕೋವಿಡ್ ರೋಗಿಗಳಿಗೆ ಹಾಸಿಗೆ ಹಂಚಿಕೆ ಕುರಿತಂತೆ ಕೇಂದ್ರೀಕೃತ ವ್ಯವಸ್ಥೆಯನ್ನು ಈಗಾಗಲೇ ಬಿಬಿಎಂಪಿ ಯಲ್ಲಿ ಮಾಡಲಾಗಿದ್ದು, ಎರಡು ಮೂರು ದಿನಗಳಲ್ಲಿ ಪೂರ್ಣಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿದೆ. ಕೋವಿಡ್ ಚಿಕಿತ್ಸೆ ನೀಡುವ ಎಲ್ಲ ಆಸ್ಪತ್ರೆಗಳನ್ನು ಈ ವ್ಯವಸ್ಥೆಯ ವ್ಯಾಪ್ತಿಗೆ ತರಲಾಗುವುದು ಎಂದು ಸ್ಪಷ್ಟಪಡಿಸಿದರು.

ಖಾಸಗಿಯವರೊಂದಿಗೆ ಸಮನ್ವಯಕ್ಕೆ ಸಮಿತಿ ರಚನೆ ಮಾಡಲಾಗುವುದು. ಇದಲ್ಲದೆ ಟೆಲಿಮೆಡಿಸಿನ್ ಮೂಲಕ ಚಿಕಿತ್ಸೆ ನೀಡಲು ಸಹ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್. ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಉಪಮುಖ್ಯಮಂತ್ರಿ ಡಾ:ಸಿ.ಎನ್.ಅಶ್ವತ್ಥ್ ನಾರಾಯಣ್, ಕಂದಾಯ ಸಚಿವ ಆರ್.ಅಶೋಕ್, ಗೃಹ ಸಚಿವ ಬಸವರಾಜ,  ಬೊಮ್ಮಾಯಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್  ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X