Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು : ಶುಕ್ರವಾರದಿಂದ ಸಂಜೆ 6ರ ನಂತರ...

ಮೈಸೂರು : ಶುಕ್ರವಾರದಿಂದ ಸಂಜೆ 6ರ ನಂತರ ಸಾರ್ವಜನಿಕ ಸಂಚಾರ ನಿರ್ಬಂಧ - ಸಚಿವ ಎಸ್.ಟಿ.ಸೋಮಶೇಖರ್

ವಾರ್ತಾಭಾರತಿವಾರ್ತಾಭಾರತಿ1 July 2020 1:39 PM IST
share
ಮೈಸೂರು : ಶುಕ್ರವಾರದಿಂದ ಸಂಜೆ 6ರ ನಂತರ ಸಾರ್ವಜನಿಕ ಸಂಚಾರ ನಿರ್ಬಂಧ - ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಮಾಸ್ಕ್ ಹಾಕದೇ ಹೊರಬರುವವರಿಗೆ ದಂಡ ಹಾಗೂ ಸಂಜೆ 6 ಗಂಟೆ ನಂತರ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಸಾರ್ವಜನಿಕ ಪ್ರವೇಶಕ್ಕೆ ಶುಕ್ರವಾರದಿಂದ ನಿರ್ಬಂಧ ವಿಧಿಸುತ್ತಿದ್ದೇವೆ ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ತಿಳಿಸಿದರು. 

ಇಲ್ಲಿನ ನೂತನ ಜಿಲ್ಲಾ ಕಚೇರಿಗಳ ಸಂಕೀರ್ಣದಲ್ಲಿ ಜಿಲ್ಲಾಧಿಕಾರಿಗಳು, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೊರೋನ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕೆ ತರಲು ಸಾರ್ವಜನಿಕರ ಸಹಕಾರ ಹಾಗೂ ಜವಾಬ್ದಾರಿ ಸಹ ದೊಡ್ಡದು. ಈ ಹಿನ್ನೆಲೆಯಲ್ಲಿ ಇನ್ನು ಮಾಸ್ಕ್ ಹಾಕದೇ ಹೊರ ಬರುವುದು ಕಂಡರೆ ಪೊಲೀಸರು ದಂಡಹಾಕಲಿದ್ದಾರೆ  ನಗರ ಪ್ರದೇಶಗಳಲ್ಲಿ ಮಾಸ್ಕ್ ಹಾಕದವರಿಗೆ 200 ರೂ. ಹಾಗೂ ಗ್ರಾಮಾಂತರದಲ್ಲಿ 100 ರೂ. ದಂಡ ವಿಧಿಸಲಾಗುತ್ತದೆ ಎಂದು ತಿಳಿಸಿದರು.

ಜೊತೆಗೆ ಸಾಮಾಜಿಕ ಅಂತರವನ್ನೂ ಕಾಯ್ದುಕೊಳ್ಳಬೇಕು. ಈಗ ಬಾಯಿ ಮಾತಿನಲ್ಲಿ ಹೇಳಲಾಗುತ್ತದೆ. ಆಗಲೂ ಜನತೆ ಎಚ್ಚೆತ್ತುಕೊಳ್ಳದೆ ಗುಂಪು ಗುಂಪಾಗಿ ಕಾಣಿಸಿಕೊಂಡರೆ ದಂಡ ವಿಧಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಕೊರೋನ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಅಂಗಡಿ-ಮುಂಗಟ್ಟುಗಳನ್ನು ಸಂಜೆ 6 ಗಂಟೆ ನಂತರ ಸದ್ಯದ ಮಟ್ಟಿಗೆ ಬಂದ್ ಮಾಡುವ ತೀರ್ಮಾನಕ್ಕೆ ಬರಲಾಗಿದೆ. ಶುಕ್ರವಾರದಿಂದ ಮೈಸೂರು ಜಿಲ್ಲೆಯಲ್ಲಿ ಈ ಆದೇಶ ಅನುಷ್ಠಾನಕ್ಕೆ ಬರಲಿದೆ ಎಂದು ಸಚಿವರು ತಿಳಿಸಿದರು.

ಎಪಿಎಂಸಿಯಲ್ಲಿ ವ್ಯವಹಾರ ಮಾಡುವವರಿಗೆ ಹಾಗೂ ತರಕಾರಿ ಮಾರಾಟ ಮಾಡುವವರಿಗೆ ಕಡ್ಡಾಯವಾಗಿ ಸ್ಕ್ರೀನಿಂಗ್ ಮಾಡಿಸಲಾಗುತ್ತದೆ. ಕಾರಣ ಅಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಒಂದೆಡೆ ಸೇರುವುದರಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು. 

55 ವರ್ಷ ಮೇಲ್ಪಟ್ಟ ಪೊಲೀಸರಿಗೆ ಪರೀಕ್ಷೆ 

ಪೊಲೀಸ್ ಇಲಾಖೆಯಲ್ಲಿ 55 ವರ್ಷ ಮೇಲ್ಪಟ್ಟವರ ಮೇಲೆ ಅದರಲ್ಲೂ ಅವರ ಆರೋಗ್ಯದ ಸ್ಥಿತಿ ನೋಡಿಕೊಂಡು ಹೆಚ್ಚಿನ ಆದ್ಯತೆ ಮಾಡಿ ಅವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆಗೊಳಪಡಿಸುವ ತೀರ್ಮಾನಕ್ಕೆ ಬರಲಾಗಿದೆ ಎಂದು ಸಚಿವರು ತಿಳಿಸಿದರು. 

ಜಿಲ್ಲಾಡಳಿತ-ವೈದ್ಯರಿಗೆ ಅಭಿನಂದನೆ

ಮೈಸೂರಿನಲ್ಲಿ ಜಿಲ್ಲಾಡಾಳಿತ ಹಾಗೂ ವೈದ್ಯರ ತಂಡ ಉತ್ತಮವಾಗಿ ಕಾರ್ಯನಿರ್ವಹಣೆ ಮಾಡುತ್ತಿದೆ. ಅವರಿಗೆ ಸಾರ್ವಜನಿಕರ ಸಹಕಾರ ಮುಖ್ಯವಾಗುತ್ತದೆ. ಈ ಹಿನ್ನೆಲೆಯಲ್ಲಿ ನಾನು ವೈಯುಕ್ತಿಕವಾಗಿ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು. 

15 ದಿನಗಳಲ್ಲಿ  ಆಶಾ ಕಾರ್ಯಕರ್ತೆಯರಿಗೂ ಸಹಾಯಧನ ವಿತರಣೆ

ಪ್ರತಿ ಜಿಲ್ಲೆಯಲ್ಲಿ ಸಹಾಯಧನ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಗ್ರಾಮೀಣ ಪ್ರದೇಶ ಸೇರಿದಂತೆ ಎಲ್ಲ ಕಡೆ ಅನುದಾನ ನೀಡಲಾಗುತ್ತಿದೆ. ಬಳಿಕ ಆಯಾ ಕ್ಷೇತ್ರದ ಶಾಸಕರು ವಿತರಣೆ ಮಾಡುತ್ತಾರೆ. ಗ್ರಾಮೀಣ ಭಾಗದಲ್ಲಿ ವಿತರಣೆ ಮಾಡುತ್ತಿಲ್ಲ ಎಂಬುದು ಸುಳ್ಳು. ಅದಕ್ಕೋಸ್ಕರ ಪ್ರತಿ ಜಿಲ್ಲೆಗೆ ನಾನೇ ಖುದ್ದು ಭೇಟಿ ನೀಡಿ ವಿತರಣೆ ಮಾಡುತ್ತಿದ್ದೇನೆ. ಇನ್ನು 15 ದಿನಗಳಲ್ಲಿ ಎಲ್ಲ 42685 ಆಶಾ ಕಾರ್ಯಕರ್ತೆಯರಿಗೂ ವಿತರಣೆಯಾಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಸಂಸದರು ಮತ್ತು ಶಾಸಕರು ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X