Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಸ್ಪತ್ರೆಗಳ ಮೇಲಿನ ಒತ್ತಡ ತಡೆಯಲು ತಜ್ಞರ...

ಆಸ್ಪತ್ರೆಗಳ ಮೇಲಿನ ಒತ್ತಡ ತಡೆಯಲು ತಜ್ಞರ ಸಲಹೆ: ಮುಖ್ಯಮಂತ್ರಿ ಯಡಿಯೂರಪ್ಪ

ವಾರ್ತಾಭಾರತಿವಾರ್ತಾಭಾರತಿ1 July 2020 5:58 PM IST
share
ಆಸ್ಪತ್ರೆಗಳ ಮೇಲಿನ ಒತ್ತಡ ತಡೆಯಲು ತಜ್ಞರ ಸಲಹೆ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು, ಜು. 1: ಕೊರೋನ ಸೋಂಕಿನ ರೋಗ ಲಕ್ಷಣ ಇಲ್ಲದ ಅಥವಾ ಅತ್ಯಂತ ಕಡಿಮೆ ಜ್ವರದ ಲಕ್ಷಣಗಳಿದ್ದರೆ, ಅವರನ್ನು ಮನೆಯಲ್ಲಿಯೇ ಪ್ರತ್ಯೇಕವಾಗಿರಿಸಿ (ಹೋಮ್ ಐಸೋಲೇಷನ್), ಅವರ ಆರೋಗ್ಯದ ಮೇಲೆ ನಿಗಾ ಇಡುವುದು ಸೂಕ್ತ. ಇದರಿಂದ ಆಸ್ಪತ್ರೆಗಳ ಮೇಲೆ ಒತ್ತಡ ತಡೆಯಬಹುದಾಗಿದೆ ಎಂದು ಬಹುತೇಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬೆಂಗಳೂರು ಮಹಾನಗರದಲ್ಲಿ ಕೋವಿಡ್-19 ನಿಯಂತ್ರಣ ಸಂಬಂಧ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ತಜ್ಞರೊಂದಿಗೆ ಸಭೆ ನಡೆಸಿದರು. ಕೋವಿಡ್ ಚಿಕಿತ್ಸೆಗೆ ಹಾಗೂ ನಿರ್ವಹಣೆಗೆ ಅಳವಡಿಸಬೇಕಾದ ಮಾರ್ಗಸೂಚಿಗಳನ್ನು ನಿಗದಿ ಪಡಿಸುವ ಕುರಿತು ಚರ್ಚಿಸಲಾಯಿತು ಎಂದರು.

ಕೊರೋನ ಸೋಂಕಿನ ತೀವ್ರ ಲಕ್ಷಣಗಳು ಹೊಂದಿರುವವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿರುವವರು ಸೋಂಕಿತರಾದಲ್ಲಿ, ಅವರಿಗೆ ಉತ್ತಮ ಚಿಕಿತ್ಸೆ ನೀಡಲು ಆದ್ಯತೆ ನೀಡಬೇಕು ಎಂದು ತಜ್ಞರು ಸಲಹೆ ಮಾಡಿದರು. ಪ್ರಕರಣ ದ್ವಿಗುಣಗೊಳ್ಳುವ ವೇಗ ತಗ್ಗಿಸಬೇಕು. ಮುಚ್ಚಿದ ಸ್ಥಳಗಳು, ನಿಕಟ ಸಂಪರ್ಕ ಹಾಗೂ ಜನಸಂದಣಿಯ ಸ್ಥಳಗಳಲ್ಲಿ ಜನತೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ ಎಂದು ತಿಳಿಸಿದರು.

ಟೆಲಿ ಮೆಡಿಸಿನ್ ವ್ಯವಸ್ಥೆಯ ಮೂಲಕ ಹೆಚ್ಚಿನ ರೋಗಿಗಳಿಗೆ ಚಿಕಿತ್ಸೆ ನೀಡಬಹುದು ಎಂದು ಸಲಹೆ ನೀಡಿದ್ದಾರೆ. ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಯ ಅಗತ್ಯವಿದೆ. ಸಂಪರ್ಕ ಪತ್ತೆ ಹಚ್ಚಲು ಹೆಚ್ಚುವರಿ ಮಾನವ ಸಂಪನ್ಮೂಲ ಅಗತ್ಯವಿದ್ದು, ಇತರ ಇಲಾಖೆಯ ಸಿಬ್ಬಂದಿ ಸೇವೆ ಬಳಸಿಕೊಳ್ಳಬೇಕು ಎಂಬ ಸಲಹೆಯೂ ಬಂದಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಟೆಲಿ ಐಸಿಯು ಹಾಗೂ ಚಿಕಿತ್ಸೆಯ ನಿಗದಿತ ಮಾನದಂಡಗಳ ಕುರಿತು ಹೆಚ್ಚಿನ ತರಬೇತಿ ಅಗತ್ಯ. ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆ ಸರಪಣಿ ಹಾಗೂ ಹೊಸ ಔಷಧಿಗಳ ಪೂರೈಕೆ ಸರಪಣಿ ಅಬಾಧಿತವಾಗಿರಬೇಕು ಎಂದ ಅವರು, ಸೋಂಕಿತರಿಗೆ ಚಿಕಿತ್ಸೆಯಲ್ಲಿ ವಿಳಂಬವಿಲ್ಲದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ಮಾಡಿದರು.

ವಿಶ್ವಾಸ ಮೂಡಿಸಬೇಕು: ರಾಜ್ಯದಲ್ಲಿ ಕೆಲ ದಿನಗಳಿಂದ ಕೊರೋನ ಸೋಂಕಿತರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನಸಾಮಾನ್ಯರಲ್ಲಿ ಭೀತಿಯ ವಾತಾವರಣ ಸೃಷ್ಟಿಯಾಗಿದ್ದು, ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸವಾಗಬೇಕಿದೆ. ತಜ್ಞರ ಈ ಅಭಿಪ್ರಾಯಗಳ ಕುರಿತು ಸರಕಾರದ ಮಟ್ಟದಲ್ಲಿ ವಿವರವಾಗಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.

ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮಣಿಪಾಲ್ ಆಸ್ಪತ್ರೆಯ ಡಾ.ಸುದರ್ಶನ್ ಬಲ್ಲಾಳ್, ಸ್ಪರ್ಶ್ ಆಸ್ಪತ್ರೆಯ ಡಾ.ಶರಣ್ ಪಾಟೀಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಮತ್ತು ತಜ್ಞರು ಹಾಜರಿದ್ದರು.

'ಕೊರೋನ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ಆತಂಕಗೊಳ್ಳುವ ಅಗತ್ಯವಿಲ್ಲ. ಸೋಂಕಿನ ಯಾವುದೇ ಲಕ್ಷಣ ಇಲ್ಲದವರು ಆಸ್ಪತ್ರೆಗಳಿಗೆ ಧಾವಿಸಿ ದಾಖಲಾಗುವ ಅಗತ್ಯವಿಲ್ಲ. ಮನೆಯಲ್ಲಿಯೇ ವೈದ್ಯರ ಸಲಹೆ-ಸೂಚನೆಗಳನ್ನು ಪಾಲಿಸಿ ಸೋಂಕಿನಿಂದ ಗುಣಮುಖರಾಗಬಹುದು. ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆ ಇಲ್ಲ. ಖಾಸಗಿ ಆಸ್ಪತ್ರೆಗಳು ಸರಕಾರದ ಜೊತೆ ಕೈಜೋಡಿಸಿವೆ. ಎಲ್ಲರೂ ಒಗ್ಗಟ್ಟಿನಿಂದ ಸೋಂಕಿನ ವಿರುದ್ಧ ಹೋರಾಡಬೇಕಿದೆ'
-ಡಾ.ಸುದರ್ಶನ್ ಬಲ್ಲಾಳ್, ಮಣಿಪಾಲ್ ಆಸ್ಪತ್ರೆ

'ಬಳ್ಳಾರಿಯಲ್ಲಿ ಕೊರೋನ ಸೋಂಕಿನ ಮೃತಪಟ್ಟವರ ಮೃತದೇಹಗಳನ್ನು ಎಳೆದಾಡಿರುವ ಘಟನೆಯನ್ನು ನಾನು ಖಂಡಿಸುತ್ತೇನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದು, ಈ ಸಂಬಂಧ ಆರು ಮಂದಿಯನ್ನು ಅಮಾನತ್ತು ಮಾಡಲಾಗಿದೆ. ಇನ್ನು ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು'
-ಯಡಿಯೂರಪ್ಪ, ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X