Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪತ್ರಕರ್ತರು ಆರೋಗ್ಯದ ಬಗ್ಗೆ ಹೆಚ್ಚಿನ...

ಪತ್ರಕರ್ತರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು : ಡಾ.ಅಲಕಾನಂದ ರಾವ್

ವಾರ್ತಾಭಾರತಿವಾರ್ತಾಭಾರತಿ1 July 2020 10:22 PM IST
share
ಪತ್ರಕರ್ತರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು : ಡಾ.ಅಲಕಾನಂದ ರಾವ್

ಉಡುಪಿ, ಜು.1: ಕೋವಿಡ್-19 ವಿರುದ್ದದ ಹೋರಾಟದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರ ರೀತಿಯಲ್ಲಿ, ಸಮಾಜದಲ್ಲಿ ಕೊರೋನಾ ಕುರಿತಂತೆ ಜಾಗೃತಿ ಮೂಡಿಸುತ್ತಿರುವ ಪತ್ರಕರ್ತರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಜಿಲ್ಲಾ ಆಯುಷ್ ಅಧಿಕಾರಿ ಡಾ.ಅಲಕಾನಂದ ರಾವ್ ಹೇಳಿದ್ದಾರೆ.

ಬುಧವಾರ ಉಡುಪಿಯ ಆಯುಷ್ ಇಲಾಖೆಯಲ್ಲಿ ಕರ್ನಾಟಕ ಸರಕಾರಿ ಆಯುಷ್ ವೈದ್ಯಾಧಿಕಾರಿಗಳ ಸಂಘದ ವತಿಯಿಂದ ನಡೆದ ವೈದ್ಯರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಪತ್ರಕರ್ತರಿಗೆ ಕೋವಿಡ್-19ಕ್ಕೆ ಸಂಬಂಧಿಸಿ ದಂತೆ ರೋಗ ನಿರೋಧಕ ಶಕ್ತಿ ವೃದ್ಧಿಸುವ ಆಯುಷ್ ಮಾತ್ರೆ ಹಾಗೂ ಚ್ಯವನಪ್ರಾಶ ವಿತರಿಸಿ ಅವರು ಮಾತನಾಡುತಿದ್ದರು.

ಕೋರೋನಾ ವಿರುದ್ದ ಹೋರಾಟದಲ್ಲಿ ಆಯುರ್ವೇದ ವೈದ್ಯರು ಕೂಡ ವಾರಿಯರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಸೋಂಕು ನಿಯಂತ್ರಣ ತರುವಲ್ಲಿ ಆಯುರ್ವೇದ ವೈದ್ಯರ ಪಾತ್ರ ಕೂಡ ಇದೆ. ಪತ್ರಕರ್ತರು ಪತ್ರಿಕೆ ಮತ್ತು ದೃಶ್ಯ ಮಾಧ್ಯಮಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸು ತ್ತಿದ್ದು, ಸಾರ್ವಜನಿಕರ ನಡುವೆಯೇ ಹೆಚ್ಚು ಇರುವುದರಿಂದ ಅವರೂ ಕೂಡಾ ತಮ್ಮ ಆರೋಗ್ಯ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಕೋವಿಡ್-19ರಿಂದ ರಕ್ಷಣೆ ಪಡೆಯಲು ಆಯುಷ್ ಇಲಾಖೆಯಿಂದ ಸಿದ್ದ ಪಡಿಸಿರುವ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಅರ್ಯುರ್ವೇದ, ಯುನಾನಿ ಮತ್ತು ಹೋಮಿಯೋಪತಿಯ ಮಾತ್ರೆಗಳನ್ನು ಹಾಗೂ ವಿಟಮಿನ್ ಸಿ ಅಧಿಕವಾ ಗಿರುವ ಚ್ಯವನಪ್ರಾಶನಗಳನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕರಾದ ಶಿವಕುಮಾರ್ ಅವರ ಮೂಲಕ ಪತ್ರಕರ್ತರಿಗೆ ಡಾ.ಅಲಕಾನಂದ ರಾವ್ ವಿತರಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶಿವಕುಮಾರ್ ಮಾತನಾಡಿ, ಪತ್ರಕರ್ತರು ಯಾವಾಗಲೂ ಸಮಯದ ಪರಿವೆಯಿಲ್ಲದೇ ತಮ್ಮ ಆರೋಗವನ್ನೂ ಲೆಕ್ಕಿಸದೇ, ಕೋರೋನಾ ವಿರುದ್ದ ಹೋರಾಟದಲ್ಲಿ ಕೊರೋನಾ ವಾರಿಯರ್ಸ್‌ಗಳಾಗಿ ಸಾರ್ವಜನಿಕರಿಗೆ ಅರಿವು ಹಾಗೂ ಜಾಗೃತಿ ಮೂಡಿಸು ತ್ತಿದ್ದು, ಪತ್ರಕರ್ತರ ಆರೋಗ್ಯದ ದೃಷ್ಟಿಯಿಂದ ರೋಗನಿರೋಧಕ ಮಾತ್ರೆ ಮತ್ತು ಚ್ಯವನಪ್ರಾಶ ನೀಡಿರುವುದಕ್ಕೆ ಆಯುಷ್ ಇಲಾಖೆಗೆ ಕೃತಜ್ಞಚೆ ಸಲ್ಲಿಸಿದರು.

ಕರ್ನಾಟಕ ಸರ್ಕಾರಿ ಆಯುಷ್ ವೈದ್ಯಾಧಿಕಾರಿಗಳ ಸಂಘದ ಉಡುಪಿ ಅಧ್ಯಕ್ಷೆ ಡಾ. ವೀಣಾ ಎನ್ ಕಾರಂತ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವೈದ್ಯ ಡಾ. ದಿನಕರ ಡೋಂಗ್ರೆ ಅವರು ಆಹಾರ ಸೇವನೆ ಕುರಿತು ಮಾಹಿತಿ ನೀಡಿದರು. ಹೋಮಿಯೋಪತಿ ಕುರಿತು ಡಾ. ಅನ್ನಪೂರ್ಣ ಭಂಡಾರಿ, ಯುನಾನಿ ಕುರಿತು ಡಾ. ರುಕ್ಯಾಡ್ ಅಂಜುಂ ಮಾಹಿತಿ ನೀಡಿದರು. ಸಂಘದ ಕಾರ್ಯದರ್ಶಿ ಸಂಧ್ಯಾಕುಮಾರಿ ವೇದಿಕೆಯಲ್ಲಿದ್ದರು.

  ಡಾ.ಪ್ರದೀಪ್ ಆರ್.ಶೆಟ್ಟಿ ವಂದಿಸಿ ಡಾ.ಕೆ.ಸರ್ವೋತ್ತಮ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X