Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಗೌರಿ ಲಂಕೇಶ್ ನೆನಪಿದೆಯಾ?': ಪತ್ರಕರ್ತೆ...

'ಗೌರಿ ಲಂಕೇಶ್ ನೆನಪಿದೆಯಾ?': ಪತ್ರಕರ್ತೆ ರಾಣಾ ಅಯ್ಯೂಬ್‌ ಗೆ ಕೊಲೆ, ಅತ್ಯಾಚಾರದ ಬೆದರಿಕೆ

ವಾರ್ತಾಭಾರತಿವಾರ್ತಾಭಾರತಿ3 July 2020 9:25 PM IST
share
ಗೌರಿ ಲಂಕೇಶ್ ನೆನಪಿದೆಯಾ?: ಪತ್ರಕರ್ತೆ ರಾಣಾ ಅಯ್ಯೂಬ್‌ ಗೆ ಕೊಲೆ, ಅತ್ಯಾಚಾರದ ಬೆದರಿಕೆ

ಹೊಸದಿಲ್ಲಿ,ಜು.3: ಸಾಮಾಜಿಕ ಜಾಲತಾಣದಲ್ಲಿ ಕಾಶ್ಮೀರ ಕುರಿತು ಪೋಸ್ಟ್‌ನ ಬಳಿಕ ಫೇಸ್‌ಬುಕ್,ಇನ್‌ಸ್ಟಾಗ್ರಾಂ ಮತ್ತು ಟ್ವಿಟರ್‌ಗಳಲ್ಲಿ ತನಗೆ ಹಲವಾರು ಕೊಲೆ ಮತ್ತು ಅತ್ಯಾಚಾರ ಬೆದರಿಕೆಗಳು ಬಂದಿವೆ ಎಂದು ಪತ್ರಕರ್ತೆ ರಾಣಾ ಅಯ್ಯೂಬ್ ಅವರು ಶುಕ್ರವಾರ ಆರೋಪಿಸಿದ್ದಾರೆ. ಇಂತಹ ಬೆದರಿಕೆಗಳ ಸ್ಕ್ರೀನ್‌ಶಾಟ್‌ಗಳನ್ನು ಅವರು ಟ್ವಿಟರ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಬುಧವಾರ ಕಾಶ್ಮೀರದ ಸೋಪುರ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಸಿಬ್ಬಂದಿಗಳ ನಡುವಿನ ಗುಂಡಿನ ಕಾಳಗದಲ್ಲಿ ಶ್ರೀನಗರ ನಿವಾಸಿ ಬಷೀರ್ ಅಹ್ಮದ್ ಖಾನ್(65) ಸಾವನ್ನಪ್ಪಿದ ಬಗ್ಗೆ ತಾನು ಧ್ವನಿಯೆತ್ತಿದ ಬಳಿಕ ಈ ಬೆದರಿಕೆಗಳು ಬರತೊಡಗಿವೆ ಎಂದು ಅಯ್ಯೂಬ್ ಹೇಳಿದ್ದಾರೆ.

ಖಾನ್ ಹತ್ಯೆಯು ಕಾಶ್ಮೀರ ಕಣಿವೆಯಲ್ಲಿ ಭಾರೀ ವಿವಾದವನ್ನು ಸೃಷ್ಟಿಸಿದ್ದು, ಅವರ ಮೃತದೇಹದ ಮೇಲೆ ಮೊಮ್ಮಗ ಕುಳಿತುಕೊಂಡು ಅಳುತ್ತಿದ್ದ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

‘ಪ್ರತಿ ಬಾರಿ ನಾನು ಕಾಶ್ಮೀರದ ಬಗ್ಗೆ ಬರೆದಾಗ ಅಥವಾ ಮಾತನಾಡಿದಾಗೆಲ್ಲ ನನ್ನ ವಿರುದ್ಧ ಊಹಿಸಲೂ ಸಾಧ್ಯವಿಲ್ಲದ ದ್ವೇಷ ಪ್ರದರ್ಶನಗೊಳ್ಳುತ್ತದೆ. ಆದರೆ ಈ ಸಲ ಅವರು ರಾಜಾರೋಷ ಬೆದರಿಕೆಯನ್ನು ಒಡ್ಡಿದ್ದಾರೆ. ಹಿಂದೆಲ್ಲ ಅವರು ನೇರವಾಗಿ ಬೆದರಿಕೆಯ ಭಾಷೆಯನ್ನು ಬಳಸುತ್ತಿರಲಿಲ್ಲ ’ಎಂದು ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅಯ್ಯೂಬ್ ತಿಳಿಸಿದರು.

‘ಕಳೆದೆರಡು ದಿನಗಳಲ್ಲಿ ನನ್ನ ಸಾಮಾಜಿಕ ಜಾಲತಾಣ ಖಾತೆಗಳು ಕೊಲೆ ಮತ್ತು ಅತ್ಯಾಚಾರ ಬೆದರಿಕೆಗಳಿಂದ ತುಂಬಿಹೋಗಿವೆ ’ಎಂದು ಶುಕ್ರವಾರ ಮಧ್ಯಾಹ್ನ ಟ್ವೀಟಿಸಿರುವ ಅಯ್ಯೂಬ್, ಪ್ರಣಯ ಭೌಮಿಕ್ ಎಂಬಾತನ ಬೆದರಿಕೆಯ ಸ್ಕ್ರೀನ್ ಶಾಟ್ ಶೇರ್ ಮಾಡಿಕೊಂಡಿದ್ದಾರೆ.

ಭೌಮಿಕ್ ಅತ್ಯಂತ ಅಸಭ್ಯ ಭಾಷೆಯನ್ನು ಬಳಸಿದ್ದು ಮಾತ್ರವಲ್ಲ,ಅತ್ಯಾಚಾರದ ಬೆದರಿಕೆಯನ್ನೂ ಒಡ್ಡಿದ್ದಾನೆ,ಕಾಶ್ಮೀರಿಗಳು ಮತ್ತು ಮುಸ್ಲಿಮರ ವಿರುದ್ಧ ನಿಂದನೆಗಳ ಮಳೆಯನ್ನೇ ಸುರಿಸಿದ್ದಾನೆ.

ಇನ್ನೊಂದು ಸ್ಕ್ರೀನ್ ಶಾಟ್‌ನಲ್ಲಿ ‘ಹಿಂದು ರಾಷ್ಟ್ರ’ ಎಂಬ ಖಾತೆಯು 2017ರಲ್ಲಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದ ಪತ್ರಕರ್ತೆ ಗೌರಿ ಲಂಕೇಶ್ ರನ್ನು ನೆನಪಿಸಿಕೊಳ್ಳುವಂತೆ ಅಯ್ಯೂಬ್‌ಗೆ ಸೂಚಿಸಿದೆ.

ಗೌರಿ ಲಂಕೇಶರನ್ನು ನೆನಪಿಸಿಕೊಳ್ಳ್ಳುವಂತೆ ಬೆದರಿಕೆ ಅಯ್ಯೂಬ್ ಅವರಲ್ಲಿ ಆತಂಕವನ್ನು ಮೂಡಿಸಿದೆ.

‘‘ಗೌರಿಯವರ ಹತ್ಯೆಗೆ ಮುನ್ನ,ನನ್ನ ವಿರುದ್ಧ ಬಹಳಷ್ಟು ದ್ವೇಷವನ್ನು ಕಾರಲಾಗುತ್ತಿದ್ದ ಸಮಯದಲ್ಲಿ ನನ್ನ ಫೇಸ್‌ಬುಕ್ ಖಾತೆಯಲ್ಲಿ ಸಂದೇಶವೊಂದನ್ನು ಪೋಸ್ಟ್ ಮಾಡಿದ್ದ ಅವರು “ನೀವು ಚಿಂತಿಸಬೇಕಿಲ್ಲ,ಅವರೇನೂ ಮಾಡುವುದಿಲ್ಲ ಎಂದು ಧೈರ್ಯ ತುಂಬಿದ್ದರು. ಮೂರು ದಿನಗಳ ಬಳಿಕ ಅವರ ಹತ್ಯೆ ನಡೆದಿತ್ತು. ಹೀಗಾಗಿ ಈ ಆನ್‌ಲೈನ್ ದ್ವೇಷ ಆಫ್‌ಲೈನ್‌ಗಿಳಿದರೆ ಏನು ಗತಿ ಎಂಬ ಭೀತಿ ಸದಾ ಕಾಡುತ್ತಿರುತ್ತದೆ” ಎಂದೂ ಅಯ್ಯೂಬ್ ಹೇಳಿದ್ದಾರೆ.

ಮೋದಿ ಸರಕಾರದ ಕಟು ಟೀಕಾಕಾರರಾಗಿರುವ ಅಯ್ಯೂಬ್,ಬುಧವಾರ ಖಾನ್ ಹತ್ಯೆ ಕುರಿತು ಟ್ವೀಟಿಸಿದ ಬಳಿಕ ಅವರ ವಿರುದ್ಧ ದಾಳಿ ಆರಂಭಗೊಂಡಿತ್ತು. ‘ಕಾಶ್ಮೀರ ವಿಷಯದಲ್ಲಿ ಮಾನವತಾವಾದಿಗಳಿಲ್ಲ, ಇರುವುದು ಅನುಕೂಲಕರ ರಾಷ್ಟ್ರವಾದಿಗಳು ಮಾತ್ರ ’ಎಂದು ಟ್ವೀಟಿಸಿದ್ದ ಅವರು, ತನ್ನ ಪತಿಯ ಸಾವಿಗೆ ಸಿಆರ್‌ಪಿಎಫ್ ಕಾರಣ ಎಂದು ಖಾನ್ ಅವರ ಪತ್ನಿ ದೂರಿದ್ದನ್ನು ಉಲ್ಲೇಖಿಸಿ ಗುರುವಾರ ಇನ್ನೊಂದು ಟ್ವೀಟ್‌ನ್ನು ಮಾಡಿದ್ದರು.

ಸಿಆರ್‌ಪಿಎಫ್ ಸಿಬ್ಬಂದಿಗಳು ಖಾನ್‌ರನ್ನು ಕಾರಿನಿಂದ ಹೊರಗೆಳೆದು ತುಂಬ ಹತ್ತಿರದಿಂದ ಗುಂಡು ಹಾರಿಸಿದ್ದರು ಎಂದು ಅವರ ಕುಟುಂಬವು ಆನ್‌ಲೈನ್ ವೀಡಿಯೊ ಸಂದೇಶದಲ್ಲಿ ಆರೋಪಿಸಿದೆ. ಕಾಶ್ಮೀರದ ಐಜಿಪಿ ವಿಜಯ ಕುಮಾರ ಅವರು ಈ ಆರೋಪವನ್ನು ತಳ್ಳಿಹಾಕಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X