ಪುತ್ತೂರಿನಲ್ಲಿ 3 ಕೊರೋನ ಪಾಸಿಟಿವ್ ಪ್ರಕರಣ
ಪುತ್ತೂರು: ನಗರಸಭಾ ವ್ಯಾಪ್ತಿಯಲ್ಲಿ 2 ಮತ್ತು ಗ್ರಾಮಾಂತರ ಪ್ರದೇಶದಲ್ಲಿ 1 ಪ್ರಕರಣ ಸೇರಿದಂತೆ ಪುತ್ತೂರಿನಲ್ಲಿ ಶನಿವಾರ 3 ಕೊರೋನ ಪ್ರಕರಣ ಪತ್ತೆಯಾಗಿದೆ. ನಗರಸಭಾ ವ್ಯಾಪ್ತಿಯಲ್ಲಿನ ಒಂದೂವರೆ ವರ್ಷದ ಮಗು ಮತ್ತು 26 ವರ್ಷದ ಯುವಕನಲ್ಲಿ ಕೊರೋನ ದೃಢಪಟ್ಟಿದೆ.
ಒಳಮೊಗ್ರು ಗ್ರಾಮದ ಪರ್ಪುಂಜದ ವ್ಯಕ್ತಿಯೊಬ್ಬರಲ್ಲಿ ಕೊರೋನ ದೃಢಪಟ್ಟಿದೆ. ಈ ಮೂಲಕ ಪುತ್ತೂರು ಮತ್ತು ಕಡಬ ತಾಲೂಕುಗಳಲ್ಲಿ ಒಟ್ಟು 27 ಪ್ರಕರಣಗಳು ವರದಿಯಾಗಿವೆ.
ನಗರದ ಖಾಸಗಿ ಆಸ್ಪತ್ರೆಯ ನಾಲ್ವರು ವೈದ್ಯರು ಹಾಗೂ ಸಿಬಂದಿ ಮತ್ತು ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯರು ಸಿಬಂದಿ ಸೇರಿ ಶನಿವಾರ 20 ಮಂದಿಯ ಗಂಟಲು ದ್ರವ ಪರೀಕ್ಷಾ ವರದಿ ನೆಗೆಟಿವ್ ಬಂದಿದೆ. ರೋಗಿಗಳಲ್ಲಿ ಕೊರೋನ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಈ ಎಲ್ಲಾ 20 ಮಂದಿ ಕಾರಂಟೈನ್ಗೆ ಒಳಗಾಗಿದ್ದರು. ಇವರ ಗಂಟಲು ದ್ರವವನ್ನು ಪರೀಕ್ಷೆಗಾಗಿ ಮಂಗಳೂರಿಗೆ ಕಳುಹಿಸಲಾಗಿತ್ತು. ಇದೀಗ ವರದಿ ನೆಗೆಟಿವ್ ಬಂದಿದೆ.
Next Story