ಉಪ್ಪಳ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಲಾರಿ
ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ 66 ರ ಉಪ್ಪಳ ಪೇಟೆ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಸೋಮವಾರ ಬೆಳಗ್ಗಿನ ಜಾವ ಸಂಭವಿಸಿದೆ. ಲಾರಿ ಚಾಲಕ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.
ಮಂಗಳೂರು ಕಡೆಯಿಂದ ಕಣ್ಣೂರು ಕಡೆ ತೆರಳುತ್ತಿದ್ದ ಈ ಲಾರಿ ಉಪ್ಪಳ ಪೇಟೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಅಪಘಾತದಿಂದಾಗಿ ಹೆದ್ದಾರಿ ಸಂಚಾರ ಕೆಲಕಾಲ ಸ್ಥಗಿತಗೊಂಡಿತು. ಮಂಜೇಶ್ವರ ಪೊಲೀಸರು ಸಂಚಾರ ಸುಗಮಗೊಳಿಸಿದರು.
Next Story