ಇದುವರೆಗೆ ಬೆಂಗಳೂರಿನ 335 ಪೊಲೀಸರಿಗೆ ಕೊರೋನ ಸೋಂಕು ದೃಢ
![ಇದುವರೆಗೆ ಬೆಂಗಳೂರಿನ 335 ಪೊಲೀಸರಿಗೆ ಕೊರೋನ ಸೋಂಕು ದೃಢ ಇದುವರೆಗೆ ಬೆಂಗಳೂರಿನ 335 ಪೊಲೀಸರಿಗೆ ಕೊರೋನ ಸೋಂಕು ದೃಢ](https://www.varthabharati.in/sites/default/files/images/articles/2020/07/6/249908-1594043107.jpg)
ಸಾಂದರ್ಭಿಕ ಚಿತ್ರ
ಬೆಂಗಳೂರು, ಜು.6: ಕೇವಲ 48 ಗಂಟೆಯೊಳಗೆ 55 ಪೊಲೀಸ್ ಸಿಬ್ಬಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಇದರಿಂದ ನಗರ ವ್ಯಾಪ್ತಿಯಲ್ಲಿ ಸೋಂಕಿತ ಪೊಲೀಸರ ಸಂಖ್ಯೆ 335ಕ್ಕೆ ಏರಿಕೆಯಾಗಿದೆ.
ಕೋವಿಡ್-19 ಸೋಂಕಿಗೆ ಐವರು ಸಾವನ್ನಪ್ಪಿದ್ದು, 304 ಸಕ್ರಿಯ ಪ್ರಕರಣಗಳಿವೆ. ಇನ್ನು, ಸೋಂಕು ಪತ್ತೆಯಾದ 25 ಪೊಲೀಸ್ ಠಾಣೆಗಳನ್ನು ಸೀಲ್ಡೌನ್ ಮಾಡಲಾಗಿದೆ. ಪ್ರಾಥಮಿಕ ಸಂಪರ್ಕ ಹೊಂದಿದ್ದ ನೂರಾರು ಮಂದಿಯನ್ನು ಕ್ವಾರಂಟೈನ್ ಪ್ರಕ್ರಿಯೆಗೆ ಒಳಪಡಿಸಲಾಗಿದೆ.
ಸೋಮವಾರ ಇಲ್ಲಿನ ಕಾಡುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ಐವರಿಗೆ ಪಾಸಿಟಿವ್ ವರದಿ ಬಂದಿದ್ದು, ರಾಜಾಜಿನಗರ ಸಂಚಾರ ಠಾಣೆಯ ಸಿಬ್ಬಂದಿಗೂ ಸೋಂಕು ತಗಲಿದೆ ಎಂದು ಹೇಳಲಾಗುತ್ತಿದೆ.
Next Story