Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲಾಕ್‌ಡೌನ್‌ನಿಂದ ಉಡುಪಿಯಲ್ಲಿ ಹೆಚ್ಚಿದ...

ಲಾಕ್‌ಡೌನ್‌ನಿಂದ ಉಡುಪಿಯಲ್ಲಿ ಹೆಚ್ಚಿದ ಕೃಷಿ ಒಲವು

2575 ಕ್ವಿಂಟಾಲ್ ಬೀಜ ಖರೀದಿ: ಗುರಿ ಮೀರಿದ ಸಾಧನೆ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ6 July 2020 8:00 PM IST
share
ಲಾಕ್‌ಡೌನ್‌ನಿಂದ ಉಡುಪಿಯಲ್ಲಿ ಹೆಚ್ಚಿದ ಕೃಷಿ ಒಲವು

ಉಡುಪಿ, ಜು.6: ಕೊರೋನ ಅಟ್ಟಹಾಸಕ್ಕೆ ಇಡೀ ಜಗತ್ತೇ ನಲುಗಿದ್ದು, ಇದರಿಂದ ದೇಶ ವಿದೇಶಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅನೇಕ ಮಂದಿ ತಮ್ಮ ಹಳ್ಳಿಗಳಿಗೆ ಮರಳಿದ್ದಾರೆ. ಹೀಗೆ ನಿರುದ್ಯೋಗಿಗಳಾಗಿರುವ ಗಲ್ಫ್, ಮುಂಬೈ ಮತ್ತು ಬೆಂಗಳೂರಿನಿಂದ ಆಗಮಿಸಿರುವ ಉಡುಪಿ ಜಿಲ್ಲೆಯ ಹಲವು ಮಂದಿ, ಕೃಷಿ ಬಗ್ಗೆ ಹೆಚ್ಚಿನ ಒಲವು ವ್ಯಕ್ತಪಡಿಸಿದ್ದಾರೆ. ಇದರ ಪರಿಣಾಮ ಹಡಿಲು ಬಿಟ್ಟಿದ್ದ ಕೃಷಿ ಭೂಮಿಯಲ್ಲೂ ಈ ಬಾರಿ ಉಳುಮೆ ಮಾಡಲಾಗುತ್ತಿದೆ.

ಉಡುಪಿ ಕೃಷಿ ಇಲಾಖೆ ಈ ಮುಂಗಾರಿಗೆ 36 ಸಾವಿರ ಹೆಕ್ಟೇರ್‌ನಲ್ಲಿ ಭೂಮಿಯಲ್ಲಿ ಕೃಷಿ ಮಾಡುವ ಗುರಿಯನ್ನು ಹೊಂದಿದೆ. ಆದರೆ ಲಾಕ್‌ಡೌನ್‌ನಿಂದಾಗಿ ಹಿಂದೆಂದಿಗಿಂತ ಹೆಚ್ಚಿನ ರೈತರು ಕೃಷಿ ಬಗ್ಗೆ ಒಲವು ವ್ಯಕ್ತಪಡಿಸಿರುವುದರಿಂದ ಇಲಾಖೆಯು ಈ ಬಾರಿ ಗುರಿ ಮೀರಿ ಸಾಧನೆ ಮಾಡುವ ಸಾಧ್ಯತೆಗಳಿವೆ.

ಈ ಬಾರಿ ಜಿಲ್ಲೆಯ ಒಟ್ಟು ಒಂಭತ್ತು ರೈತ ಸಂಪರ್ಕ ಕೇಂದ್ರಗಳಲ್ಲಿ ಜೂನ್ ಅಂತ್ಯದವರೆಗೆ 5963 ಮಂದಿ ರೈತರು ಒಟ್ಟು 2575 ಕ್ವಿಂಟಾಲ್ ಬಿತ್ತನೆ ಬೀಜವನ್ನು ಖರೀದಿಸಿದ್ದಾರೆ. ಕಳೆದ ವರ್ಷ 5116 ರೈತರು 2204 ಕಿಂಟ್ವಾಲ್ ಬಿತ್ತನೆ ಬೀಜವನ್ನು ಪಡೆದುಕೊಂಡಿದ್ದರು. ಅದೇ ರೀತಿ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರ(ಕೆವಿಕೆ)ದಲ್ಲಿ 170 ಕ್ವಿಂಟಾಲ್ ಬಿತ್ತನೆ ಬೀಜವನ್ನು ರೈತರು ಈಗಾಗಲೇ ಖರೀದಿಸಿದ್ದಾರೆ.

ಎಂ.ಒ.4ಗೆ ಬಹುಬೇಡಿಕೆ: ಈ ಬಾರಿ ಬಹುಬೇಡಿಕೆ ವ್ಯಕ್ತವಾಗಿರುವುದರಿಂದ ಎಲ್ಲ ಕೇಂದ್ರಗಳಲ್ಲಿ ದಾಸ್ತಾನು ಇರಿಸಿದ್ದ ಕರಾವಳಿಯ ಮಣ್ಣಿಗೆ ಒಗ್ಗುವ ಎಂ.ಒ.4 ಬಿತ್ತನೆ ಬೀಜ ಈಗಾಗಲೇ ಖಾಲಿಯಾಗಿದೆ.

ಕಳೆದ ವರ್ಷ ಇಲಾಖೆಯು ಬೇಡಿಕೆಗೆ ಅನುಗುಣವಾಗಿ ಕರ್ನಾಟಕ ಬೀಜ ನಿಗಮದಿಂದ ಸುಮಾರು 2000 ಕ್ವಿಂಟಾಲ್ ಎಂಓ 4 ಬಿತ್ತನೆ ಬೀಜವನ್ನು ತರಿಸಿತ್ತು. ಆದರೆ ಈ ವರ್ಷ ನಿಗಮದಲ್ಲಿದ್ದ ಎಲ್ಲ ದಾಸ್ತಾನು ಅಂದರೆ 2518 ಕ್ವಿಂಟಾಲ್ ಬೀಜಗಳನ್ನು ತರಿಸಲಾಗಿತ್ತು. ಆದರೂ ಹೆಚ್ಚಿನ ಬೇಡಿಕೆ ಇರುವು ದರಿಂದ ಎಂಓ 4 ಬೀಜ ಅವಧಿಗೆ ಮುನ್ನವೇ ಖಾಲಿಯಾಗಿದೆ.

ಪ್ರತಿ ವರ್ಷವೂ 1800-2000 ಕ್ವಿಂಟಾಲ್‌ವರೆಗೆ ಎಂ.ಒ.4 ಬಿತ್ತನೆ ಬೀಜವನ್ನು ರೈತರು ಖರೀದಿಸುತ್ತಿದ್ದರು. ಆದರೆ ಇದಕ್ಕೆ ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಬೇಡಿಕೆ ವ್ಯಕ್ತವಾಗಿದೆ. ಈ ತಳಿಯ ದಾಸ್ತಾನು ಖಾಲಿಯಾಗಿದ್ದು, ಇದಕ್ಕೆ ಪರ್ಯಾಯವಾಗಿ ಉಮಾ, ಜ್ಯೋತಿ ತಳಿಯನ್ನು ರೈತರಿಗೆ ನೀಡಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿ ಸತೀಶ್ ಬಿ. ತಿಳಿಸಿದ್ದಾರೆ.

ರೈತ ಸಂಪರ್ಕ ಕೇಂದ್ರವಲ್ಲದೆ, ಕೆಲವು ಕಡೆ ರೈತರ ಮಧ್ಯೆಯೇ ಬೀಜ ಖರೀದಿಸುವ ಪ್ರಕ್ರಿಯೆ ನಡೆಯುತ್ತದೆ. ಇನ್ನು ಕೆಲವರು ತಾವೇ ಬೀಜವನ್ನು ಸಂಗ್ರಹಿಸಿ ಇಟ್ಟುಕೊಳ್ಳುತ್ತಾರೆ. ಹೀಗೆ ಈ ಬಾರಿ ಕೃಷಿ ಮಾಡುವ ರೈತರ ಸಂಖ್ಯೆ ಇನ್ನು ಹೆಚ್ಚಾಗಿರುವ ಸಾಧ್ಯತೆ ಕೂಡ ಇರುತ್ತದೆ. ಹೊರಗಡೆಯಿಂದ ಮರಳಿ ಬಂದವರು ತಮ್ಮನ್ನು ಮತ್ತೆ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಕೆಲವು ಕಡೆ ಹಡೀಲು ಬಿಟ್ಟ ಭೂಮಿಯಲ್ಲೂ ಕೃಷಿ ಚಟುವಟಿಕೆಯನ್ನು ಆರಂಭಿಸಲಾಗಿದೆ. ಈ ಬಾರಿ ಯಾವತ್ತೂ ಬಾರದ ಹೊಸಬರು ಕೂಡ ಬೀಜ ಖರೀದಿಸಲು ಬಂದಿದ್ದಾರೆ.

-ಸತೀಶ್ ಬಿ., ತಾಂತ್ರಿಕ ಅಧಿಕಾರಿ, ಕೃಷಿ ಇಲಾಖೆ ಉಡುಪಿ

ಕೊರೋನ ಲಾಕ್‌ಡೌನ್‌ನಿಂದಾಗಿ ಬೆಂಗಳೂರು, ಮಹಾರಾಷ್ಟ್ರ, ದುಬೈ ಯಲ್ಲಿ ಕೆಲಸ ಮಾಡುತ್ತಿದ್ದ ನಾವು, ಮೂರು ತಿಂಗಳುಗಳಿಂದ ಊರಿನಲ್ಲಿಯೇ ಇದ್ದೇವೆ. ಸದ್ಯ ಅಲ್ಲಿಗೆ ಮರಳಿ ಕೆಲಸಕ್ಕೆ ಹೋಗುವ ಪರಿಸ್ಥಿತಿ ಇಲ್ಲ. ಆದುದರಿಂದ ನಮ್ಮದೇ ಹಡಿಲು ಬಿದ್ದ ಕೃಷಿಭೂಮಿಯಲ್ಲಿ ಈ ಬಾರಿ ಭತ್ತ ಬೆಳೆಯಲು ಇಚ್ಛಿಸಿದ್ದೇವೆ.

-ಅರುಣ್ ಶೆಟ್ಟಿ, ನೈಲಾಡಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X