Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಜಿಲ್ಲೆಯಲ್ಲಿ ಸೋಮವಾರ 34 ಮಂದಿಗೆ...

ದ.ಕ. ಜಿಲ್ಲೆಯಲ್ಲಿ ಸೋಮವಾರ 34 ಮಂದಿಗೆ ಕೊರೋನ ಪಾಸಿಟಿವ್

ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಇಳಿಮುಖ

ವಾರ್ತಾಭಾರತಿವಾರ್ತಾಭಾರತಿ6 July 2020 9:09 PM IST
share
ದ.ಕ. ಜಿಲ್ಲೆಯಲ್ಲಿ ಸೋಮವಾರ 34 ಮಂದಿಗೆ ಕೊರೋನ ಪಾಸಿಟಿವ್

ಮಂಗಳೂರು, ಜು.6: ರವಿವಾರ ಬರೋಬ್ಬರಿ 147 ಕೊರೋನ ಪ್ರಕರಣಗಳು ಕಂಡುಬಂದು ತೀವ್ರ ಆತಂಕ ಮೂಡಿದ್ದ ದ.ಕ. ಜಿಲ್ಲೆಯಲ್ಲಿ ಸೋಮವಾರ ಕೊರೋನ ಸೋಂಕಿತರ ಸಂಖ್ಯೆ ತಗ್ಗಿದೆ. ಹೊಸದಾಗಿ 34 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಆದರೆ ಚಿಕಿತ್ಸೆ ಫಲಿಸದೆ ಇಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1276ಕ್ಕೆ ಏರಿಕೆಯಾಗಿದೆ.

ಇತ್ತೀಚಿನ ದಿನಗಳಲ್ಲಿ ಮೂಲ ಪತ್ತೆಯಾಗದ ಪ್ರಕರಣಗಳು ಹೆಚ್ಚಿರುವುದು ಕಂಡುಬಂದಿದ್ದರೆ, ಸೋಮವಾರ ಇಂಥ ಒಂದು ಪ್ರಕರಣ ಮಾತ್ರ ದಾಖಲಾಗಿದೆ. ಉಳಿದಂತೆ ತೀವ್ರ ಉಸಿರಾಟ ಸಮಸ್ಯೆಯ ಐಎಲ್‌ಐ- 9 ಪ್ರಕರಣ, 'ಸಾರಿ'- 1 ಪ್ರಕರಣವಿದೆ. ಆಸ್ಪತ್ರೆಗೆ ದಾಖಲಾದ 6 ಮಂದಿಯಲ್ಲಿ ಸೋಂಕು ಕಂಡುಬಂದಿದೆ. 17 ಮಂದಿಗೆ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ ಹರಡಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 30 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಇಬ್ಬರು ಬಲಿ: ಚಿಕಿತ್ಸೆಗೆ ಸ್ಪಂದಿಸದೆ ಒಬ್ಬರು ವೆನ್ಲಾಕ್ ಆಸ್ಪತ್ರೆಯಲ್ಲಿ ಹಾಗೂ ಮತ್ತೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 52 ವರ್ಷ ವಯಸ್ಸಿನ ವ್ಯಕ್ತಿ ಅಧಿಕ ರಕ್ತದೊತ್ತಡ, ಮಧುಮೇಹ, ಹೃದಯ ರೋಗ, ನ್ಯುಮೋನಿಯಾದಿಂದ ಬಳಲುತ್ತಿದ್ದು ಜು.2ರಂದು ವೆನ್ಲಾಕ್ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಸಾವಿಗೀಡಾಗಿದ್ದಾರೆ. ಇನ್ನೊಬ್ಬರು 62 ವರ್ಷದ ವ್ಯಕ್ತಿಯಾಗಿದ್ದು, ಜೂ.27ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರೂ ಕೂಡ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದು ಸೋಮವಾರ ಮೃತಪಟ್ಟಿದ್ದಾರೆ.

30 ಮಂದಿ ಡಿಸ್ಚಾರ್ಜ್: ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಿಂದ ಸೋಮವಾರ ಒಟ್ಟು 30 ಮಂದಿ ಬಿಡುಗಡೆಯಾಗಿದ್ದಾರೆ. ಇವರಲ್ಲಿ ಬಹುತೇಕರು 50 ವರ್ಷದೊಳಗಿನವರೇ ಆಗಿದ್ದರೆ, 60 ವರ್ಷ ದಾಟಿದ ನಾಲ್ವರು ಕೂಡ ಸೇರಿದ್ದಾರೆ. ಗರಿಷ್ಠ 70 ವರ್ಷದ ವ್ಯಕ್ತಿ ಕೂಡ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಇಲ್ಲಿಯವರೆಗೆ ಒಟ್ಟು 584 ಮಂದಿ ಗುಣಮುಖರಾಗಿದ್ದಾರೆ. 668 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

6 ಮಂದಿ ವಾರ್ಡ್‌ಗೆ ಶಿಫ್ಟ್: ರವಿವಾರ 10 ಮಂದಿಯನ್ನು ಐಸಿಯುಗೆ ಸ್ಥಳಾಂತರಿಸಲಾಗಿದ್ದರೆ, ಸೋಮವಾರ ಅವರಲ್ಲಿ ಆರು ಮಂದಿ ಚೇತರಿಸಿಕೊಂಡಿದ್ದು, ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ. ಇನ್ನೂ ಮೂವರಿಗೆ ಐಸಿಯುನಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಇವರಲ್ಲಿ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ 50 ವರ್ಷದ ಮಹಿಳೆಗೆ ವೆಂಟಿಲೇಟರ್ ಅಳವಡಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X