Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೋನ ನಿಯಂತ್ರಣ ತಂಡ ಜವಾಬ್ದಾರಿಯಿಂದ...

ಕೊರೋನ ನಿಯಂತ್ರಣ ತಂಡ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಲಿ: ಉಡುಪಿ ಡಿಸಿ

ವಾರ್ತಾಭಾರತಿವಾರ್ತಾಭಾರತಿ6 July 2020 10:43 PM IST
share
ಕೊರೋನ ನಿಯಂತ್ರಣ ತಂಡ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಲಿ: ಉಡುಪಿ ಡಿಸಿ

ಉಡುಪಿ, ಜು.6: ಜಿಲ್ಲೆಯಲ್ಲಿ ಕೊರೋನ ನಿಯಂತ್ರಣ ಮತ್ತು ಸಾರ್ವಜನಿಕರ ಆರೋಗ್ಯ ಸುರಕ್ಷತೆಗಾಗಿ ರಾಜ್ಯ ಸರಕಾರದ ಸೂಚನೆಯಂತೆ ರಚಿಸಲಾಗಿರುವ 14 ತಂಡಗಳು ಮಹತ್ವದ ಜವಾಬ್ದಾರಿ ಹೊಂದಿದ್ದು, ಪರಸ್ಪರ ಸಮನ್ವಯದಿಂದ ತಮಗೆ ನಿಯೋಜಿಸಿರುವ ಕಾರ್ಯಗಳನ್ನು ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಜಗದೀಶ್ ಸೂಚಿಸಿದ್ದಾರೆ.

ಸೋಮವಾರ ಮಣಿಪಾಲದ ಜಿಪಂ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.
ಕೋವಿಡ್-19 ಪಾಸಿಟಿವ್ ಬಂದ ವ್ಯಕ್ತಿಗಳನ್ನು ಸ್ಥಳಾಂತರಿಸಲು ರಚಿಸಲಾಗಿರುವ ತಂಡದ ಸಿಬ್ಬಂದಿ ಐಸಿಎಂಆರ್ ಪೋರ್ಟಲ್‌ನಲ್ಲಿ ಪಾಸಿಟಿವ್ ವರದಿ ಬಂದ ಕೂಡಲೇ ಸಂಬಂದಪಟ್ಟ ರೋಗಿಯನ್ನು ತಕ್ಷಣ ಆಸ್ಪತ್ರೆಗೆ ಸ್ಥಾಂತರಿಸಲು ವ್ಯವಸ್ಥೆ ಮಾಡಬೇೀಕು. ಜಿಲ್ಲೆಯಲ್ಲಿ ಆಂಬುಲೆನ್ಸ್ ಮಾನಟರಿಂಗ್ ಸಿಸ್ಟಂ ಜಾರಿಗೊಳಿಸಿದ್ದು, ವ್ಯಕ್ತಿಯ ಮನೆಗೆ ಸಮೀಪದ ಆರೋಗ್ಯ ಕೇಂದ್ರದಲ್ಲಿರುವ ಆಂಬುಲೆನ್ಸ್ ಸಹಾಯದೊಂದಿಗೆ ನಿಗದಿತ ಆಸ್ಪತ್ರೆಗೆ ದಾಖಲಿಸಬೇಕು. ತುರ್ತು ಅಗತ್ಯವಿದ್ದಲ್ಲಿ ಖಾಸಗಿ ಆಸ್ಪತ್ರೆಯ ಅಂಬುಲೆನ್ಸ್‌ಗಳನ್ನು ಬಳಿಸಿಕೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಯಾವುದೇ ಕಾರಣಕ್ಕೂ ಪಾಸಿಟಿವ್ ವರದಿ ಬಂದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ವಿಳಂಬ ಸಲ್ಲದು. ವಿಳಂಬ ವಾದಲ್ಲಿ ಇತರರಿಗೂ ಹರಡುವ ಸಂಭವ ಹೆಚ್ಚು ಎಂದರು.

ಜಿಲ್ಲೆಯಲ್ಲಿ ಬೆಡ್ ಮಾನಿಟರಿಂಗ್ ಸಿಸ್ಟಂ ಯೋಜನೆ ಸಿದ್ದಪಡಿಸಲಾಗುತ್ತಿದ್ದು, ಇದರಿಂದ ಯಾವ ಆಸ್ಪತ್ರೆಯಲ್ಲಿ ಎಷ್ಟು ಬೆಡ್‌ಗಳು ಖಾಲಿ ಇವೆ, ಸಮೀಪದ ಆಸ್ಪತ್ರೆ ಎಲ್ಲಿದೆ, ಆ ಆಸ್ಪತ್ರೆಯಲ್ಲಿ ಏನು ಸೌಲಭ್ಯಗಳಿವೆ ಎಂಬ ಮಾಹಿತಿ ಕೂಡಲೆ ಲಭ್ಯವಾಗಲಿದೆ. ಇದರಿಂದ ವೃಥಾ ಆಸ್ಪತ್ರೆಗೆ ಅಲೆಯುವುದು ತಪ್ಪಲಿದೆ. ಜಿಲ್ಲೆಯಲ್ಲಿ ಈಗಾಗಲೇ ವಿವಿಧ ಆಸ್ಪತ್ರೆಗಳಲ್ಲಿ 2400 ಬೆಡ್‌ಗಳನ್ನು ಕೋವಿಡ್- 19 ರೋಗಿಗಳಿಗೆ ಮೀಸಲಿಡಲಾಗಿದ್ದು, ಮುಂಜಾಗ್ರತೆಗಾಗಿ ಇನ್ನೊಂದು ಸುಸಜ್ಜಿತ ಕೋವಿಡ್-19 ಆಸ್ಪತ್ರೆ ಸಿದ್ದಪಡಿಸಿರುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಯ ನರ್ಸ್ ಗಳಿಗೆ ಐಸಿಯುನಲ್ಲಿ ಕಾರ್ಯ ನಿರ್ವಹಣೆಯ ವಿಧಾನ ಕುರಿತಂತೆ ಮಣಿಪಾಲದ ಕೆಎಂಸಿಯಲ್ಲಿ ವಿಶೇಷ ತರಬೇತಿಗೆ ನಿಯೋಜಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಕೋವಿಡ್-19 ರೋಗಿಯ ಸಂಪರ್ಕ ಪತ್ತೆ ಹಚ್ಚುವುದನ್ನು ತ್ವರಿತವಾಗಿ ಮಾಡಿ, ಆತನ ಮೊಬೈಲ್‌ನ ಸಿಡಿಆರ್ ಮೂಲಕ ಪ್ರಾಥಮಿಕ ಸಂಪರ್ಕಿತರ ಮಾಹಿತಿ ಪಡೆಯಬೇಕು. ರೋಗಿಯ ಸಂಪರ್ಕದ ಮಾಹಿತಿ ಪಡೆಯುವಲ್ಲಿ ವಿಳಂಬವಾದಲ್ಲಿ ಅದು ಇಡೀ ಸಮಾಜಕ್ಕೆ ಕಂಟಕವಾಗಲಿದೆ. ಇದಕ್ಕಾಗಿ ಪ್ರತಿ ತಾಲೂಕಿಗೆ ವಿವಿಧ ಇಲಾಖೆಗಳ 50 ಮಂದಿ ಸಿಬ್ಬಂದಿಯನ್ನು ನಿಯೋಜಿಸಿ ಅವರಿಗೆ ಅಗತ್ಯ ತರಬೇತಿ ನೀಡಬೇಕು. ಈ ತಂಡ ಅತ್ಯಂತ ಕ್ಷಿಪ್ರ ಮತ್ತು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದರು.

ಲೈಸನ್ಸ್ ರದ್ದು: ಜಿಲ್ಲೆಯಲ್ಲಿ ಶೀತ, ಕೆಮ್ಮ, ನೆಗಡಿ, ಜ್ವರದಿಂದ ಬಳಲುತ್ತಿರುವ ರೋಗಿಗಳ ವಿವರ ನೀಡದ ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್‌ಗಳ ಲೈಸೆನ್ಸ್ ರದ್ದುಗೊಳಿಸುವುದಾಗಿ ಎಚ್ಚರಿಕೆ ನೀಡಿದ ಡಿಸಿ, ಪ್ರತಿದಿನ ವರದಿ ನೀಡುವಂತೆ ಹಾಗೂ ಶೀಘ್ರದಲ್ಲಿ ಪ್ರಕರಣ ಪತ್ತೆ ಹಚ್ಚಿದ್ದಲ್ಲಿ ಸಮುದಾಯಕ್ಕೆ ಹರಡದಂತೆ ತಡೆಯಲು ಮತ್ತು ರೋಗಿಯ ಜೀವ ಉಳಿಸಲು ಸಾಧ್ಯವಾಗಲಿದೆ ಎಂದರು.

ಎಲ್ಲಾ ಆಶಾ ಮತ್ತು ಆರೋಗ್ಯ ಕಾರ್ಯಕರ್ತೆಯರು ಪ್ರತಿ ದಿನ ತಮ್ಮ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಿ, ಶೀತ, ಕೆಮ್ಮು, ನೆಗಡಿ, ಜ್ವರದಿಂದ ಬಳಲುತ್ತಿರುವ ರೋಗಿಗಳ ವರದಿ ನೀಡಬೇಕು. ಇಂತಹ ಲಕ್ಷಣಗಳಿದ್ದು, ರೋಗಿಯ ತಪಾಸಣೆ ಬಿಟ್ಟು ಹೋಗಿ ಆ ವ್ಯಕ್ತಿಗೆ ಕೋವಿಡ್‌ನಿಂದ ಮರಣ ಸಂಭವಿಸಿದ್ದಲ್ಲಿ ಸಂಬಂದಪಟ್ಟ ವ್ಯಾಪ್ತಿಯ ಸಿಬ್ಬಂದಿಗಳ ನಿರ್ಲಕ್ಷ್ಯತನದ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದರು.

ಕಂಟೈನ್‌ಮೆಂಟ್ ವಲಯದ ಕುರಿತು ನಿಯಮ ಬದಲಾಗಿದ್ದು, ಸ್ಥಳಿಯವಾಗಿ 2-3 ಪ್ರಕರಣ ಕಂಡುಬಂದಲ್ಲಿ ಸಂಬಂದಪಟ್ಟ ವ್ಯಕ್ತಿಯ ಮನೆಯ ಬದಲಾಗಿ ಇಡೀ ಗ್ರಾಮವನ್ನು ಸೀಲ್‌ಡೌನ್ ಮಾಡಿ, ಆ ಭಾಗದ ಸಾರ್ವಜನಿಕರನ್ನು ವ್ಯಾಪಕವಾಗಿ ಪರೀಕ್ಷೆಗೆ ಒಳಪಡಿಸಬೇಕು. ಜಿಲ್ಲೆಯಲ್ಲಿ ಪ್ರತಿದಿನ 650 ಮಂದಿಯ ಸ್ಯಾಂಪಲ್ ಪರೀಕ್ಷೆ ನಡೆಸುವಂತೆ ನಿರ್ದೇಶನವಿದ್ದು, ಜಿಲ್ಲೆಯ ಒಂದೇ ಬಾಗದಲ್ಲಿ ಸ್ಯಾಂಪಲ್ ತೆಗೆಯದೇ, ಜಿಲ್ಲೆಯಾದ್ಯಂತ ವಿವಿಧ ವರ್ಗಗಳಿಗೆ ಸೇರಿದ ಸಾರ್ವಜನಿಕರ ಸ್ಯಾಂಪಲ್ ತೆಗದು ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲೆಯಲ್ಲಿ ಕೋವಿಡ್ ವಾರಿಯರ್ಸ್‌ಗಳಿಗೆ ಸನ್ಮಾನ ಕಾರ್ಯಕ್ರಮಗಳು ನಡೆಯುತ್ತಿದ್ದು, ಇಂತಹ ಕಾರ್ಯಕ್ರಮಗಳಲ್ಲಿ ಯಾವುದೇ ಸುರಕ್ಷಿತ ಅಂತರ ಪಾಲನೆಯಾಗುತ್ತಿಲ್ಲ. ಇನ್ನು ಮುಂದೆ ಇಂತಹ ಸನ್ಮಾನ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಿಬ್ಬಂದಿಗಳಿಗೆ ಹಾಗೂ ಇಂತಹ ಕಾರ್ಯಕ್ರಮ ಆಯೋಜಿಸುವ ಸ್ವಯಂಸೇವಾ ಸಂಸ್ಥೆಗಳು ಮತ್ತು ಆಯೋಜಕರ ವಿರುದ್ದವೂ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಕೋವಿಡ್ ನಿಯಂತ್ರಣ ನಿಯಮಗಳನ್ವಯ ಈ ರೀತಿಯ ಯಾವುದೇ ಸಮಾರಂಭಗಳನ್ನು ನಡೆಸುವುದಕ್ಕೆ ಅನುಮತಿ ಇಲ್ಲ. ಕೋವಿಡ್ ವಿರುದ್ದದ ನಿಜವಾದ ಹೋರಾಟ ಈಗ ಆರಂಭವಾಗಿದೆ, ಸನ್ಮಾನ ಕಾರ್ಯಕ್ರಮ ಮಾಡಿಕೊಂಡು ಮೆರೆಯುವ ಗಳಿಗೆ ಇದಲ್ಲ. ಕೊರೋನ ಮುಗಿದ ನಂತರ ಪ್ರತಿಯೊಬ್ಬರಿಗೂ ಜಿಲ್ಲಾಡಳಿತದಿಂದಲೇ ಸನ್ಮಾನ ಆಯೋಜಿಸಲಾಗುವುದು ಎಂದರು.

ಜಿಲ್ಲೆಯಲ್ಲಿ ಕೋವಿಡ್‌ನಿಂದ ಮರಣ ಸಂಭವಿಸಿದಲ್ಲಿ, ಶವಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಂತೆ ರಚಿಸಲಾಗಿರುವ ತಂಡವು, ಎಲ್ಲಾ ನಗರ ಸ್ಥಳಿಯ ಸಂಸ್ಥೆಗಳಲ್ಲಿ ನಿಗದಿತ ಜಾಗ ಗುರುತಿಸುವಂತೆ ಹಾಗೂ ನಿಯಮಗಳನ್ವಯ ಯಾವುದೇ ಲೋಪವಾಗದಂತೆ ಶವ ಸಂಸ್ಕಾರ ನಡೆಸುವಂತೆ ತಿಳಿಸಿದರು.

ಕೋವಿಡ್ ನಿಯಂತ್ರಣಕ್ಕೆ ರಚಿಸಲಾಗಿರುವ ತಂಡಗಳಿಗೆ , ಸಂದರ್ಭಕ್ಕೆ ತಕ್ಕಂತೆ ಸ್ವಯಂ ನಿರ್ಧಾರ ಕೈಗೊಳ್ಳುವ ಸಂಪೂರ್ಣ ಅಧಿಕಾರ ನೀಡಿದ್ದು, ಯಾವುದೇ ಸಂದರ್ಭದಲ್ಲಿ ಲೋಪಗಳಾದಲ್ಲಿ ಸಂಬಂದಪಟ್ಟ ತಂಡ ಮುಖ್ಯಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಪಂ ಉಪ ಕಾರ್ಯದಶಿ ಕಿರಣ್ ಫೆಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ 14 ತಂಡಗಳ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X