Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಖಾಸಗಿ ಶಿಕ್ಷಕರಿಗೆ ಎರಡು ದಿನಗಳ ವೇತನ...

ಖಾಸಗಿ ಶಿಕ್ಷಕರಿಗೆ ಎರಡು ದಿನಗಳ ವೇತನ ನೀಡಿ: ಸರಕಾರಿ ಶಿಕ್ಷಕರಿಗೆ ಸಚಿವ ಸುರೇಶ್ ಕುಮಾರ್ ಮನವಿ

ವಾರ್ತಾಭಾರತಿವಾರ್ತಾಭಾರತಿ6 July 2020 11:35 PM IST
share
ಖಾಸಗಿ ಶಿಕ್ಷಕರಿಗೆ ಎರಡು ದಿನಗಳ ವೇತನ ನೀಡಿ: ಸರಕಾರಿ ಶಿಕ್ಷಕರಿಗೆ ಸಚಿವ ಸುರೇಶ್ ಕುಮಾರ್ ಮನವಿ

ಬೆಂಗಳೂರು, ಜು.6: ಕೊರೋನ ಕಾಲಘಟ್ಟದಲ್ಲಿನ ಸಂಕಷ್ಟದ ಹಿನ್ನೆಲೆಯಲ್ಲಿ ಆರ್ಥಿಕವಾಗಿ ತೀವ್ರ ದುಃಸ್ಥಿತಿಯಲ್ಲಿರವ ಸಾರ್ವಜನಿಕ ಶಿಕ್ಷಣ ಇಲಾಖೆಯ ಖಾಸಗಿ ಅನುದಾನ ರಹಿತ ಶಾಲೆಗಳ ಶಿಕ್ಷಕರ ನೆರವಿಗೆ ಇಲಾಖೆಯ ಸರಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ಧಾವಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.

ಸೋಮವಾರ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಸಚಿವರು, ಖಾಸಗಿ ಶಾಲಾ ಶಿಕ್ಷಕರು ತೀವ್ರ ಸಂಕಷ್ಟದಲ್ಲಿರುವುದನ್ನು ನಮ್ಮ ಇಲಾಖೆ ಗಮನಿಸಿದೆ. ಈ ಕುರಿತು ಸಾರ್ವಜನಿಕವಾಗಿಯೂ ಹೆಚ್ಚಿನ ಕಳಕಳಿ ವ್ಯಕ್ತವಾಗಿದೆ. ಇಂತಹ ಸಂಕಷ್ಟದ ಸಮಯದಲ್ಲಿ ಅವರ ನೆರವಿಗೆ ನಾವು ಧಾವಿಸುವುದು ಅಗತ್ಯವೆಂಬುದನ್ನು ನಾವೆಲ್ಲರೂ ಕಂಡುಕೊಳ್ಳಬೇಕಾದ ಸಂದರ್ಭ ಇದಾಗಿದೆ ಎಂದರು.     

ಇದು ನಮ್ಮೆಲ್ಲರ ಸಾಮಾಜಿಕ ಜವಾಬ್ದಾರಿಯೂ ಸಹ ಆಗಿದೆ. ಹಾಗಾಗಿ ನಮ್ಮ ಶಿಕ್ಷಕ ಬಂಧುಗಳು ಒಂದು ಇಲ್ಲವೇ ಎರಡು ದಿನಗಳ ವೇತನವನ್ನು ನೀಡುವ ಮೂಲಕ ನಮ್ಮ ಸಾಮಾಜಿಕ ಹೊಣೆಗಾರಿಕೆಯನ್ನು ಪ್ರದರ್ಶಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

ಸಂಕಷ್ಟದಲ್ಲಿರುವ ಖಾಸಗಿ ಶಾಲಾ ಶಿಕ್ಷಕರ ನೆರವಿಗೆ ಹೇಗೆ ಬರಬಹುದೆಂಬ ಕುರಿತು ಸರಕಾರದ ಮಟ್ಟದಲ್ಲಿಯೂ ಚಿಂತನೆ ನಡೆದಿದೆ. ಇಲಾಖೆಯ ಲಭ್ಯ ಸಂಪನ್ಮೂಲಗಳ ಮೂಲಕವೂ ಕಷ್ಟದಲ್ಲಿರುವ ನಮ್ಮ ಶಿಕ್ಷಕರಿಗೆ ಇತಿಮಿತಿಗಳಲ್ಲಿ ಆರ್ಥಿಕ ಸಹಕಾರ ನೀಡಲು ಸರಕಾರ ಸಹ ಅವಕಾಶಗಳನ್ನು ಅವಲೋಕಿಸುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ಶಿಕ್ಷಕರಿಗೆ ನೆರವಾಗಲು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿಯು ತಮ್ಮ ಒಂದು ತಿಂಗಳ ವೇತನ ನೀಡಲು ಮುಂದಾಗಿದ್ದಾರೆ. ನಾನೂ ಸಹ ನನ್ನ ಪಾಲನ್ನು ನೀಡುವೆ ಎಂದು ಹೇಳಿರುವ ಸುರೇಶ್ ಕುಮಾರ್, ನಮ್ಮ ಶಿಕ್ಷಕರು ಉದಾರತೆ ಮೆರೆಯುವ ಮೂಲಕ ಸಮಾಜಕ್ಕೆ ಇಂದು ಅವಶ್ಯವಿರುವ ಸಕಾರಾತ್ಮಕ ಸಂದೇಶ ನೀಡಬೇಕೆಂದು ಮನವಿ ಮಾಡಿದ್ದಾರೆ.

ಸರಕಾರ ತನ್ನ ಕಠಿಣ ಪರಿಸ್ಥಿತಿಯಲ್ಲಿಯೂ ನಮ್ಮ ಶಿಕ್ಷಕರ ವೇತನ ಭತ್ಯೆಗಳನ್ನು ನೀಡಲು ಯಾವುದೇ ವಿಳಂಬ ಮಾಡಿಲ್ಲ. ಈ ಸಂದರ್ಭದಲ್ಲಿ ನಾವೆಲ್ಲ ಮಾನವೀಯ ಗುಣವನ್ನು ಮರೆಯಬೇಕಿದೆ. ಆ ಮೂಲಕ ನಮ್ಮ ಖಾಸಗಿ ಶಾಲಾ ಶಿಕ್ಷಕರ ನೆರವಿಗೆ ನಮ್ಮ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಶಿಕ್ಷಕರು ಮುಂದೆ ಬರಬೇಕೆಂದು ಸುರೇಶ್ ಕುಮಾರ್ ಶಿಕ್ಷಕ ಸಮೂಹದಲ್ಲಿ ಮನವಿ ಮಾಡಿದ್ದಾರೆ.

ಕೊರೋನ ಸಂಕಷ್ಟದ ಸಮಯದಲ್ಲಿ ಹಲವಾರು ರೀತಿಯ ವೃತ್ತಿ ನಿರತರು ಸಂಕಷ್ಟದಲ್ಲಿದ್ದಾರೆ. ಆದರೆ ರಾಷ್ಟ್ರ ನಿರ್ಮಾತೃಗಳು ಹಾಗೂ ನಮ್ಮ ಮಕ್ಕಳಿಗಾಗಿ ದುಡಿಯುತ್ತಿರುವ ಶಿಕ್ಷಕರು ಸಂಕಷ್ಟದಲ್ಲಿದ್ದಾರೆ. ಅವರ ನೆರವಿಗೆ ಮುಂದೆ ಬರುವುದು ಸಮಾಜದ ಜವಾಬ್ದಾರಿಯಾಗಿದ್ದು, ಅದನ್ನು ನಮ್ಮ ಶಿಕ್ಷಕ ಸಮುದಾಯ ಪ್ರದರ್ಶಿಸುವ ಸಮಯ ಇದಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X