ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ: ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಆಯ್ಕೆ
ಉಡುಪಿ, ಜು.7: ಉಡುಪಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಮಂದಾರ್ತಿ ಕೃಷಿ ಕ್ಷೇತ್ರ ಸತೀಶ್ ಶೆಟ್ಟಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೋಟ ಕ್ಷೇತ್ರದ ಕೃಷಿಕ ಕೃಷ್ಣ ಪೂಜಾರಿ ಪಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದು ನಾಮಪತ್ರ ಮಾತ್ರ ಸಲ್ಲಿಕೆಯಾದ ಕಾರಣ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಶೆಟ್ಟಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಕೃಷ್ಣ ಪೂಜಾರಿ ಪಿ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಉಡುಪಿ ತಹಶೀಲ್ದಾರ್ ಅವರ ಪ್ರಕಟಣೆ ತಿಳಿಸಿದೆ.
Next Story