ಪತ್ರಕರ್ತ ಅಮಿಶ್ ದೇವಗನ್ ಬಂಧನದಿಂದ ರಕ್ಷಣೆ ಮುಂದುವರಿಸಿದ ಸುಪ್ರೀಂಕೋರ್ಟ್
ಧಾರ್ಮಿಕ ಭಾವನೆ ಧಕ್ಕೆ ಉಂಟು ಮಾಡಿದ ಆರೋಪ
ಹೊಸದಿಲ್ಲಿ, ಜು.8: ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡಿದ ಆರೋಪ ಎದುರಿಸುತ್ತಿರುವ ಪತ್ರಕರ್ತ ಅಮಿಶ್ ದೇವಗನ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರಗಿಸಬಾರದು ಎಂದು ಸೂಚಿಸಿರುವ ಸುಪ್ರೀಂಕೋರ್ಟ್, ಅವರಿಗೆ ಬಂಧನದಿಂದ ರಕ್ಷಣೆಯನ್ನು ಮುಂದುವರಿಸಿದೆ.
ದೇವಗನ್ ವಿರುದ್ಧ ಸಲ್ಲಿಸಲಾಗಿರುವ ಹಲವು ಎಫ್ಐಆರ್ ಗಳನ್ನು ಉಲ್ಲೇಖಿಸಿರುವ ಸುಪ್ರೀಂಕೋರ್ಟ್, ಈ ಕುರಿತ ತನಿಖೆಯನ್ನು ಅಮಾನತುಗೊಳಿಸಿರುವುದಾಗಿ ತಿಳಿಸಿದೆ.
ಕಳೆದ ವಿಚಾರಣೆ ಸಂದರ್ಭ ಸುಪ್ರೀಂ ಸೂಚಿಸಿದಂತೆ, ವಿಚಾರಣೆಯ ಸ್ಥಿತಿ ವರದಿಯನ್ನು ಸಲ್ಲಿಸಿರುವುದಾಗಿ ದೇವಗನ್ ಪರ ವಕೀಲ ಸಿದ್ದಾರ್ಥ ಲುಥ್ರಾ ನ್ಯಾಯಾಲಯಕ್ಕೆ ತಿಳಿಸಿದರು. ದೇವಗನ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರಗಿಸದಂತೆ ಜೂನ್ 26ರಂದು ಆದೇಶಿಸಿದ್ದ ಸುಪ್ರೀಂಕೋರ್ಟ್, ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದವರಿಗೆ ಹಾಗೂ ರಾಜಸ್ತಾನ, ತೆಲಂಗಾಣ ಮತ್ತು ಮಧ್ಯಪ್ರದೇಶ ರಾಜ್ಯ ಸರಕಾರಗಳಿಗೆ ನೋಟಿಸ್ ಜಾರಿಗೊಳಿಸಿತ್ತು.
Next Story