ಕಾಸರಗೋಡಿಗೆ ಕರ್ನಾಟಕದಿಂದ ಹಣ್ಣು, ತರಕಾರಿ ತರುವ ವಾಹನಗಳಿಗೆ ಪಾಸ್ ಕಡ್ಡಾಯ
ಸಾಂದರ್ಭಿಕ ಚಿತ್ರ
ಕಾಸರಗೋಡು, ಜು.8: ಕರ್ನಾಟಕದಿಂದ ಕಾಸರಗೋಡು ಜಿಲ್ಲೆಗೆ ತರಕಾರಿ, ಹಣ್ಣುಹಂಪಲುಗಳನ್ನು ತರಲು ವಾಹನಗಳಿಗೆ ಪಾಸ್ ಕಡ್ಡಾಯಗೊಳಿಸಲಾಗಿದೆ.
ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕೊರೋನ ನಿಯಂತ್ರಣ ಸಮಿತಿಯ ಸಭೆ ಈ ತೀರ್ಮಾನ ತೆಗೆದುಕೊಂಡಿದೆ.
ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್.ಟಿ.ಒ) ಪಾಸ್ ಮಂಜೂರುಗೊಳಿಸಲಿದೆ. ವಾಹನ ಚಾಲಕ ಹಾಗೂ ಇತರ ಸಿಬ್ಬಂದಿ ಏಳು ದಿನಗಳಿಗೊಮ್ಮೆ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆಗೆ ಒಳಗಾಗಿ ವೈದ್ಯಕೀಯ ಪ್ರಮಾಣ ಪತ್ರ ಪಡೆಯಬೇಕು ಎಂದು ತಿಳಿಸಿದೆ.
Next Story