ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ: ಇಬ್ಬರ ಬಂಧನ
ಬೆಂಗಳೂರು, ಜು.8: ಉದ್ಯೋಗದ ನೆಪದಲ್ಲಿ ಹೊರರಾಜ್ಯಗಳಿಂದ ಯುವತಿಯರನ್ನು ಕರೆತಂದು, ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆಯೊಂದರ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು, ಇಬ್ಬರನ್ನು ಬಂಧಿಸಿದ್ದಾರೆ.
ಸತೀಶ್ ಹಾಗೂ ರಾಜಾ ಎಂಬುವರು ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.
ಇಲ್ಲಿನ ಯಶವಂತಪುರ ಪೊಲೀಸ್ ಠಾಣಾ ವ್ಯಾಪ್ತಿಯ ಲಾಡ್ಜ್ ವೊಂದರಲ್ಲಿ ಅನ್ಯರಾಜ್ಯ ಯುವತಿಯರನ್ನು ಬಳಸಿಕೊಂಡು ದಂಧೆ ನಡೆಸುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿದು ಸಿಸಿಬಿ ಮಹಿಳಾ ಘಟಕ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಐವರು ಯುವತಿಯನ್ನು ರಕ್ಷಣೆ ಮಾಡಲಾಗಿದೆ.
Next Story