Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನೋಂದಣಿ ಮತ್ತು ಮುದ್ರಾಂಕ ಇಲಾಖೆ...

ನೋಂದಣಿ ಮತ್ತು ಮುದ್ರಾಂಕ ಇಲಾಖೆ ಜನಸ್ನೇಹಿಯಾಗಲಿ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗಾಭರಣ

ವಾರ್ತಾಭಾರತಿವಾರ್ತಾಭಾರತಿ8 July 2020 6:19 PM IST
share
ನೋಂದಣಿ ಮತ್ತು ಮುದ್ರಾಂಕ ಇಲಾಖೆ ಜನಸ್ನೇಹಿಯಾಗಲಿ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗಾಭರಣ

ಬೆಂಗಳೂರು, ಜು.8: ರಾಜ್ಯ ಸರಕಾರಕ್ಕೆ ದೊಡ್ಡ ಮಟ್ಟದ ಆದಾಯ ತಂದುಕೊಡುವಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆಗಳಲ್ಲಿ ವರ್ಷಕ್ಕೆ ಸುಮಾರು 20 ಲಕ್ಷ ದಸ್ತಾವೇಜುಗಳು ನೋಂದಣಿಯಾಗುತ್ತಿವೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ತಿಳಿಸಿದ್ದಾರೆ.

ಆದರೆ ಇವೆಲ್ಲವೂ ಆಂಗ್ಲಭಾಷೆಯಲ್ಲಿ ಆಗುತ್ತಿರುವುದು ದುರದೃಷ್ಟಕರ ಸಂಗತಿಯಾಗಿದ್ದು, ಇನ್ನೊಂದು ತಿಂಗಳ ಕಾಲಮಿತಿಯೊಳಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ನೋಂದಣಿ ಯಾಗುವ ನಿಟ್ಟಿನಲ್ಲಿ ಸುತ್ತೋಲೆ ಹೊರಡಿಸಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕೆಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಆಯುಕ್ತ ಕೆ.ಪಿ.ಮೋಹನ್ ರಾಜ್‍ಗೆ ಅವರು ಸೂಚಿಸಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯೊಂದಿಗೆ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನೆ ಕುರಿತು ಜಾಲತಾಣ ಸಂಪರ್ಕ (ವಿಡಿಯೋ ಕಾನ್ಫರೆನ್ಸ್) ಸಭೆಯಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ 286 ನೋಂದಣಾಧಿಕಾರಿಗಳ (ಸಬ್‍ರಿಜಿಸ್ಟ್ರಾರ್) ಕಚೇರಿಗಳಿದ್ದು, ಎಲ್ಲ ಕಚೇರಿಗಳಲ್ಲೂ ಆಂಗ್ಲ ಭಾಷೆಯಲ್ಲಿಯೇ ನೋಂದಣಿಯಾಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಬಹುಮುಖ್ಯವಾಗಿ ಅಪಾರ್ಟ್ ಮೆಂಟ್ ಮತ್ತು ಫ್ಲಾಟ್‍ಗಳ ಕ್ರಯಪತ್ರಗಳು ಕೂಡ ಸಂಪೂರ್ಣವಾಗಿ ಇಂಗ್ಲಿಷ್‍ನಲ್ಲಿಯೆ ನೋಂದಣಿಯಾಗುತ್ತಿವೆ. ಇದು ರಾಜ್ಯ ಸರಕಾರದ ಭಾಷಾ ನೀತಿಯ ಉಲ್ಲಂಘನೆಯಾಗಿದ್ದು, ಇದಕ್ಕೆ ಸಂಬಂಧಿಸಿದ ಅಧಿಕಾರಿ/ನೌಕರರ ಇಚ್ಛಾಶಕ್ತಿಯ ಕೊರತೆಯೆ ಕಾರಣ ಎಂದು ಅವರು ಆರೋಪಿಸಿದರು.

ಈ ಇಲಾಖೆಯೊಂದಿಗೆ ರೈತರು, ಗ್ರಾಮೀಣರು ಹೆಚ್ಚಾಗಿ ಸಂಪರ್ಕ ಹೊಂದಿರುವ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಸಾಕಷ್ಟು ನಮೂನೆಗಳು ಸಾಮಾನ್ಯರಿಗೆ ಅರ್ಥವಾಗದ ಆಂಗ್ಲ ಭಾಷೆಯಲ್ಲಿರುತ್ತವೆ. ಅಂತಹ ಸಂದರ್ಭದಲ್ಲಿ ಹೇಗಾದರೂ ಸರಿ ನೋಂದಣಿಯಾದರೆ ಸಾಕು ಎಂಬ ಮನೋಭಾವದಲ್ಲಿ ಅಧಿಕಾರಿಗಳು ಹೇಳಿದ ಕಡೆಗಳಿಗೆ ಸಹಿ ಮಾಡುವ ಅನಿವಾರ್ಯತೆ ಒದಗುತ್ತದೆ ಎಂದು ಅವರು ಹೇಳಿದರು.

ಜೊತೆಗೆ ಮಧ್ಯವರ್ತಿಗಳ ಹಾವಳಿ ಕೂಡ ಹೆಚ್ಚಾಗುತ್ತದೆ. ಇದನ್ನು ತಪ್ಪಿಸಬೇಕು ಎಂಬ ಕಾರಣಕ್ಕೆ ಸರಕಾರ ಆನ್‍ಲೈನ್ ವ್ಯವಸ್ಥೆಯನ್ನು ಜಾರಿಗೆ ತಂದಿದ್ದರೂ ಕನ್ನಡೀಕರಣಗೊಳ್ಳದ ಕಾರಣಕ್ಕೆ ಸಾರ್ವಜನಿಕರು ತೊಂದರೆಗೆ ಸಿಲುಕುತ್ತಿದ್ದಾರೆ. ಹಾಗಾಗಿ ಇನ್ನೊಂದು ತಿಂಗಳೊಳಗೆ ಇಲಾಖೆಯ ಎಲ್ಲ ಹಂತಗಳಲ್ಲೂ ಶೇ.100ರಷ್ಟು ಕನ್ನಡ ಅನುಷ್ಠಾನಗೊಳಿಸುವಂತೆ ನಾಗಾಭರಣ ಆದೇಶಿಸಿದರು.

ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ ಸಂಬಂಧಿಸಿದ ಕಾವೇರಿ ಆನ್‍ಲೈನ್ ಸೇವೆ ಕೂಡ ಇಂಗ್ಲಿಷ್ ನಲ್ಲಿದೆ ಎಂದು ಉದಾಹರಣೆ ಸಹಿತ ವೆಬ್ ಸೈಟ್ ಪ್ರದರ್ಶಿಸಿ ಮಾತು ಮುಂದುವರಿಸಿದ ನಾಗಾಭರಣ, ಇನ್ನು ಮುಂದೆ ಕಡ್ಡಾಯವಾಗಿ ದಸ್ತಾವೇಜುಗಳು ಕನ್ನಡದಲ್ಲಿದ್ದರೆ ಮಾತ್ರ ನೋಂದಣಿ ಮಾಡುವಂತೆ ಕಟ್ಟುನಿಟ್ಟಿನ ಕ್ರಮವಹಿಸುವಂತೆ ಸೂಚಿಸಿದರು.

ವಿಡಿಯೋ ಕಾನ್ಫರೆನ್ಸ್ ನಲ್ಲಿ ಮುಖ್ಯಮಂತ್ರಿಗಳ ಇ-ಆಡಳಿತ ಸಲಹೆಗಾರ ಬೇಳೂರು ಸುದರ್ಶನ ಮಾದರಿ ಜಾಲತಾಣಗಳ ಬಗ್ಗೆ ಮಾಹಿತಿ ನೀಡಿದರು. ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಆಯುಕ್ತ ಕೆ.ಪಿ.ಮೋಹನ್‍ರಾಜ್, ಮಹಾ ಪರಿವೀಕ್ಷಕ ಇ.ಪಿ.ಮಧುಸೂಧನ್, ವೆಬ್ ಪೋರ್ಟಲ್‍ನ ಯೋಜನಾಧಿಕಾರಿ ಸತೀಶ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಕೆ.ಮುರಳಿಧರ, ಪ್ರಾಧಿಕಾರದ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಡಾ.ವೀರಶೆಟ್ಟಿ, ಮಧುಸೂಧನ್, ಡಾ.ಎ.ಸತ್ಯನಾರಾಯಣ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X