Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಕೋನಿಡ್-19 ಸರಕಾರಿ ಪರೀಕ್ಷಾ...

ಉಡುಪಿ: ಕೋನಿಡ್-19 ಸರಕಾರಿ ಪರೀಕ್ಷಾ ಲ್ಯಾಬ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ8 July 2020 9:31 PM IST
share
ಉಡುಪಿ: ಕೋನಿಡ್-19 ಸರಕಾರಿ ಪರೀಕ್ಷಾ ಲ್ಯಾಬ್ ಉದ್ಘಾಟನೆ

ಉಡುಪಿ, ಜು.8: ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಸ್ಥಾಪಿಸಿರುವ, ಕೋವಿಡ್-19 ಸರಕಾರಿ ಪರೀಕ್ಷಾ ಲ್ಯಾಬ್‌ನ್ನು ರಾಜ್ಯದ ಮುಜರಾಯಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲೇ ಕೊರೋನ ಪರೀಕ್ಷೆಗಾಗಿ ಪ್ರಾರಂಭದಲ್ಲಿ ಕೇವಲ ಒಂದು ಪರೀಕ್ಷಾ ಲ್ಯಾಬ್ ಮಾತ್ರ ಇದ್ದು, ಆದರೆ ಈಗ ರಾಜ್ಯದಲ್ಲಿನ ಕೋವಿಡ್ ಪರೀಕ್ಷಾ ಲ್ಯಾಬ್‌ಗಳ ಸಂಖ್ಯೆ 82 ಕ್ಕೇರಿದೆ ಎಂದರು.

ಜಿಲ್ಲೆಯ ಕೊರೋನ ಶಂಕಿತರ ಗಂಟಲುದ್ರವ ಮಾದರಿಯ ಪರೀಕ್ಷೆಗಾಗಿ ಈ ಮೊದಲು ಮಂಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳನ್ನು ಅವಲಂಬಿಸಬೇಕಿತ್ತು, ಈಗ ಇಲ್ಲಿಯೇ ಲ್ಯಾಬ್ ಆರಂಬಿಸಿರುವುದರಿಂದ ಇನ್ನು ಮುಂದೆ ಇಲ್ಲಿಯೇ ಶೀಘ್ರದಲ್ಲಿ ವರದಿ ಪಡೆಯಬಹುದಾಗಿದೆ ಎಂದರು.

ಜಿಲ್ಲೆಯಲ್ಲಿ ಇದುವರೆಗೆ 1390ಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ಬಂದಿದ್ದು, ಅದರಲ್ಲಿ ಮಹಾರಾಷ್ಟ್ರದಿಂದ ಬಂದವರ ಸಂಖ್ಯೆಯೇ1100 ಮೀರಿದೆ. ಹೊರ ರಾಜ್ಯ, ದೇಶಗಳಿಂದ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುವವರಿಗಾಗಿ ಇಲ್ಲಿ ಪ್ರಯೋಗಾಲಯ ಆರಂಭಿಸಬೇಕಾದ ಅವಶ್ಯಕತೆ ಮನಗಂಡು ಮುಖ್ಯಮಂತ್ರಿಗಳು ಈ ಲ್ಯಾಬ್‌ನ್ನು ಉಡುಪಿ ಜಿಲ್ಲೆಗೆ ವಿಶೇಷವಾಗಿ ಮಂಜೂರು ಮಾಡಿದ್ದಾರೆ ಎಂದು ಸಚಿವ ಕೋಟ ತಿಳಿಸಿದರು.

ಕೊರೋನ ನಿಯಂತ್ರಣ ಮತ್ತು ನಿರ್ವಹಣೆ ಕುರಿತಂತೆ ಉಡುಪಿ ಜಿಲ್ಲಾಡಳಿತ ಅತ್ಯಂತ ವ್ಯವಸ್ಥಿತ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಇದಕ್ಕಾಗಿ ಜಿಲ್ಲೆಯ ಉಸ್ತುವಾರಿ ಸಚಿವರು, ಜಿಲ್ಲೆಯ ಎಲ್ಲಾ ಶಾಸಕರು ಮತ್ತು ವಿಶೇಷವಾಗಿ ಜಿಲ್ಲಾಧಿಕಾರಿಗಳಿಗೆ ಸರಕಾರದ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಜಿಲ್ಲೆಯಲ್ಲಿ ಕೋವಿಡ್-19 ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸುವಲ್ಲಿ ವಿಳಂಬವಾಗದಂತೆ ರೂಪಿಸಿರುವ ಅಂಬುಲೆನ್ಸ್ ಮಾನಿಟರಿಂಗ್ ಸಿಸ್ಟಂ ಯೋಜನೆಯನ್ನು ಶಾಸಕ ಸುನೀಲ್ ಕುಮಾರ್ ಉದ್ಘಾಟಿಸಿದರು.

ಈ ಯೋಜನೆಗಾಗಿ ಜಿಲ್ಲೆಯ ಎಲ್ಲಾ ಸರಕಾರಿ ಅಂಬುಲೈನ್ಸ್‌ಗಳಿಗೆ ಜಿಪಿಎಸ್ ಅಳವಡಿಸಿದ್ದು, ಅಂಬುಲೆನ್ಸ್‌ಗಳು ಯಾವ ಸ್ಥಳದಲ್ಲಿವೆ ಎಂಬ ಮಾಹಿತಿ ಬೆರಳ ತುದಿಯಲ್ಲಿಯೇ ದೊರೆಯಲಿದೆ. ಇದರಿಂದ ಕೋವಿಡ್ ರೋಗಿಯನ್ನು ಆಸ್ಪತ್ರೆಗೆ ದಾಖಲಿಸಲು ವಿಳಂಬಕ್ಕೆ ಆಸ್ಪದ ನೀಡದಂತೆ ಸಮೀಪದ ಆಂಬುಲೆನ್ಸ್ ಬಳಸಿಕೊಳ್ಳಬಹುದಾಗಿದ್ದು, ರಾಜ್ಯದಲ್ಲೇ ಈ ಯೋಜನೆ ಪ್ರಥಮವಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಜಿಲ್ಲೆಯಲ್ಲಿನ ಆಸ್ಪತ್ರೆಗಳಲ್ಲಿ ಕೊರೋನ ರೋಗಿಗಳ ಚಿಕಿತ್ಸೆಗೆ ಅಗತ್ಯವಿರುವ ಬೆಡ್‌ಗಳ ಕುರಿತು ಮಾಹಿತಿ ನೀಡಲು ರೂಪಿಸಿರುವ ಬೆಡ್ ಮ್ಯಾನೇಜ್ ಮೆಂಟ್ ಸಿಸ್ಟಂ ನ್ನು ಶಾಸಕ ರಘುಪತಿ ಭಟ್ ಉದ್ಘಾಟಿಸಿದರು. ಈ ಯೋಜನೆಯ ಪ್ರಕಾರ ಜಿಲ್ಲೆಯಲ್ಲಿನ ಕೊರೋನ ರೋಗಿಗೆ ಸಮೀಪದ ಯಾವ ಆಸ್ಪತ್ರೆಯಲ್ಲಿ ಎಷ್ಟು ಬೆಡ್‌ಗಳು ಖಾಲಿ ಇವೆ, ಅಲ್ಲಿ ಏನು ಅಗತ್ಯ ಸೌಲಭ್ಯಗಳಿವೆ ಎಂಬ ಮಾಹಿತಿ ದೊರೆಯಲಿದೆ.

ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕ ಲಾಲಾಜಿ ಆರ್ ಮೆಂಡನ್, ಜಿಪಂ ಸಿಇಓ ಪ್ರೀತಿ ಗೆಹ್ಲೋಟ್, ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್, ಡಿಹೆಚ್‌ಓ ಡಾ.ಸುಧೀರ್‌ಚಂದ್ರ ಸೂಡಾ, ಕೋವಿಡ್-19 ಜಿಲ್ಲಾ ನೋಡೆಲ್ ಅಧಿಕಾರಿ ಡಾ.ಪ್ರಶಾಂತ್ ಭಟ್, ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X