ಶಿಫಾ ಆಸ್ಪತ್ರೆ ಕೋವಿಡ್ ಚಿಕಿತ್ಸೆಗೆ ಲಭ್ಯ: ಶಾಸಕ ರಿಝ್ವಾನ್ ಅರ್ಶದ್
![ಶಿಫಾ ಆಸ್ಪತ್ರೆ ಕೋವಿಡ್ ಚಿಕಿತ್ಸೆಗೆ ಲಭ್ಯ: ಶಾಸಕ ರಿಝ್ವಾನ್ ಅರ್ಶದ್ ಶಿಫಾ ಆಸ್ಪತ್ರೆ ಕೋವಿಡ್ ಚಿಕಿತ್ಸೆಗೆ ಲಭ್ಯ: ಶಾಸಕ ರಿಝ್ವಾನ್ ಅರ್ಶದ್](https://www.varthabharati.in/sites/default/files/images/articles/2020/07/8/250240-1594230012.jpg)
ಬೆಂಗಳೂರು, ಜು.9: ಶಿವಾಜಿನಗರದ ಕ್ವೀನ್ಸ್ ರಸ್ತೆಯಲ್ಲಿರುವ ಶಿಫಾ ಆಸ್ಪತ್ರೆಯನ್ನು ಕೋವಿಡ್ -19 ಚಿಕಿತ್ಸೆ ನೀಡುವ 100 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗಿದೆ ಎಂದು ಸ್ಥಳೀಯ ಶಾಸಕ ರಿಝ್ವಾನ್ ಅರ್ಶದ್ ತಿಳಿಸಿದ್ದಾರೆ.
ಈಗಾಗಲೇ 26 ರೋಗಿಗಳಿಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ರಾಜ್ಯ ಸರಕಾರ ನಿಗದಿ ಪಡಿಸಿರುವ ದರಕ್ಕಿಂತ ಕಡಿಮೆ ದರದಲ್ಲಿ ಚಿಕಿತ್ಸೆ ನೀಡಲು ಶಿಫಾ ಆಸ್ಪತ್ರೆಯ ಆಡಳಿತ ಮಂಡಳಿ ಒಪ್ಪಿಗೆ ಸೂಚಿಸಿರುವುದಕ್ಕಾಗಿ ಡಾ.ಮುಷ್ತಾಕ್ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳಿಗೆ ಧನ್ಯವಾದಗಳನ್ನು ತಿಳಿಸುವುದಾಗಿ ರಿಝ್ವಾನ್ ಅರ್ಶದ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ತಿಳಿಸಿದ್ದಾರೆ.
![](https://www.varthabharati.in/sites/default/files/images/galllery/2020/07/8/59c88329-415b-4194-af80-b4d00594aca9.jpg)
Next Story