ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನಾಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 7ಕ್ಕೆ ಏರಿಕೆ
ಸಾಂದರ್ಭಿಕ ಚಿತ್ರ
ಶಿವಮೊಗ್ಗ, ಜು.9: ನಗರದಲ್ಲಿ ಕೊರೋನ ಸೋಂಕಿನಿಂದ ಮತ್ತೊಬ್ಬರು ಸಾವನ್ನಪ್ಪಿದ್ದು, ಇದರಿಂದಾಗಿ ಮೃತಪಟ್ಟವರ ಸಂಖ್ಯೆ 7ಕ್ಕೇರಿದೆ.
ಜಿಲ್ಲೆಯ ಶಿಕಾರಿಪುರ ತಾಲೂಕಿನ 64 ವರ್ಷದ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಕಳೆದ ವಾರ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಈ ವ್ಯಕ್ತಿ ಮೊದಲು ಶಿಕಾರಿಪುರ ತಾಲೂಕಿನ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಇವರನ್ನ ಕೊರೋನ ಪಾಸಿಟಿವ್ ಎಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಗುರುವಾರ ಮೆಗ್ಗಾನ್ನಲ್ಲಿ ಸಾವನ್ನಪ್ಪಿದ್ದಾರೆ.
Next Story