Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತರ ಹಣ ಕಿತ್ತು ಆಶಾ ಕಾರ್ಯಕರ್ತೆಯರಿಗೆ...

ರೈತರ ಹಣ ಕಿತ್ತು ಆಶಾ ಕಾರ್ಯಕರ್ತೆಯರಿಗೆ ಕೊಡುವ ಸರ್ಕಾರದ ಕ್ರಮ ರೈತ ವಿರೋಧಿ: ಕಿಮ್ಮನೆ ರತ್ನಾಕರ್

ವಾರ್ತಾಭಾರತಿವಾರ್ತಾಭಾರತಿ9 July 2020 5:57 PM IST
share
ರೈತರ ಹಣ ಕಿತ್ತು ಆಶಾ ಕಾರ್ಯಕರ್ತೆಯರಿಗೆ ಕೊಡುವ ಸರ್ಕಾರದ ಕ್ರಮ ರೈತ ವಿರೋಧಿ: ಕಿಮ್ಮನೆ ರತ್ನಾಕರ್

ಶಿವಮೊಗ್ಗ, ಜು.9: ರಾಜ್ಯ ಸರ್ಕಾರ ರೈತರ ಹಣವನ್ನು ಕಿತ್ತುಕೊಂಡು ಆಶಾ ಕಾರ್ಯಕರ್ತೆಯರಿಗೆ ನೀಡಲು ಮುಂದಾಗಿದೆ ಎಂದು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಹಕಾರ ಸಂಘಗಳು ಆಶಾ ಕಾರ್ಯಕರ್ತೆಯರಿಗೆ ದಾನದ ರೂಪದಲ್ಲಿ ಹಣ ನೀಡುವಂತೆ ಸರ್ಕಾರ ಆದೇಶ ಮಾಡಿದೆ. ಸಹಕಾರ ಸಂಘದಲ್ಲಿ ಇರುವುದು ರೈತರ ಷೇರು ಹಣ. ಈ ಹಣ ಆಶಾ ಕಾರ್ಯಕರ್ತೆಯರಿಗೆ ನೀಡಬೇಕು ಎಂದರೆ ಸರ್ಕಾರ ಏಕೆ ಬೇಕು. ಸಹಕಾರಿ ಸಂಘಗಳೇ ನೆಲಕಚ್ಚಿ ಹೋಗಿವೆ. ಹೀಗಿರುವಾಗ ರೈತರ ಹಣ ಕಿತ್ತುಕೊಂಡು ಆಶಾ ಕಾರ್ಯಕರ್ತೆಯರಿಗೆ ನೀಡಲು ಹೊರಟಿರುವ ಸರ್ಕಾರದ ಕ್ರಮ ರೈತ ವಿರೋಧಿಯಾಗಿದೆ ಎಂದು ಆರೋಪಿಸಿದರು.

ಸರ್ಕಾರದ ಈ ಕ್ರಮ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ. ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಣ ನೀಡಬೇಕು ಎಂದು ಕಿಮ್ಮನೆ ರತ್ನಾಕರ್ ಆಗ್ರಹಿಸಿದರು.

ಜನ ಬೀದಿಯಲ್ಲಿ ಬಿದ್ದು ಸಾಯುತ್ತಿದ್ದಾರೆ
ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಿಮ್ಮನೆ ರತ್ನಾಕರ್ ಅವರು, 1,700 ಕೋಟಿ ರೂಪಾಯಿ ಖರ್ಚು ಮಾಡಿ 17 ಶಾಸಕರನ್ನು ಖರೀದಿ ಮಾಡಿ ಬಿಜೆಪಿ ಸರ್ಕಾರ ರಚಿಸಿದೆ. ಈಗ ಜನರು ಬೀದಿಯಲ್ಲಿ ಸಾಯುವಂತಹ ಸ್ಥಿತಿ ಬಂದಿದೆ. ರಾಜ್ಯದಲ್ಲಿ ಸರ್ಕಾರ ಇದೆ ಎಂದೇ ಅನಿಸುತ್ತಿಲ್ಲ. ಇವರು ರಾಜೀನಾಮೆ ನೀಡಿ ಮನೆಗೆ ಹೋಗುವುದೇ ಒಳ್ಳೆಯದು ಎಂದು ಟೀಕಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಒಬ್ಬರೇ ಕೆಲಸ ಮಾಡುತ್ತಿದ್ದಾರೆ. ಉಳಿದವರು ಅರಾಮಾಗಿದ್ದಾರೆ. ಸಚಿವ ಸಂಪುಟದಲ್ಲಿ ಹೊಂದಾಣಿಕೆಯೇ ಇಲ್ಲ. ಲಾಕ್ ಡೌನ್ ಟೈಮಲ್ಲಿ ಶಂಕುಸ್ಥಾಪನೆಯ ಅಗತ್ಯವಿದೆಯೇ. ಎಲ್ಲರನ್ನು ಒಟ್ಟುಗೂಡಿಸಿ ಕೊಂಡು ಕಾರ್ಯಕ್ರಮ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. 

ಕಾಂಗ್ರೆಸ್ ನವರಿಗೆ ಮಾತ್ರ ಕೊರೋನ ಬರುತ್ತದೆಯೇ? ಬಿಜೆಪಿಯವರಿಗೆ ಬರುವುದಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ರವಿವಾರ ಲಾಕ್ ಡೌನ್ ಮಾಡಲಾಗಿತ್ತು. ಆದರೆ ಅಂದು ಬಿಜೆಪಿ ಸಚಿವರು ಹಾಗೂ ಶಾಸಕರು ಶಂಕುಸ್ಥಾಪನೆ ಕಾರ್ಯಕ್ರಮ ಮಾಡುತ್ತಾರೆ. ಹಾಗಾದರೆ ಲಾಕ್ ಡೌನ್ ಯಾರಿಗೆ. ಇದನ್ನು ನೋಡಿದರೆ ಈಶ್ವರಪ್ಪ ಅವರು ಸತ್ಯ ಹೇಳಿದ್ದಾರೆ ಅನಿಸುತ್ತೆ. ರಾಕ್ಷಸರಿಗೆ ಕೊರೋನ ಬರುವುದಿಲ್ಲ ಅಂತಾ ಸಮರ್ಥಿಸಿಕೊಂಡಿದ್ದರು ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಮಾಜಿ ಶಾಸಕ ಪ್ರಸನ್ನಕುಮಾರ್, ಜಿಲ್ಲಾ ಪಂಚಾಉಯಗ ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಹಾಪ್ಕಾಮ್ಸ್ ಉಪಾಧ್ಯಕ್ಷ ವಿಜಯಕುಮಾರ್, ಜಿಲ್ಲಾ ಪಂಚಾಯತ್ ಸದಸ್ಯ ಕಲಗೋಡು ರತ್ನಾಕರ್, ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಯೋಗೀಶ್, ಪಾಲಿಕೆ ಸದಸ್ಯ ರಮೇಶ್ ಹೆಗ್ಡೆ ಸುದ್ದಿಗೋಷ್ಠಿಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X