ಜು.13: ಬ್ಯಾರಿ ಅಕಾಡಮಿಯಿಂದ ಪುಸ್ತಕ-ಸಿಡಿ ಬಿಡುಗಡೆ
ಮಂಗಳೂರು, ಜು.9: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯಿಂದ ಪುಸ್ತಕ ಮತ್ತು ಸಿಡಿ ಬಿಡುಗಡೆ ಸಮಾರಂಭವನ್ನು ಜು.13ರಂದು ಬೆಳಗ್ಗೆ 11 ಗಂಟೆಗೆ ಮಂಗಳೂರು ತಾಪಂ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ಪುಸ್ತಕ ಮತ್ತು ಸಿಡಿ ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾರಿ ಸಾಹಿತ್ಯ ಅಕಾಡಮಿ ಅಧ್ಯಕ್ಷ ರಹೀಂ ಉಚ್ಚಿಲ್ ವಹಿಸಲಿದ್ದಾರೆ. ಕೊರೋನ ಮುಂಜಾಗ್ರತಾ ಕ್ರಮವಾಗಿ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಅಕಾಡಮಿಯ ರಿಜಿಸ್ಟ್ರಾರ್ ಪೂರ್ಣಿಮಾ ತಿಳಿಸಿದ್ದಾರೆ.
Next Story