Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹೊಸ ವೀಸಾ ನಿಯಮಗಳಿಂದ ಭಾರತೀಯ...

ಹೊಸ ವೀಸಾ ನಿಯಮಗಳಿಂದ ಭಾರತೀಯ ವಿದ್ಯಾರ್ಥಿಗಳಿಗೆ ಸಂಕಷ್ಟ

ಭಾರತೀಯ ರಾಯಭಾರ ಕಚೇರಿ

ವಾರ್ತಾಭಾರತಿವಾರ್ತಾಭಾರತಿ9 July 2020 11:28 PM IST
share
ಹೊಸ ವೀಸಾ ನಿಯಮಗಳಿಂದ ಭಾರತೀಯ ವಿದ್ಯಾರ್ಥಿಗಳಿಗೆ ಸಂಕಷ್ಟ

ಹೊಸ ವೀಸಾ ನಿಯಮಗಳಿಂದ ಭಾರತೀಯ ವಿದ್ಯಾರ್ಥಿಗಳಿಗೆ ಸಂಕಷ್ಟ

ಭಾರತೀಯ ರಾಯಭಾರ ಕಚೇರಿ

ವಾಶಿಂಗ್ಟನ್, ಜು. 9: ಎಫ್-1 ವೀಸಾಗಳೊಂದಿಗೆ ಅಮೆರಿಕದಲ್ಲಿರುವ ವಿದೇಶಿ ವಿದ್ಯಾರ್ಥಿಗಳು ಕನಿಷ್ಠ ಒಂದಾದರೂ ಭೌತಿಕ ತರಗತಿಗಳ ಕೋರ್ಸ್ ಮಾಡಬೇಕು, ಇಲ್ಲದಿದ್ದರೆ ಗಡಿಪಾರುಗೊಳ್ಳಬೇಕು ಎಂಬ ನೂತನ ವೀಸಾ ನಿಯಮಗಳು ಕೆಲವು ವಿದ್ಯಾರ್ಥಿಗಳಿಗೆ ‘ಅನಿಶ್ಚಿತತೆ ಮತ್ತು ಸಂಕಷ್ಟ’ಗಳನ್ನು ತಂದೊಡ್ಡಬಹುದು ಎಂದು ಇಲ್ಲಿನ ಭಾರತೀಯ ರಾಯಭಾರ ಕಚೇರಿ ಹೇಳಿದೆ.

‘‘ಅಮೆರಿಕದ ಹೆಚ್ಚಿನ ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳು ಹೊಸ ಶೈಕ್ಷಣಿಕ ವರ್ಷಕ್ಕಾಗಿ ತಮ್ಮ ಯೋಜನೆಗಳನ್ನು ಇನ್ನಷ್ಟೇ ಘೋಷಿಸಬೇಕಾಗಿರುವಾಗ ವೀಸಾ ಶರತ್ತುಗಳಲ್ಲಿನ ಈ ಹೊಸ ಬದಲಾವಣೆಗಳು ಅಮೆರಿಕದಲ್ಲಿ ತಮ್ಮ ವಿದ್ಯಾಭ್ಯಾಸವನ್ನು ನಡೆಸಲು ಬಯಸಿರುವ ಕೆಲವು ಭಾರತೀಯ ವಿದ್ಯಾರ್ಥಿಗಳಿಗೆ ಅನಿಶ್ಚಿತತೆ ಮತ್ತು ಸಂಕಷ್ಟಗಳನ್ನು ತಂದೊಡ್ಡಬಹುದಾಗಿದೆ’’ ಎಂದು ಭಾರತೀಯ ರಾಯಭಾರ ಕಚೇರಿಯ ವಕ್ತಾರರೊಬ್ಬರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದರು.

ಈ ವಿಷಯದ ಬಗ್ಗೆ ಭಾರತ ಸರಕಾರವು ಅಮೆರಿಕದ ಸಂಬಂಧಿತ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ ಎಂದು ಮಾಧ್ಯಮಗಳ ಪ್ರಶ್ನೆಯೊಂದಿಗೆ ಉತ್ತರಿಸಿದ ಅವರು ಹೇಳಿದರು.

ಜುಲೈ 7ರಂದು ನಡೆದ ಭಾರತ- ಅಮೆರಿಕ ವಿದೇಶ ಕಚೇರಿ ಸಮಾಲೋಚನೆಗಳ ವೇಳೆ, ಭಾರತದ ವಿದೇಶ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ನೂತನ ವೀಸಾ ನಿಯಮಗಳ ಕುರಿತ ಭಾರತದ ಕಳವಳಗಳನ್ನು ರಾಜಕೀಯ ವ್ಯವಹಾರಗಳಿಗಾಗಿನ ಅಧೀನ ವಿದೇಶ ಕಾರ್ಯದರ್ಶಿ ಡೇವಿಡ್ ಹೇಲ್ರಲ್ಲಿ ಪ್ರಸ್ತಾಪಿಸಿದರು.

ಅಮೆರಿಕದಲ್ಲಿ 1.94 ಲಕ್ಷ ಭಾರತೀಯ ವಿದ್ಯಾರ್ಥಿಗಳು

ಸ್ಟೂಡೆಂಟ್ ಆ್ಯಂಡ್ ಎಕ್ಸ್ಚೇಂಜ್ ವಿಸಿಟರ್ ಪ್ರೋಗ್ರಾಮ್ (ಎಸ್ಇವಿಪಿ)ನ ಇತ್ತೀಚಿನ ವರದಿಯೊಂದರ ಪ್ರಕಾರ, ಈ ವರ್ಷದ ಜನವರಿಯಲ್ಲಿ ಅಮೆರಿಕದ ವಿವಿಧ ಶೈಕ್ಷಣಿಕ ಸಂಸ್ಥೆಗಳಲ್ಲಿ 1,94,556 ಭಾರತೀಯ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 1,26,132 ಮಂದಿ ಪುರುಷರು ಮತ್ತು 68,405 ಮಂದಿ ಮಹಿಳೆಯರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X