ಗೃಹ ಕಚೇರಿಯಲ್ಲಿ ಕೊರೋನ ಸೋಂಕು ದೃಢ: ಸಿಎಂ ಯಡಿಯೂರಪ್ಪ ಹೋಂ ಕ್ವಾರಂಟೈನ್

ಬೆಂಗಳೂರು, ಜು.10: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಗೃಹ ಕಚೇರಿ ಕೃಷ್ಣಾದಲ್ಲಿ ಟೆಲಿಫೋನ್ ಆಪರೇಟರ್, ಇಬ್ಬರು ಭದ್ರತಾ ಸಿಬ್ಬಂದಿ, ಡಾಲರ್ಸ್ ಕಾಲನಿಯಲ್ಲಿರುವ ನಿವಾಸದಲ್ಲಿ ಅಡುಗೆ ಮಾಡುವವರು, ಒಬ್ಬ ಕಾರು ಚಾಲಕ ಸೇರಿ 10 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಕೆಲ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದಿರುವ ಕಾರಣ, ಇಂದಿನಿಂದ ಕೆಲ ದಿನಗಳ ಕಾಲ ಮನೆಯಿಂದಲೆ ಕರ್ತವ್ಯ ನಿರ್ವಹಿಸಲಿದ್ದೇನೆ. ವೀಡಿಯೊ ಕಾನ್ಫರೆಸ್ ಮೂಲಕ ಅಗತ್ಯ ಸಲಹೆ, ಸೂಚನೆಗಳನ್ನು ನೀಡಲಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಎಲ್ಲರೂ ಮುನ್ನೆಚ್ಚರಿಕೆ ಕ್ರಮಗಳು ಮತ್ತು ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಿ, ವ್ಯಕ್ತಿಗತ ಅಂತರ ಕಾಪಾಡಿಕೊಳ್ಳುವುದು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸುವ ಮೂಲಕ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ ಎಂದು ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿಯ ಗೃಹ ಕಚೇರಿಯ ಟೆಲಿಫೋನ್ ಆಪರೇಟರ್, ಇಬ್ಬರು ಎಸ್ಕಾರ್ಟ್, ಧವಳಗಿರಿ ನಿವಾಸದಲ್ಲಿ ಅಡುಗೆ ಮಾಡುವವನಿಗೆ, ಒಬ್ಬ ಕಾರು ಚಾಲಕನಿಗೆ ಸೇರಿ ಮುಖ್ಯಮಂತ್ರಿ ಯಡಿಯೂರಪ್ಪ ಸುತ್ತಮುತ್ತಲಿರುವ ಒಟ್ಟು 10 ಜನರಿಗೆ ಕೊರೋನ ಸೋಂಕು ಹರಡಿದೆ ಎನ್ನಲಾಗುತ್ತಿದೆ.







