ಕೊರೋನ ಸೋಂಕಿಗೆ ಬೆಳ್ತಂಗಡಿಯಲ್ಲಿ ವೃದ್ಧ ಬಲಿ
ಬೆಳ್ತಂಗಡಿ, ಜು.12: ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ನಿವಾಸಿ, ಸುಮಾರು 60 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಜು.12ರ ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ಕೊರೋನ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಕಳೆದ ಕೆಲ ದಿನಗಳಿಂದ ಅವರು ಅನಾರೋಗ್ಯ ಪೀಡಿತರಾಗಿದ್ದರು. ಎರಡು ದಿನದ ಹಿಂದೆ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆತಂದಾಗ ಗಂಟಲು ದ್ರವ ಪರೀಕ್ಷೆ ಮಾಡಲಾಗಿತ್ತು. ಅದರ ವರದಿ ಇಂದು ಕೈ ಸೇರಿದ್ದು, ಕೊರೋನ ಸೋಂಕು ದೃಢಪಟ್ಟಿದೆ.
ಮೃತದೇಹ ಮನೆಯಲ್ಲಿದ್ದು ತಹಶೀಲ್ದಾರ್ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕೋವಿಡ್ ಮಾರ್ಗಸೂಚಿಯಂತೆ ಅಂತ್ಯಸಂಸ್ಕಾರಕ್ಕೆ ತಾಲೂಕು ಆಡಳಿತ ಕ್ರಮ ಕೈಗೊಳ್ಳುತ್ತಿದೆ.
Next Story