Breaking News: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಲ್ಲ: ಸಚಿನ್ ಪೈಲಟ್
ಹೊಸದಿಲ್ಲಿ: ರಾಜಸ್ಥಾನದಲ್ಲಿ ರಾಜಕೀಯ ಹೈಡ್ರಾಮ ನಡೆಯುತ್ತಿರುವ ನಡುವೆಯೇ ಹೇಳಿಕೆ ನೀಡಿರುವ ಡಿಸಿಎಂ ಸಚಿನ್ ಪೈಲಟ್ ಜುಲೈ 13ರಂದು ನಿಗದಿಯಾಗಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ತಾನು ಭಾಗವಹಿಸುವುದಿಲ್ಲ ಎಂದಿದ್ದಾರೆ.
ಈ ಬಗ್ಗೆ ಸಚಿನ್ ಅವರ ಕಚೇರಿ ಪ್ರಕಟನೆಯೊಂದನ್ನು ಹೊರಡಿಸಿದ್ದು, ಜುಲೈ 13ರ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಲಾಗಿದೆ. ಈ ಬಗ್ಗೆ ಸ್ವತಃ ಹೇಳಿಕೆ ನೀಡಿರುವ ಸಚಿನ್ ಪೈಲಟ್ ತಾನು ಗೈರಾಗುವುದನ್ನು ದೃಢಪಡಿಸಿದ್ದಾರೆ ಎಂದು ವರದಿ ಮಾಡಿದೆ.
“ನಾನು ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸುವುದಿಲ್ಲ. 30 ಶಾಸಕರು ನನ್ನ ಬೆಂಬಲಕ್ಕಿದ್ದಾರೆ. ಅಶೋಕ್ ಗೆಹ್ಲೋಟ್ ಸರಕಾರದಲ್ಲಿ ಶಾಸಕರಿಲ್ಲ ” ಎಂದು ಹೇಳಿರುವ ಸಚಿನ್ ಪೈಲಟ್ ತಾನು ಜೈಪುರಕ್ಕೆ ಹೋಗುವುದಿಲ್ಲ ಎನ್ನುವುದನ್ನೂ ಸ್ಪಷ್ಟಪಡಿಸಿದ್ದಾರೆ.
Next Story