Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾಳೆ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ...

ನಾಳೆ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ13 July 2020 1:46 PM IST
share
ನಾಳೆ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಪ್ರಕಟ

ಬೆಂಗಳೂರು, ಜು.13: ಇತ್ತೀಚೆಗೆ ಪೂರ್ಣಗೊಂಡ ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಜುಲೈ 14ರಂದು ಪ್ರಕಟಗೊಳ್ಳಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಇಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಕುರಿತಂತೆ ನಿರ್ದೇಶನ ನೀಡಲಾಗಿದೆ ಎಂದ ಸಚಿವರು, ನಾಳೆ ಅಧಿಕೃತ ಫಲಿತಾಂಶ ಪ್ರಕಟಣೆಯ ಬಳಿಕ ಉತ್ತೀರ್ಣಗೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಮೂಲಕ ಸಂದೇಶ ರವಾನಿಸಲಾಗುವುದು. ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ನಾಳೆ ಮಧ್ಯಾಹ್ನ 12 ಗಂಟೆಯ ಬಳಿಕ ಸರ್ಕಾರದ ಅಧಿಕೃತ ಜಾಲತಾಣ www.karresults.nic.in ಗಳಲ್ಲಿಯೂ ಸಹ ವೀಕ್ಷಿಸಬಹುದು ಎಂದು ತಿಳಿಸಿದರು.

ಮಾ.4, 2020 ರಿಂದ ಮಾ.21 ರವರೆಗೆ ವಿವಿಧ ವಿಷಯಗಳ ಪರೀಕ್ಷೆಗಳು ನಡೆದಿದ್ದು, ನಂತರ ಕೋವಿಡ್-19 ಸಂದರ್ಭದಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ದಿನಾಂಕ 18.06.2020 ರಂದು ಆಂಗ್ಲಭಾಷೆಯ ಪರೀಕ್ಷೆ ನಡೆಸಲಾಗಿದೆ. ಸುಮಾರು 6.75 ಲಕ್ಷ ವಿದ್ಯಾರ್ಥಿಗಳ ಫಲಿತಾಂಶ ನಾಳೆ ಹೊರಬೀಳಲಿದೆ ಎಂದು ಸಚಿವರು ಹೇಳಿದ್ದಾರೆ. 

ಪ್ರಥಮ ಪಿಯುಸಿ ಪೂರಕ ಪರೀಕ್ಷೆ ರದ್ದು 
ಜುಲೈ 16 ರಿಂದ 27ರವರೆಗೆ ನಿಗದಿಯಾಗಿದ್ದ ಪ್ರಥಮ ಪಿಯುಸಿ ಪೂರಕ ಪರೀಕ್ಷೆಗಳನ್ನು ಕೋವಿಡ್-19 ಹಿನ್ನೆಲೆಯಲ್ಲಿ ರದ್ದುಪಡಿಸಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಸುಮಾರು 60 ಸಾವಿರ ವಿದ್ಯಾರ್ಥಿಗಳು ಈ ಪರೀಕ್ಷೆಗಳನ್ನು ತೆಗೆದುಕೊಳ್ಳಬೇಕಿದ್ದು ಕಾಲೇಜು ಹಂತದಲ್ಲಿ ಪರೀಕ್ಷೆಗಳನ್ನು ನಿರ್ವಹಿಸಿ ಇದೇ 30 ರಂದು ಫಲಿತಾಂಶವನ್ನು ಪ್ರಕಟಿಸಲು ಈ ಹಿಂದೆ ನಿರ್ಧರಿಸಲಾಗಿತ್ತು. ಕೋವಿಡ್ ಸೊಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾರ್ಷಿಕ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳ ಪರೀಕ್ಷೆಯನ್ನು ಬರೆದು ಅನುತ್ತೀರ್ಣಗೊಂಡ ವಿದ್ಯಾರ್ಥಿಗಳನ್ನು ದ್ವಿತೀಯ ಪಿಯುಸಿಗೆ ತೇರ್ಗಡೆಗೊಳಿಸಲಾಗುವುದು. ಪರೀಕ್ಷೆಯಲ್ಲಿ ಉತ್ತೀರ್ಣತೆಯನ್ನು ಪಡೆಯಲು ಅವಶ್ಯಕತೆಯಿರುವ ಕನಿಷ್ಠ ಅಂಕಗಳನ್ನು ಕಾಲೇಜು ಹಂತದಲ್ಲಿಯೇ ನೀಡಲಾಗುವುದು. ಹಾಜರಾತಿ ಕೊರತೆಯಿಲ್ಲದ, ಅನಿವಾರ್ಯ ಸಂದರ್ಭದಲ್ಲಿ ಪರೀಕ್ಷೆಗೆ ಗೈರುಹಾಜರಾದ ವಿದ್ಯಾರ್ಥಿಗಳಿಗೆ ಮುಂದಿನ ತರಗತಿಗಳು ಪ್ರಾರಂಭವಾದ ಬಳಿಕ ದ್ವಿತೀಯ ಪಿಯುಸಿಯ ಪ್ರಥಮ ಕಿರುಪರೀಕ್ಷೆಗೂ ಪೂರ್ವದಲ್ಲಿ ಪ್ರಥಮ ಪಿಯುಸಿಯಲ್ಲಿ ಅನುತ್ತೀರ್ಣವಾದ ವಿಷಯಗಳಿಗೆ ಮತ್ತೊಮ್ಮೆ ಕಾಲೇಜು ಹಂತದಲ್ಲಿ ಕಿರುಪರೀಕ್ಷೆಯನ್ನು ನಡೆಸಿ ಅವರ ಕಲಿಕೆಯ ಮಟ್ಟವನ್ನು ಮೌಲ್ಯಮಾಪನ ಮಾಡಲಾಗುವುದೆಂದು ಸಚಿವರು ಹೇಳಿದ್ದಾರೆ. ಹಾಜರಾತಿಯ ಕೊರತೆಯಿಂದ ವಾರ್ಷಿಕ ಪರೀಕ್ಷೆಗೆ ಹಾಜರಾಗಲು ಅನುಮತಿ ಪಡೆಯದ ವಿದ್ಯಾರ್ಥಿಗಳು ಮಾತ್ರ ಅನುತ್ತೀರ್ಣಗೊಳ್ಳುವರು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. 

ಚಂದನ ವಾಹಿನಿಯಲ್ಲಿ ಇ-ಕ್ಲಾಸ್ ಕಲಿಕಾ ಕಾರ್ಯಕ್ರಮ 
ಕೋವಿಡ್ ಸಂದರ್ಭದಲ್ಲಿ ಮಕ್ಕಳ ನಿರಂತರ ಕಲಿಕೆಗೆ ಯಾವುದೇ ಅಡಚಣೆಯುಂಟಾಗದಂತೆ ಕಲಿಕೆಯನ್ನು ಮುಂದುವರಿಸಲು, ಮಕ್ಕಳು ಮನೆಯಲ್ಲಿಯೇ ಇದ್ದರೂ ಕಲಿಕೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಲು ಇದೇ ಜು.20 ರಿಂದ 20 ದಿನಗಳ ಅವಧಿಗೆ 8 ರಿಂದ 10ನೇ ತರಗತಿಯ ಮಕ್ಕಳಿಗೆ ಪ್ರಥಮ ಭಾಷೆ ಕನ್ನಡ, ಇಂಗ್ಲೀಷ್, ಸಂಸ್ಕೃತ, ಉರ್ದು, ದ್ವಿತೀಯ ಭಾಷೆ ಇಂಗ್ಲೀಷ್, ತೃತೀಯ ಭಾಷೆ ಹಿಂದಿ, ಕನ್ನಡ ಮಾಧ್ಯಮದಲ್ಲಿ ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನ ವಿಷಯಗಳಲ್ಲಿ ಸೇತುಬಂಧ (Bridge Course) ಕಾರ್ಯಕ್ರಮಗಳನ್ನು ದೂರದರ್ಶನದ ಚಂದನ ವಾಹಿನಿಯಲ್ಲಿ ಬಿತ್ತರಿಸಲಾಗುವುದೆಂದು ಸಚಿವ ಶ್ರೀ ಎಸ್. ಸುರೇಶ್ ಕುಮಾರ್ ರವರು ಹೇಳಿದ್ದಾರೆ.

20 ದಿನಗಳ ಸೇತುಬಂಧ ತರಗತಿಗಳ ಬಳಿಕ 8ರಿಂದ 10ನೇ ತರಗತಿಗಳಿಗೆ ಕನ್ನಡ ಮಾಧ್ಯಮದಲ್ಲಿ ದೈನಂದಿನ ಬೋಧನೆ ಮುಂದುವರೆಯಲಿವೆ ಎಂದ ಸಚಿವರು, ಮುಂದಿನ ದಿನಗಳಲ್ಲಿ 1ರಿಂದ 10ನೇ ತರಗತಿಯ ಎಲ್ಲಾ ಮಕ್ಕಳಿಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ವಿಡೀಯೋ ಪಾಠಗಳನ್ನು ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ದೂರದರ್ಶನ ಚಂದನ ವಾಹಿನಿಯು ಪ್ರಸಾರ ಮಾಡಲಿದೆ ಎಂದು ಹೇಳಿದರು.

ಎಲ್ಲಾ ಪೋಷಕರು ತಮ್ಮ ಮಕ್ಕಳನ್ನು ಈ ಕಲಿಕೆಯ ಪ್ರಯೋಜನವನ್ನು ಪಡೆಯುವಲ್ಲಿ ಪ್ರೇರೆಪಿಸಬೇಕೆಂದು ಮನವಿ ಮಾಡಿದ ಸುರೇಶ್ ಕುಮಾರ್, ಶಿಕ್ಷಣ ಇಲಾಖೆಯ ಯುಟ್ಯೂಬ್ ವಾಹಿನಿಯಲ್ಲಿಯೂ ಸಹ ಈ ಎಲ್ಲಾ ತರಗತಿಗಳು ಲಭ್ಯವಿರಲಿದ್ದು ವಿದ್ಯಾರ್ಥಿಗಳು ಇದನ್ನು ಸದುಪಯೋಗ ಮಾಡಿಕೊಳ್ಳಬಹುದಾಗಿದೆ. ಈ ತರಗತಿಗಳ ಕಲಿಕೆಯನ್ನು ಮೌಲ್ಯಮಾಪನ ಮಾಡಲು ಪ್ರತಿ 20 ವಿದ್ಯಾರ್ಥಿಗಳಿಗೆ ಒಬ್ಬ ಮೆಂಟರ್ ಶಿಕ್ಷಕರನ್ನು ಮ್ಯಾಪಿಂಗ್ ಮಾಡಲಾಗುತ್ತಿದ್ದು, ಶಿಕ್ಷಕರು ಕಲಿಕೆಯ ಸಮರ್ಥ ಮೌಲ್ಯಮಾಪನಕ್ಕೆ ಶಿಕ್ಷಣ ಇಲಾಖೆಯು ವ್ಯವಸ್ಥಿತ ರೂಪುರೇಶೆಗಳನ್ನು ಜಾರಿಯಲ್ಲಿಟ್ಟಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X