Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೋಗದ ವಿರುದ್ಧ ಹೋರಾಡಲು ವ್ಯವಸ್ಥೆ...

ರೋಗದ ವಿರುದ್ಧ ಹೋರಾಡಲು ವ್ಯವಸ್ಥೆ ರೂಪಿಸಬೇಕು, ತಟ್ಟೆ ಬಾರಿಸಲು ಹೇಳುವುದಲ್ಲ: ನಿಜಗುಣಾನಂದ ಸ್ವಾಮೀಜಿ

ವಾರ್ತಾಭಾರತಿವಾರ್ತಾಭಾರತಿ13 July 2020 9:53 PM IST
share
ರೋಗದ ವಿರುದ್ಧ ಹೋರಾಡಲು ವ್ಯವಸ್ಥೆ ರೂಪಿಸಬೇಕು, ತಟ್ಟೆ ಬಾರಿಸಲು ಹೇಳುವುದಲ್ಲ: ನಿಜಗುಣಾನಂದ ಸ್ವಾಮೀಜಿ

ಬೆಳಗಾವಿ, ಜು.13: ರೋಗದ ವಿರುದ್ಧ ಹೋರಾಡಲು ವ್ಯವಸ್ಥೆ ರೂಪಿಸಬೇಕೇ ಹೊರತು, ಕೈಗೆ ತಟ್ಟೆ ಕೊಟ್ಟು ಬಾರಿಸಿ ಎಂದು ಹೇಳುವುದಲ್ಲ ಎಂದು ಬೈಲೂರು ನಿಷ್ಕಲ್ಮಶ ಮಠದ ನಿಜಗುಣಾನಂದ ಸ್ವಾಮೀಜಿ ಹೇಳಿದರು.

ಸೋಮವಾರ ಇಲ್ಲಿನ ಸದಾಶಿವ ನಗರದ ಸ್ಮಶಾನದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ನೂತನ ಕಾರು ಚಾಲನೆ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರೋಗದ ವಿರುದ್ಧ ಹೋರಾಟಕ್ಕೆ ವ್ಯವಸ್ಥೆ ರೂಪಿಸಬೇಕಿತ್ತು. ಆದರೆ, ಕೈಗೆ ತಟ್ಟೆ ನೀಡಿ ಬಾರಿಸಿ ಎಂದರು. ಇಡೀ ದೇಶವೆ ತಟ್ಟೆಯನ್ನು ಬಾರಿಸಿತು. ಇದಕ್ಕೆ ಕೆಲ ಸ್ವಾಮೀಜಿಗಳು ಕೈಜೋಡಿಸಿದರು. ಅಲ್ಲದೆ, ಜನರಿಗೆ ವಿಜ್ಞಾನ-ತಂತ್ರಜ್ಞಾನ ಅರಿವನ್ನು ಕೊಡಬೇಕಿದ್ದ ಇಂದಿನ ಸಮಾಜದಲ್ಲಿ ತಟ್ಟೆ ಬಾರಿಸಿ ಎಂದರೆ ಹೇಗೆ ಎಂದು ಖಾರವಾಗಿ ಪ್ರಶ್ನಿಸಿದರು.

ದೇಶದ ಯುವಕರ ಕೈಯಲ್ಲಿ ಧರ್ಮದ ಧ್ವಜವನ್ನು ನೀಡಿ ದ್ವೇಷವನ್ನು ಬೆಳೆಸುವ ಬದಲಿಗೆ ಕಾಯಕದ ಧ್ವಜವನ್ನು ನೀಡಬೇಕು ಎಂದ ಅವರು, ಇಂದು ದೇಶದಲ್ಲಿ ಶಬ್ದ ಆಳುತ್ತಿದೆ. ಅದನ್ನು ಆಳುತ್ತಿರೋರು ಪೂಜಾರಿಗಳು, ಪಂಚಾಂಗದವರು. ಇವರೆಲ್ಲರೂ ಶಬ್ದದ ಮೇಲೆ ಜಗತ್ತನ್ನು ಕಟ್ಟುತ್ತಾರೆ ಎಂದರು.

ಜಗತ್ತಿನ ಕಷ್ಟಕ್ಕೆ ದೇವರು ಪರಿಹಾರವಲ್ಲ. ಪರಿಹಾರ ಆಗಿದ್ದರೆ, ಭೂಮಿಯಲ್ಲಿ ಯಾರಿಗೂ ಕಷ್ಟವೇ ಇರುತ್ತಿಲ್ಲ. ಆದರೆ, ನಮ್ಮ ಕಷ್ಟಕ್ಕೆ ಬುದ್ಧಿಮತ್ತೆ, ಅರಿವೇ ಪರಿಹಾರ ಎಂಬುದನ್ನು ಬುದ್ಧ, ಬಸವ ಹಾಗೂ ಅಂಬೇಡ್ಕರ್ ಸಮಾಜದಲ್ಲಿ ತಮ್ಮ ವಿಚಾರಗಳನ್ನು ಮಂಡಿಸಿದ್ದಾರೆ. ಭಯ, ಭಕ್ತಿ ಹಾಗೂ ಬದುಕಬೇಕೆಂಬ ನಿಮ್ಮೆಲ್ಲರ ಆಸೆಗಳನ್ನೇ ನಮ್ಮಂಥ ಸ್ವಾಮೀಜಿಗಳು ದುರುಪಯೋಗಪಡಿಸಿಕೊಳ್ಳುತ್ತಾರೆ ಎಂದು ಹೇಳಿದರು.

ದೇಶದ ಜನರಲ್ಲಿ ಇಂದಿನ ಆಧುನಿಕತೆಯ ಯುಗದಲ್ಲಿಯೂ ಕೆಳಮಟ್ಟದ ವಿಚಾರಧಾರೆಗಳಿವೆ. ಹೀಗಾಗಿ, ಸಮಾಜದಲ್ಲಿ ಇಂದು ಕೂಡ ಅಂಧಶ್ರದ್ಧೆ, ಕಂದಾಚಾರ ಹಾಗೂ ಮೂಢನಂಬಿಕೆಗಳು ಜನರಲ್ಲಿ ನೆಲೆಯೂರಿವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ವಿವಿಧ ಮಠಗಳ ಸ್ವಾಮೀಜಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X