Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಗರಾಭಿವೃಧ್ದಿ ಕಾಮಗಾರಿಗಳನ್ನು...

ನಗರಾಭಿವೃಧ್ದಿ ಕಾಮಗಾರಿಗಳನ್ನು ಅವಧಿಯೊಳಗೆ ಮುಕ್ತಾಯಗೊಳಿಸಿ: ಸಚಿವ ಬಸವರಾಜ್

ವಾರ್ತಾಭಾರತಿವಾರ್ತಾಭಾರತಿ13 July 2020 10:33 PM IST
share
ನಗರಾಭಿವೃಧ್ದಿ ಕಾಮಗಾರಿಗಳನ್ನು ಅವಧಿಯೊಳಗೆ ಮುಕ್ತಾಯಗೊಳಿಸಿ: ಸಚಿವ ಬಸವರಾಜ್

ಉಡುಪಿ, ಜು.13: ಜಿಲ್ಲೆಯಲ್ಲಿ ನಗರಾಭಿವೃದ್ದಿ ಇಲಾಖೆಯ ಮೂಲಕ ಕೈಗೊಂಡಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಮುಕ್ತಾಯಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಿ. ಕಾಮಗಾರಿಗಳ ವಿಳಂಬಕ್ಕೆ ಆಸ್ಪದ ನೀಡಬೇಡಿ ರಾಜ್ಯದ ನಗರಾಭಿವೃದ್ದಿ ಸಚಿವ ಬಿ.ಎ.ಬಸವರಾಜ್ ಸೂಚಿಸಿದ್ದಾರೆ.

ಸೋಮವಾರ ಮಣಿಪಾಲದಲ್ಲಿರುವ ಉಡುಪಿ ಜಿಪಂ ಸಭಾಂಗಣದಲ್ಲಿ ಉಡುಪಿ ನಗರಾಭಿವೃಧ್ದಿ ಪ್ರಾಧಿಕಾರ ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಭಿವೃದ್ದಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು. ಕುಂದಾಪುರ ಪಟ್ಟಣದ ಒಳಚರಂಡಿ ಯೋಜನೆ 2017ಕ್ಕೆ ಮುಕ್ತಾಯ ಗೊಳ್ಳಬೇಕಾಗಿತ್ತು. ಆದರೆ ಈವರೆಗೆ ಮುಕ್ತಾಯಗೊಳ್ಳದ ಕುರಿತು ಅಸಮಧಾನ ವ್ಯಕ್ತಪಡಿಸಿದ ಸಚಿವರು, ಕಾರ್ಕಳ ಪಟ್ಟಣದ ಒಳಚರಂಡಿ ಯೋಜನೆಯನ್ನು ಶೀಘ್ರದಲ್ಲಿ ಮುಗಿಸುವಂತೆ ತಿಳಿಸಿದರು. ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಒಳಚರಂಡಿ ಯೋಜನೆಗೆ ವಿಸ್ತೃತ ಹೊಸ ಯೋಜನಾ ವರದಿ ಸಿದ್ದಪಡಿಸಿ ನೀಡುವಂತೆ ಸೂಚಿಸಿದರು.

 ಉಡುಪಿ ನಗರಾಭಿವೃಧ್ದಿ ಪ್ರಾಧಿಕಾರದ ವತಿಯಿಂದ ವ್ಯವಸ್ಥಿತ ಲೇ ಔಟ್ ನಿರ್ಮಾಣ ಮಾಡುವಂತೆ ಸೂಚಿಸಿದ ಸಚಿವರು, ಹೊಸ ಯೋಜನೆಯಂತೆ ಖಾಸಗಿಯವರಿಂದ ಜಮೀನು ಪಡೆದು 50-50 ಅನುಪಾತದಲ್ಲಿ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒಳಗೊಂಡ ಲೇ ಔಟ್ ಅಭಿವೃಧ್ದಿ ಪಡಿಸುವಂತೆ ಸೂಚಿಸಿದರು.

 ಉಡುಪಿ ನಗರಾಭಿವೃಧ್ದಿ ಪ್ರಾಧಿಕಾರ 11 ಕೋಟಿ ರೂ ಕೆರೆ ಅಭಿವೃದ್ದಿ ಶುಲ್ಕ ಸಂಗ್ರಹಿಸಿದ್ದು, ಈಗಾಗಲೇ 5 ಕೋಟಿ ವೆಚ್ಚದಲ್ಲಿ 19 ಕೆರೆಗಳ ಅಭಿವೃಧ್ದಿಗೆ ಕ್ರಮಕೈಗೊಂಡಿದೆ. 5 ಕೋಟಿ ರೂ ಗಳ ಕಾಮಗಾರಿಗೆ ಯೋಜನಾ ವರದಿ ಸಿದ್ದಪಡಿಸಿ ಸಲ್ಲಿಸಲಾಗಿದೆ ಎಂದು ಪ್ರಾಧಿಕಾರದ ಪ್ರಭಾರ ಆಯುಕ್ತ ರಾಜು ತಿಳಿಸಿದರು.

ಕ್ರಿಯಾ ಯೋಜನೆ ರೂಪಿಸುವಾಗ ಸ್ಥಳೀಯ ಶಾಸಕರ ಸಲಹೆಗಳಿಗೆ ಆದ್ಯತೆ ನೀಡುವಂತೆ ತಿಳಿಸಿದ ಸಚಿವರು, ಕೆರೆ ಅಭಿವೃದ್ದಿಗೆ ಅನುಮತಿ ನೀಡುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೇ ನೀಡುವ ಬಗ್ಗೆ ಚಿಂತನೆ ನಡೆದಿದೆ ಎಂದರು.

ನಗರಾಭಿವೃದ್ದಿ ಇಲಾಖೆ ಕಾಮಗಾರಿಗಳಲ್ಲಿ ಗುಣಮಟ್ಟಕ್ಕೆ ಆದ್ಯತೆ ನೀಡುವಂತೆ ಸೂಚಿಸಿದ ಸಚಿವರು, ಕೊಲ್ಲೂರಿನಲ್ಲಿ ನಿರ್ಮಾಣ ಕಾಮಗಾರಿ ಪೂರ್ಣ ಗೊಂಡಿರುವ ಒಳಚರಂಡಿ ಮತ್ತು ಕುಡಿಯುವ ನೀರು ಕಾಮಗಾರಿಗಳ ಉದ್ಘಾಟನೆಗೆ ದಿನಾಂಕ ನಿಗದಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಶಾಸಕ ರಘುಪತಿ ಭಟ್, ಲಾಲಾಜಿ ಮೆಂಡನ್, ಕರಾವಳಿ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲಾ ಪಂಚಾಯತ್ ಸಿಇಓ ಪ್ರೀತಿ ಗಹ್ಲೋತ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X