ಬೈಂದೂರು: ಬೈಕ್ ಢಿಕ್ಕಿಯಾಗಿ ಪಾದಾಚಾರಿ ಮೃತ್ಯು
ಬೈಂದೂರು, ಜು.14: ಶಿರೂರು ಪ್ರಭು ಟ್ರೇಡರ್ಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜು.13ರಂದು ಬೈಕ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಕಂಡ್ಲೂರು ನಿವಾಸಿ ಬಿ.ಎಂ.ಇಕ್ಬಾಲ್ ಎಂದು ಗುರುತಿಸಲಾಗಿದೆ. ಮಧ್ಯಾಹ್ನ ವೇಳೆ ಶಿರೂರು ಕೇಳಪೆಟೆ ಕಡೆಯಿಂದ ಶಿರೂರು ಮಾರ್ಕೇಟ್ ಕಡೆಗೆ ಹೋಗುತ್ತಿದ್ದ ಬೈಕ್, ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಇಕ್ಬಾಲ್ ಅವರಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯ ಗೊಂಡ ಇಕ್ಬಾಲ್ ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story